16 C
Bangalore
Thursday, December 12, 2019

ಕ್ಷೇತ್ರ ಮರೆತ ಸಚಿವ ಶಂಕರ!

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ರಾಣೆಬೆನ್ನೂರ: ವಿಧಾನಸಭೆ ಚುನಾವಣೆಯಲ್ಲಿ ರಾಣೆಬೆನ್ನೂರ ಕ್ಷೇತ್ರದಿಂದ ಆರ್. ಶಂಕರ ಆಯ್ಕೆಯಾಗಿ ಸಚಿವ ಸ್ಥಾನವನ್ನೂ ಅಲಂಕರಿಸಿದ್ದಾರೆ. ಆದರೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಸಚಿವರ ಕಾರ್ಯ ವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕೆಪಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಆರ್. ಶಂಕರ ಅವರಿಗೆ ಪ್ರಥಮ ಯತ್ನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದ ಅರಣ್ಯ ಮತ್ತು ಪರಿಸರ ಖಾತೆ ಒಲಿದು ಬಂದಿದೆ. ಸಚಿವ ಸ್ಥಾನ ದೊರೆತಿದ್ದರಿಂದ ಕ್ಷೇತ್ರದ ಜನ ಹರ್ಷ ವ್ಯಕ್ತಪಡಿಸಿದ್ದರು.

ಟಾಸ್ಕ್ ಫೋರ್ಸ್ ಸಭೆ ನಡೆದಿಲ್ಲ: 

ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೊಷಿಸಿದೆ. ಜತೆಗೆ ಜನ-ಜಾನುವಾರುಗಳಿಗೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ತಾಲೂಕಿನ 108 ಗ್ರಾಮಗಳ ಪೈಕಿ 76 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಖೇನ ನೀರು ಪೂರೈಸಲಾಗುತ್ತಿದೆ. ಉಳಿದಂತೆ ತುರ್ತು ಅಗತ್ಯವಿರುವ ಗ್ರಾಮಗಳಿಗೆ ನೀರು ಪೂರೈಸಲು ಸರ್ಕಾರ ಎನ್​ಆರ್​ಡಿಡಬ್ಲು್ಯಪಿ ಟಾಸ್ಕ್ ಫೋರ್ಸ್ ಅಡಿ 50 ಲಕ್ಷ ರೂ. ಅನುದಾನ ಪೈಕಿ ಮೊದಲ ಹಂತವಾಗಿ 25 ಲಕ್ಷ ರೂ. ಬಿಡುಗಡೆ ಮಾಡಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಬೇಕಿದ್ದು, ಈವರೆಗೂ ಶಾಸಕರು ಸಭೆ ನಡೆಸದಿರುವುದು ರೈತ ಮುಖಂಡರ ಬೇಸರಕ್ಕೆ ಕಾರಣವಾಗಿದೆ.

ಅಭಿವೃದ್ಧಿಗೆ ಹಿನ್ನಡೆ:

ಚುನಾವಣೆ ಪ್ರಣಾಳಿಕೆಯಲ್ಲಿ ಆರ್. ಶಂಕರ ಅವರು ಹಲವು ಆಶ್ವಾಸನೆಗಳನ್ನು ನೀಡಿದ್ದರು. ತಾಲೂಕಿನಲ್ಲಿ ಮನೆ ಬಾಗಿಲಿಗೆ ಮರಳು ಪೂರೈಕೆ, ಬೆಂಗಳೂರು ಮಾದರಿಯಲ್ಲಿ ಅಭಿವೃದ್ಧಿ ಸೇರಿ ಹತ್ತಾರು ಭರವಸೆಗಳನ್ನು ಜನರ ಮುಂದಿಟ್ಟಿದ್ದರು. ಆದರೆ, ಸಚಿವ ಸ್ಥಾನ ಅಲಂಕರಿಸಿದ ತರುವಾಯ ಕ್ಷೇತ್ರದತ್ತ ಗಮನ ಕೊಡುತ್ತಿಲ್ಲ. ಸಚಿವರ ತವರಾದ ಬೆಂಗಳೂರಿನತ್ತವೇ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿರುವುದು ಕ್ಷೇತ್ರದತ್ತ ಗಮನ ನೀಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.

ಇತ್ತೀಚೆಗೆ ತಾಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಬೆಳಗ್ಗೆ 11ಕ್ಕೆ ಆಗಮಿಸಿದ್ದರು. ಆದರೆ, ಸಚಿವರು ಮಾತ್ರ ಸಂಜೆ 4ರ ಸುಮಾರಿಗೆ ಆಗಮಿಸಿ, ಕಡತಗಳ ವಿಲೇವಾರಿ ಮತ್ತು ವಿವಿಧ ಇಲಾಖೆಯ ಅಭಿವೃದ್ಧಿ ಕುರಿತು ಮಾಹಿತಿ ನೀಡಲು ತಮ್ಮ ನಿವಾಸಕ್ಕೆ ಆಗಮಿಸುವಂತೆ ತಿಳಿಸಿದ್ದರು ಎಂಬುದು ಗಮನಾರ್ಹ. ನಗರದ ತಾಪಂ ಸಭಾಂಗಣದಲ್ಲಿ ಶಾಸಕರ ಜನಸಂಪರ್ಕ ಕಚೇರಿ ಇದ್ದರೂ ಪ್ರಯೋಜನಕ್ಕೆ ಬಾರದಂತಾಗಿದೆ. ಒಮ್ಮೆಯೂ ಸಾರ್ವಜನಿಕರ ಅಹವಾಲನ್ನು ಜನಸಂಪರ್ಕ ಕಚೇರಿಯಲ್ಲಿ ಸ್ವೀಕರಿಸಿಲ್ಲ ಎಂಬ ಅಪವಾದವೂ ಸಚಿವರ ಮೇಲಿದೆ. ಜತೆಗೆ ಸುಮಾರು ಒಂದೂವರೆ ತಿಂಗಳಿನಿಂದ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿಲ್ಲ.

ಯಾವ ಇಲಾಖೆಗೂ ಭೇಟಿ ನೀಡಿಲ್ಲ!

ಆರ್. ಶಂಕರ ಅವರು ಇದುವರೆಗೂ ಯಾವುದೇ ಇಲಾಖೆಗೆ ಭೇಟಿ ನೀಡಿಲ್ಲ. ನಗರ ವ್ಯಾಪ್ತಿಯಲ್ಲಿ ಅಂದಾಜು 32 ಕಚೇರಿಗಳಿವೆ. ಕ್ಷೇತ್ರದಲ್ಲಿ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೂ ಸಂಬಂಧವೇ ಇಲ್ಲವೆಂಬಂತೆ ಗೋಚರಿಸುತ್ತಿದೆ.

 

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...