ಮಸ್ಕಿ: ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಖಾಸಗಿ ಶೆಡ್ ತೆರವಿಗೆ ಆಗ್ರಹಿಸಿ ಪಟ್ಟಣದ ಪುರಸಭೆ ಮುಂದೆ ಸಾರ್ವಜನಿಕ ಹೋರಾಟ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ಪುರಸಭೆ ಮಾಜಿ ಸದಸ್ಯ ಎಂ.ಅಮರೇಶ ಮಾತನಾಡಿ, ಪಟ್ಟಣದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಪರಡಿ ನಂ.17 ರಲ್ಲಿ ಖಾಸಗಿ ವ್ಯಕ್ತಿ ಶೆಡ್ ಹಾಕಿದ್ದು ತೆರವುಗೊಳಿಸಬೇಕು. ಪರಡಿ ನಂ 17 ಸರ್ಕಾರಿ ಜಾಗವೆಂದು ಪಹಣಿಯಲ್ಲಿ ನಮೂದಾಗಿದ್ದು, ಸರ್ಕಾರದ ಜಾಗವನ್ನು ಖಾಸಗಿ ವ್ಯಕ್ತಿ ಕಬಳಿಸುವ ಸಂಚು ಮಾಡುತ್ತಿದ್ದಾರೆ. ಪುರಸಭೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಖಾಸಗಿ ವ್ಯಕ್ತಿಯ ಕಾಮಗಾರಿ ತಡೆಯಬೇಕು ಎಂದು ಒತ್ತಾಯಿಸಿದರು.