ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಪ್ರಯತ್ನ

blank

ಚಿತ್ರದುರ್ಗ: ಕ್ಷೇತ್ರದ ಎಲ್ಲ ಹಳ್ಳಿಗಳ ಅಭಿವೃದ್ಧಿಗೆ ನಿರ್ವಂಚನೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ. ಚಂದ್ರಪ್ಪ ಹೇಳಿದರು. ಹೊಳಲ್ಕೆರೆ ತಾಲೂಕು ತಣಿಗೆಹಳ್ಳಿಯಲ್ಲಿ ಶನಿವಾರ 3 ಕೋಟಿ ರೂ. ವೆಚ್ಚದ ನೂತನ ಸಿ.ಸಿ. ರಸ್ತೆ ಕಾಮಗಾರಿ, 1.50 ಕೋಟಿ ರೂ. ವೆಚ್ಚದ ಚೆಕ್‌ಡ್ಯಾಮ್ ನಿರ್ಮಾಣ ಮತ್ತು ಇಂಗುಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಅಧಿಕಾರ ಶಾಶ್ವ ತವಲ್ಲ, ಇರುವಷ್ಟು ದಿನ ಒಳ್ಳೆಯ ಕೆಲಸ ಮಾಡಬೇಕೆಂಬ ಬದ್ದತೆಯುಳ್ಳ ರಾಜಕಾರಣಿ ನಾನು,ಚುನಾವಣೆಯಲ್ಲಿ ಯಾರಿಗೆ ಮತ ಕೊಟ್ಟರೆ ಅಭಿವೃದ್ಧಿ ಸಾಧ್ಯವೆಂಬುದನ್ನು ಜನ ಅರ್ಥಮಾಡಿಕೊಳ್ಳ ಬೇಕು ಎಂದರು.
ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಸಿದ್ದೇಶ್, ಜಿಪಂ ಮಾಜಿ ಸದಸ್ಯ ತಿಪ್ಪೇಶ್, ಬಿ. ದುರ್ಗ ಗ್ರಾಪಂ ಉಪಾಧ್ಯಕ್ಷ ಲೋಕೇಶಪ್ಪ, ಮಾಜಿ ಅಧ್ಯಕ್ಷ ರಾಮಪ್ಪ, ಸದಸ್ಯರಾದ ಗೋವಿಂದನಾಯ್ಕ, ಮಂಜಿಬಾಯಿ ಸುರೇಶ್, ಸುಧಾ ಚಂದ್ರಶೇಖರ್, ಕರಿಯಪ್ಪ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ದಿಗಂಬರ್ ಕಾಂಬ್ಳೆ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ಗಳಾದ ನಾಗರಾಜ್, ನವೀನ್ ಗ್ರಾಮದ ಮುಖಂಡರು ಇದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…