ಗಮಕ ಕಲೆ ರಕ್ಷಣೆಗೆ ಕ್ರಮವಹಿಸಿ

ಹಾಸನ: ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ರಕ್ಷಣೆಯಲ್ಲಿ ಗಮಕ ಕಲೆಯ ಪಾತ್ರ ಅಪಾರವಿದ್ದು, ಅದರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ವಿದ್ವಾನ್ ಅಚ್ಯುತ್ ಅವಧಾನಿ ಹೇಳಿದರು.
ನಗರದ ಸೀತಾರಾಮಾಂಜನೇಯ ದೇವಸ್ಥಾನದ ಸಪ್ತಪದಿ ಸೌದಾಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಥಮ ಯುವ ಗಮಕ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿದರು. 
ಭಾರತೀಯ ಎಲ್ಲ ಕಲಾಪ್ರಕಾರ, ಸಾಹಿತ್ಯದ ಗುರಿ ದೈವತ್ವವೇ ಆಗಿದೆ. ಇಂತಹ ಗಮಕ ಕಲೆಗೆ ಯುವಕರನ್ನು ಆಕರ್ಷಿಸಲು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ನಗರದ ಕಲಾಕ್ಷೇತ್ರದಿಂದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್. ಪ್ರಕಾಶ್ ಗೌಡ ಅವರು ಸೀತಾರಾಮಾಂಜನೇಯ ದೇವಸ್ಥಾನ ಆವರಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಗಮಕ ಸಮ್ಮೇಳನಕ್ಕೆ ಚಾಲನೆ ನೀಡಿದರು.
ವಿದ್ವಾನ್ ಆರ್.ಕೆ. ಪದ್ಮನಾಭ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ, ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಗಣೇಶ್ ಉಡುಪ ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *