20.4 C
Bangalore
Monday, December 9, 2019

ಗಣಿ, ಭೂವಿಜ್ಞಾನ ಇಲಾಖೆ ದಿವ್ಯ ನಿರ್ಲಕ್ಷ್ಯ

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಹಾವೇರಿ: ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಗುತ್ತಲ ಹಾಗೂ ರಾಣೆಬೆನ್ನೂರಿನ ಮರಳು ಬ್ಲಾಕ್​ಗಳಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯನವೇ ಕಾರಣ ಎನ್ನಲಾಗಿದೆ.

ಅಕ್ರಮವಾಗಿ ಮರಳು ಸಾಗಾಟ ಮಾಡುವ ವಾಹನಗಳನ್ನು ಕಂದಾಯ, ಪೊಲೀಸ್, ಅರಣ್ಯ ಇಲಾಖೆ ಸೇರಿ ಯಾರೇ ಹಿಡಿದರೂ ದೂರು ದಾಖಲಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಶಿಫಾರಸು ಮಾಡಬೇಕು. ಅಲ್ಲದೆ, ಬ್ಲಾಕ್​ಗಳಲ್ಲಿ ನಡೆಯುವ ಅಕ್ರಮ ದಂಧೆ, ಪರಿಸರಕ್ಕೆ ಹಾನಿ ಉಂಟು ಮಾಡುವ ರೀತಿಯಲ್ಲಿ ಮರಳು ತೆಗೆಯುವುದು ಸೇರಿ ಯಾವುದೇ ದೂರು ದಾಖಲಾಗಬೇಕಾದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೇ ಬೇಕು.

ಆದರೆ, ಅಕ್ರಮ ಮರಳುಗಾರಿಕೆ ದಂಧೆ ಮಟ್ಟಹಾಕುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಇತರ ಇಲಾಖೆ ಅಧಿಕಾರಿಗಳಿಂದ ಕೇಳಿ ಬರತೊಡಗಿದೆ. ಅಲ್ಲದೆ, ಅಕ್ರಮ ಮರಳುಗಾರಿಕೆ ವಿಚಾರವಾಗಿ ಈವರೆಗೂ ದಾಖಲಾದ ಪ್ರಕರಣಗಳ ತನಿಖೆ, ದೂರುಗಳ ಪರಿಶೀಲನೆ ಸಹ ಗಾಳಿಯಲ್ಲಿ ತೂರಿ ಹೋದಂತಾಗಿವೆ.

ಸುಳ್ಳು ಮಾಹಿತಿ ನೀಡಿದ ಪ್ರಕರಣ: ಕಳೆದ ಜು. 2ರಂದು ಅಂದಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ ಪಾಟೀಲ ಹಾವೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದರು. ಇಲಾಖೆಯ ಹಾವೇರಿ ಅಧಿಕಾರಿ ಪುಷ್ಪಲತಾ ಅವರು ‘ಜಿಲ್ಲೆಯ 17 ಮರಳು ಬ್ಲಾಕ್​ನ ಸ್ಟಾಕ್ ಯಾರ್ಡ್​ಗಳಲ್ಲಿ 1.50 ಲಕ್ಷ ಟನ್ ಮರಳು ದಾಸ್ತಾನಿದೆ ಎಂದು ಮಾಹಿತಿ ನೀಡಿದ್ದರು. ಆದರೆ, 17 ಬ್ಲಾಕ್​ಗಳಲ್ಲಿ ಪುಷ್ಪಲತಾ ಅವರು ಕೊಟ್ಟಿರುವ ಮಾಹಿತಿಗಿಂತ 10 ಪಟ್ಟು ಹೆಚ್ಚು ಮರಳು ಸಂಗ್ರಹವಿದೆ. ಈ ಕುರಿತು ತನಿಖೆ ನಡೆಸುವಂತೆ ಕೊಟ್ರೇಶ ಕುದರಿಹಾಳ ಎಂಬುವರು ಲೋಕಾಯುಕ್ತ ಸಂಸ್ಥೆಗೆ, ಗಣಿ ಇಲಾಖೆ ನಿರ್ದೇಶಕ ಪ್ರಸನ್ನಕುಮಾರ ಹಾಗೂ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಅವರಿಗೆ ದೂರು ನೀಡಿದ್ದರು. ಈ ಕುರಿತ ತನಿಖೆ ಇನ್ನೂ ಬಾಕಿಯಿದೆ.

ವಸೂಲಿಯಾಗದ ದಂಡ: ಜುಲೈ ತಿಂಗಳಿನಲ್ಲಿ ಬೆಂಗಳೂರಿನಿಂದ ಬಂದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ನಿಯಮ ಉಲ್ಲಂಘಿಸಿದ ರಾಣೆಬೆನ್ನೂರ ತಾಲೂಕಿನ ಐರಣಿ, ಮುದೇನೂರ, ಹಿರೇಬಿದರಿ ಸೇರಿ 5 ಬ್ಲಾಕ್​ಗಳಿಗೆ ಒಟ್ಟು 36 ಲಕ್ಷ ರೂ. ದಂಡ ಹಾಕಿದ್ದರು. 2018ರಲ್ಲಿ ನಂ. 6ರ ಬ್ಲಾಕ್​ಗೆ 30,17,500 ರೂ. ನಂ. 7ರ ಬ್ಲಾಕ್​ಗೆ 33,10,500 ರೂ. ನಂ. 8ನೇ ಬ್ಲಾಕ್​ಗೆ 30,21,000 ರೂ. ಹಾಗೂ ಹಿರೇಬಿದರಿ ಬ್ಲಾಕ್​ಗೆ 6,27,810 ರೂ. ದಂಡ ವಿಧಿಸಿದ್ದಾರೆ. ಆದರೆ, ಈವರೆಗೂ ಅವರಿಂದ ಪೂರ್ಣ ಪ್ರಮಾಣದ ದಂಡದ ಹಣ ವಸೂಲಿ ಮಾಡುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ. ದಂಡ ತುಂಬದ ಬ್ಲಾಕ್​ಗಳ ಮಾಲೀಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಇಲಾಖೆಗಿದೆ. ಆದರೆ, ದಂಡ ಹಾಕಿ ಕೈತೊಳೆದುಕೊಳ್ಳುವ ಅಧಿಕಾರಿಗಳು ಅದರ ವಸೂಲಿಗೆ ಮುಂದಾಗುತ್ತಿಲ್ಲ. ಹೀಗಾಗಿ, ಅಧಿಕಾರಿಗಳೇ ಅಕ್ರಮ ಮರಳು ಮಾರಾಟಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆಯೇ ಎಂಬ ಅನುಮಾನ ಮೂಡುವಂತಾಗಿದೆ.

ಅಕ್ರಮ ಮರಳುಗಾರಿಕೆ ತಡೆಯುವ ಸಲುವಾಗಿ ಜಿಲ್ಲೆಯ ನದಿಪಾತ್ರದ ಪ್ರಮುಖ ಗ್ರಾಮಗಳ ಬಳಿ ನಿರ್ವಿುಸಿದ ಚೆಕ್​ಪೋಸ್ಟ್​ಗಳು ಕಿತ್ತು ಹೋಗಿವೆ. ಚೆಕ್​ಪೋಸ್ಟ್ ಬಳಿ ನೇಮಕ ಮಾಡಿದ ಸಿಬ್ಬಂದಿ ಕಾರ್ಯನಿರ್ವಹಣೆಯಲ್ಲಿ ಮಾತ್ರ ಕಾಣಸಿಗುತ್ತಿಲ್ಲ. ಇದೆಲ್ಲವನ್ನು ನೋಡಿದರೆ ಅಧಿಕಾರಿಗಳೇ ಒಂದು ರೀತಿಯಲ್ಲಿ ಅಕ್ರಮ ಮರಳು ದಂಧೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆಯೇ ಎನ್ನುವ ಸಂಶಯ ಮೂಡಿದೆ.

ಇನ್ನೂ ತನಿಖೆಯಲ್ಲೇ ಉಳಿದ ಪ್ರಕರಣ

ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ತುಂಗಭದ್ರಾ ನದಿಪಾತ್ರದಲ್ಲಿ ಮರಳು ತೆಗೆದ ಹಾಗೂ ಸಾರ್ವಜನಿಕರಿಗೆ ಮೋಸ ಮಾಡಿದ ಆರೋಪದಡಿ ಜಿಲ್ಲೆಯ 10 ಮರಳು ಗುತ್ತಿಗೆದಾರರ ಮೇಲೆ ಸೆಪ್ಟೆಂಬರ್ ತಿಂಗಳಲ್ಲಿಯೇ ರಾಣೆಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ಈವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆರೋಪಿಯ ಬಂಧನವಾಗಿಲ್ಲ. ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಗುತ್ತಿಗೆದಾರರ ಪರವಾನಗಿ ರದ್ದುಪಡಿಸುವ ಅಧಿಕಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗಿದೆ. ಆದರೆ, ಇಲಾಖೆ ಅಧಿಕಾರಿಗಳು ಈ ಕುರಿತು ಚಕಾರ ಕೂಡ ಎತ್ತಿಲ್ಲ.

10 ಜನ ಗುತ್ತಿಗೆದಾರರ ಮೇಲೆ ದಾಖಲಾದ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಸೂಕ್ತ ದಾಖಲಾತಿ, ಸಾಕ್ಷ್ಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು.
| ಸುರೇಶ ಸಗರಿ, ರಾಣೆಬೆನ್ನೂರ ಗ್ರಾಮೀಣ ಠಾಣೆ ಸಿಪಿಐ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...