ಖಾಲಿ ಹುದ್ದೆ ಭರ್ತಿಗೆ ಹೋರಾಟ ನಡೆಸುವೆ

blank

ಬಳ್ಳಾರಿ : ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದರೆ, ಹೈದರ್‌ಬಾದ್ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಹೋರಾಟ ನಡೆಸುವೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಭರವಸೆ ನೀಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಹೈದರಬಾದ್ ಕರ್ನಾಟಕದ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಹೈದರ್‌ಬಾದ್ ಕರ್ನಾಟಕಕ್ಕೆ 371ಜೆ ಕಾಲಂ ಅನುಷ್ಠಾನಕ್ಕೆ ಒತ್ತಾಯ ಮಾಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಮಟ್ಟ ಕುಸಿಯುತ್ತಿದೆ. ಆದ್ದರಿಂದ, ಶಿಕ್ಷಣ ಮಟ್ಟ ಹೆಚ್ಚಿಸಲು ನಿರಂತರ ಪ್ರಯತ್ನಿಸುವೆ. ಯುವಕರ ಕೈಗೆ ಕೆಲಸ ಹಾಗೂ ಕಲ್ಯಾಣ ಕರ್ನಾಟಕದ ಯುವಕರಿಗೆ ಉದ್ಯೋಗದಲ್ಲಿ ಮೀಸಲಾತಿ ಜಾರಿಗಾಗಿ ಸದನದಲ್ಲಿ ಧ್ವನಿ ಎತ್ತಿ , ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವೆ. ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹಿನ್ನಡೆಯಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಅದ್ಯತೆ ನೀಡಲಾಗುವುದು. ಈ ಬಾರಿ ಜೆಡಿಎಸ್ ಪಕ್ಷದ ಜತೆಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಚುನಾವಣೆಗಾಗಿ ಸನ್ನದ್ಧರಾಗಿದ್ದಾರೆ. ಈಗಾಗಲೇ 2012 ರಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿರುವೆ. ಪಕ್ಷದ ವರಿಷ್ಠರು ಜನಪರ ಕೆಲಸಗಳನ್ನು ಗಮನಿಸಿ ಮತ್ತೋಮ್ಮೆ ಅವಕಾಶ ನೀಡಿದ್ದಾರೆ. ಪಕ್ಷದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ ಕುಮಾರ ಮೋಕಾ, ಜಿಡಿಎಸ್ ಜಿಲ್ಲಾಧ್ಯಕ್ಷ ಮೀನಾಳ್ಳಿ ತಾಯಣ್ಣ, ಪಕ್ಷದ ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ಮುರಾರಿ ಗೌಡ, ಗುರುಲಿಂಗನಗೌಡ, ಗುತ್ತಿಗೆನೂರು ವಿರೂಪಾಕ್ಷ ಗೌಡ, ವೀರಶೇಖರರೆಡ್ಡಿ ಇದ್ದರು.

Share This Article

ಶ್ರಾವಣ ಮಾಸದಲ್ಲಿ ಕ್ಷೌರ ಮಾಡಿಸಬಾರದು.. ಇದರ ಹಿಂದಿದೆ ವೈಜ್ಞಾನಿಕ ಕಾರಣ..! Shravan

Shravan: ಭಾರತೀಯ ಸಂಸ್ಕೃತಿಯಲ್ಲಿ, ಸಾವನ್ ಮಾಸವನ್ನು ಶಿವನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕವಾಗಿ, ಜನರು…

ಮಳೆಗಾದಲ್ಲಿ ಮೊಸರು ತಿನ್ನಬೇಕೇ? ಬೇಡವೇ? ಇಲ್ಲಿದೆ ಆರೋಗ್ಯಕರ ಮಾಹಿತಿ… curd

ಬೆಂಗಳೂರು: ( curd )  ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಮಳೆಗಾಲದಲ್ಲಿ…