ಹೊಸನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವೆ ಅನನ್ಯ ಎಂದು ಸಿಪಿಐ ಗುರಣ್ಣ ಎಸ್.ಹೆಬ್ಬಾಳ ಹೇಳಿದರು.
ಪಟ್ಟಣದ ಶ್ರೀ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮತಿ, ವ್ಯಸನಮುಕ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ದೇಶದ ಬೆಳವಣಿಗೆ ನಿಂತಿದೆ. ಇದೇ ಆಶಯದೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಾಲನೆಗೆ ತಂದ ಗ್ರಾಮಾಭಿವೃದ್ಧಿ ಯೋಜನೆ ಕ್ರಾಂತಿ ಮಾಡಿದೆ ಎಂದು ತಿಳಿಸಿದರು.
ಬಡ ಕುಟುಂಬಗಳು, ಮಹಿಳೆಯರ ಆರ್ಥಿಕ ಸಬಲೀಕರಣ, ಸ್ವಾವಲಂಬಿ ಬದುಕು, ಕೆರೆಗಳ ಅಭಿವೃದ್ಧಿ, ಮದ್ಯವರ್ಜನ ಶಿಬಿರ ಹೀಗೆ ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟು ಯೋಜನೆಗಳನ್ನು ರೂಪಿಸುವ ಮೂಲಕ ಮಾದರಿಯಾಗಿದೆ ಎಂದರು.
ಎನ್.ಆರ್.ದೇವಾಂದ್, ಯೋಜನೆಯ ಜಿಲ್ಲಾ ನಿರ್ದೇಶಕ ಮುರುಳೀಧರ ಶೆಟ್ಟಿ, ಯೋಜನೆ ಒಕ್ಕೂಟದ ಅಧ್ಯಕ್ಷೆ ವಸಂತಾ, ತಾಲೂಕು ಯೋಜನಾಧಿಕಾರಿ ಪ್ರದೀಪ್, ಮೇಲ್ವಿಚಾರಕರಾದ ನಾಗೇಶ್, ಸುಭಾಷ್, ಶಾಂತಕುಮಾರಿ, ನಾರಾಯಣ ಕಾಮತ್, ಯೋಜನೆ ಪ್ರತಿನಿಧಿಗಳು, ವ್ಯಸನಮುಕ್ತರು ಭಾಗವಹಿಸಿದ್ದರು.