ಕ್ಷೇತ್ರದ ಪ್ರಗತಿಗೆ ಹೆಚ್ಚಿನ ಅನುದಾನ ಮಂಜೂರು

blank

ರಾಮದುರ್ಗ: ಮತಕ್ಷೇತ್ರದ ಅಭಿವೃದ್ಧಿಗೆ ಹಿಂದಿಗಿಂತಲೂ ಹೆಚ್ಚಿನ ಮೊತ್ತದ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದೇನೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ತಾಲೂಕಿನ ಚಿಂಚಖಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ, 33 ಲಕ್ಷ ರೂ. ವೆಚ್ಚದಲ್ಲಿ ಗೊಣ್ಣಾಗರ ಗ್ರಾಮದಲ್ಲಿರುವ ಸುರೇಬಾನ ಮುಖ್ಯ ರಸ್ತೆಯಿಂದ ಶಬರಿಕೊಳ್ಳ ಸೇರುವ ರಸ್ತೆ ಸುಧಾರಣೆ, ಅವರಾದಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದ ಕಿರು ಸೇತುವೆ ನಿರ್ಮಾಣ, 50 ಲಕ್ಷ ರೂ. ವೆಚ್ಚದಲ್ಲಿ ಅವರಾದಿ ಗ್ರಾಮದಿಂದ ರಾಮದುರ್ಗ ಕೊಣ್ಣೂರ ಮುಖ್ಯ ರಸ್ತೆಯವರೆಗೆ ರಸ್ತೆ ಸುಧಾರಣೆ, 20 ಲಕ್ಷ ರೂ. ವೆಚ್ಚದಲ್ಲಿ ಸಂಗಳ ಗ್ರಾಮದಿಂದ ರಾಮದುರ್ಗ ಕೊಣ್ಣೂರಗೆ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆ, ಶಿವಪೇಠೆಯಲ್ಲಿ 90 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗೊಣ್ಣಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಯಪ್ಪ ಕೇರಿ, ಅವರಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ರೋಣದ, ಮುಖಂಡರಾದ ಮಾರುತಿ ತಳವಾರ, ಚಿದಾನಂದ ಕದಂ, ಕುಮಾರ ಉಪ್ಪಿನ, ಗದಿಗೆಪ್ಪ
ಹುಳ್ಳೂರ, ಮಹಾಂತೇಶ ಕೋಟಗಿ, ಬಸಪ್ಪ ಬಾಡವಾರ, ಮಲ್ಲನಗೌಡ ಪಾಟೀಲ, ಚನ್ನಬಸು ಕುಲಕರ್ಣಿ, ಸಿದ್ದಪ್ಪ ಯಡಹಳ್ಳಿ, ಬಸಣ್ಣ ಅಂಗಡಿ, ಸಿದ್ದಪ್ಪ ಬಣಗಾರ, ಸಿದ್ದಪ್ಪ ಕುದರಿ, ಶಿವಾನಂದ ಗುರುಬಸನ್ನವರ ಇತರರಿದ್ದರು.

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…