ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹಿನಕಲ್ ಪ್ಲೈಓವರ್‌ನಿಂದ ಬೋಗಾದಿ ಕಡೆಗೆ ಹೋಗುವ ರಿಂಗ್‌ರಸ್ತೆಯಲ್ಲಿ ಸಿಸಿಬಿ ಪೊಲೀಸರು ಗಸ್ತಿನಲ್ಲಿದ್ದಾ ಗಾಂಜಾ ಮಾರಲೆತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು 45 ಸಾವಿರ ರೂ. ಮೌಲ್ಯದ 1.11 ಕೆ.ಜಿ ತೂಕದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.