More

  ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

  ವಿಜಯವಾಣಿ ಸುದ್ದಿಜಾಲ ಮೈಸೂರು
  ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಮೈಸೂರು ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.


  ಕರ್ನಾಟಕದಿಂದ ರಾಷ್ಟ್ರೀಯ ಸೇವಾ ಯೋಜನೆಯ 10 ಸ್ವಯಂ ಸೇವಕಿಯರು ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದು, ಈ ಪೈಕಿ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿಯರಾದ ಮಹಾರಾಣಿ ವಿಜ್ಞಾನ ಕಾಲೇಜಿನ ಸುಸ್ಮಿತ ಹಾಗೂ ಹಾಸನದ ಎ.ವಿ.ಕೆ.ಕಾಲೇಜಿನ ತನುಶ್ರೀ ಕೂಡ ಭಾಗವಹಿಸುತ್ತಿದ್ದಾರೆ.


  ಕರ್ನಾಟಕ ತಂಡವನ್ನು ಮುನ್ನಡೆಸಲು ಮೈಸೂರಿನ ಶೇಷಾದ್ರಿಪುರಂ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಆರ್.ರಾಘವೇಂದ್ರ ಆಯ್ಕೆಯಾಗಿದ್ದು, ಡಿ. 28 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೈಸೂರು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts