25.9 C
Bengaluru
Wednesday, January 22, 2020

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಹಿರೇಕೆರೂರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನ್ನ ಬೆನ್ನಿಗೆ ಸದಾ ಬೆಂಗಾವಲಿನಂತೆ ನಿಂತು, ಬಹುದೊಡ್ಡ ತ್ಯಾಗ ಮಾಡಿದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಹಾಗೂ ನಾನು ಜೋಡೆತ್ತುಗಳಂತೆ ದುಡಿದು ಪ್ರೀತಿ, ವಿಶ್ವಾಸ, ಸಹಕಾರ ಹಾಗೂ ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿ ಪಡಿಸುತ್ತೇವೆ ಎಂದು ಶಾಸಕ ಬಿ.ಸಿ. ಪಾಟೀಲ ಹೇಳಿದರು.

ತಾಲೂಕಿನ ಬಾಳಂಬೀಡ ಗ್ರಾಮದ ಅವರ ನಿವಾಸದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳವಾರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಅನರ್ಹ ಎಂದು ಹೇಳಿದವರಿಗೆ, ಇಲ್ಲಿನ ಜನತೆ ಆಶೀರ್ವಾದ ಮಾಡುವ ಮೂಲಕ ನನ್ನನ್ನು ಶಾಸಕನನ್ನಾಗಿಸಿ ಅರ್ಹರನ್ನಾಗಿಸಿ ತಕ್ಕ ಉತ್ತರ ನೀಡಿದ್ದಾರೆ. ಅಭಿವೃದ್ಧಿ ಮಾಡಿದವರನ್ನು ಎಂದಿಗೂ ಮತದಾರರು ಕೈಬಿಡುವುದಿಲ್ಲ, ಈ ಮಣ್ಣಿನ ಋಣ ಎಷ್ಟು ತೀರಿಸಿದರೂ ಸಾಲದು. ತಾಯಿ ಶ್ರೀ ದುರ್ಗಾದೇವಿಯ ಆಶೀರ್ವಾದದಂತೆ ಹಿರೇಕೆರೂರ, ರಟ್ಟೀಹಳ್ಳಿ ತಾಲೂಕಿನ ಸವಾಂಗೀಣ ಅಭಿವೃದ್ಧಿಗೆ ದಿನದ 24 ಗಂಟೆಯೂ ಬದ್ಧನಾಗಿದ್ದೇನೆ ಎಂದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಂದುಧರ ಹಳಕಟ್ಟಿ ಮಾತನಾಡಿ, ಈಗ ಉಪಚುನಾವಣೆಯಲ್ಲಿ ಆಯ್ಕೆಯಾಗಿ ಶಾಸಕರಾಗಿರುವ ಪಾಟೀಲರು ತಮ್ಮ ವಿಧಾನಸಭೆ ಕ್ಷೇತ್ರವನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು. ನೀರಾವರಿ, ಉದ್ಯೋಗ, ವ್ಯಾಪಾರ, ಪ್ರವಾಸೋದ್ಯಮ, ಕೈಗಾರಿಕೆ ಸ್ಥಾಪನೆ ಮಾಡಬೇಕು. ಈ ಕ್ಷೇತ್ರ ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ನೀರಾವರಿ, ಕೈಗಾರಿಕೆ ಸ್ಥಾಪನೆ, ವ್ಯಾಪಾರ ವಹಿವಾಟು, ಉದ್ಯೋಗ ಸೃಷ್ಟಿ, ರಸ್ತೆ ಅಭಿವೃದ್ಧಿ, ಸರ್ವಜ್ಞ ಪ್ರಾಧಿಕಾರ, ರಟ್ಟೀಹಳ್ಳಿ ತಾಲೂಕು ಕೇಂದ್ರ ಸೇರಿ ಇನ್ನೂ ಅನೇಕ ಜ್ವಲಂತ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ. ಹೀಗಾಗಿ ಮತದಾರರು ವಿಶ್ವಾಸವಿಟ್ಟು ನಿಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಸೂಕ್ತವಾಗುವ ಮಂತ್ರಿ ಹುದ್ದೆ ಪಡೆದು ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಮಾದರಿ ತಾಲೂಕನ್ನಾಗಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಮು ಮುದಿಗೌಡ್ರ, ಪತ್ರಕರ್ತರಾದ ಪ್ರವೀಣಗೌಡ ಗೌಡರ, ವಿಜಯಕುಮಾರ ಮುದಿಗೌಡ್ರ, ಸತೀಶ ಆರೀಕಟ್ಟಿ, ಪಪಂ ಸದಸ್ಯ ಮಹೇಂದ್ರ ಬಡಳ್ಳಿ, ಡಿವೈಎಸ್​ಪಿ ಟಿ.ವಿ. ಸುರೇಶ, ಸಿಪಿಐ ಮಂಜುನಾಥ ಪಂಡಿತ್, ಇತರರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...