ಗಾಂಧಿಗ್ರಾಮ ಪುರಸ್ಕಾರಕ್ಕೆ ಪೈಪೋಟಿ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಕೋಲಾರ: ಜಿಲ್ಲೆಯ ಐದು ತಾಲೂಕುಗಳಲ್ಲಿ ತಲಾ ಒಂದು ಗ್ರಾಮ ಪಂಚಾಯಿತಿ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಲಿದ್ದು, ಅತಿ ಹೆಚ್ಚು ಅಂಕ ಗಳಿಸಿರುವ 26 ಗ್ರಾಪಂಗಳು ಪೈಪೋಟಿ ನಡೆಸುತ್ತಿವೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2013-14ನೇ ಸಾಲಿನಿಂದ ಉತ್ತಮ ಸಾಧನೆ ಮಾಡಿರುವ ಗ್ರಾಪಂಗಳನ್ನು ಗುರುತಿಸಿ ಪುರಸ್ಕರಿಸುತ್ತಿದ್ದು, ಪ್ರತಿ ತಾಲೂಕಿನ ಒಂದು ಗ್ರಾಪಂಗೆ 5 ಲಕ್ಷ ರೂ.ಗಳ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಪಂಚತಂತ್ರ ತಂತ್ರಾಂಶದ ಮಾನದಂಡ ನಿಗದಿಪಡಿಸಿ ರಾಜ್ಯದ ಎಲ್ಲ ಗ್ರಾಪಂಗಳಿಂದ ಅರ್ಜಿ ಆಹ್ವಾನಿಸಲಾಗುವುದು. ನಿಗದಿಪಡಿಸಿದ 150 ಅಂಕಗಳ ಪ್ರಶ್ನಾವಳಿಗೆ ಉತ್ತರಿಸಿ ಅತಿ ಹೆಚ್ಚು ಅಂಕ ಗಳಿಸುವ ತಾಲೂಕುಗಳಿಂದ ತಲಾ 5 ಗ್ರಾಪಂಗಳ ಸಾಧನೆಯನ್ನು ಜಿಪಂಗಳು ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಕೆಯಾಗುವ ಪ್ರಸ್ತಾವನೆಯನ್ನು ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಪರಿಶೀಲಿಸಿ ತಾಲೂಕಿಗೆ ಒಂದರಂತೆ ಗ್ರಾಪಂಗಳನ್ನು ಪುರಸ್ಕಾರಕ್ಕೆ ಅಂತಿಮಗೊಳಿಸುತ್ತದೆ.

ಮಾನದಂಡ: ಗ್ರಾಪಂಗಳಲ್ಲಿನ ಹಣಕಾಸು ನಿರ್ವಹಣೆ ವಿಭಾಗದಲ್ಲಿ ಸ್ವಂತ ಸಂಪನ್ಮೂಲಗಳ ಕ್ರೋಡೀಕರಣ,14ನೇ ಹಣಕಾಸು ಆಯೋಗದ ಅನುದಾನ ಬಳಕೆ, ಎಸ್ಸಿ, ಎಸ್ಟಿ, ಅಂಗವಿಕಲ, ಕ್ರೀಡಾಚಟುವಟಿಕೆಗೆ ಮೀಸಲಿಟ್ಟ ಅನುದಾನ ಬಳಕೆ, ಜಮಾಬಂದಿ, ನರೇಗಾ, ಅನುಷ್ಠಾನದಲ್ಲಿನ ಸಾಧನೆ ಪರಿಗಣಿಸಲಾಗುತ್ತದೆ.

ಮೂಲಸೌಕರ್ಯ ವಿಭಾಗದಲ್ಲಿ ಕುಡಿಯುವ ನೀರು, ಬೀದಿದೀಪ, ವಸತಿ ಯೋಜನೆ, ನೈರ್ಮಲೀಕರಣ, ತ್ಯಾಜ್ಯ ನಿರ್ವಹಣೆ ಹಾಗೂ ಉತ್ತಮ ಆಡಳಿತ ವಿಭಾಗದಲ್ಲಿ ಗ್ರಾಪಂ ಅಭಿವೃದ್ಧಿ ಯೋಜನೆ, ವಾರ್ಡ್‌ಸಭೆ, ಗ್ರಾಮಸಭೆ, ಪ್ರತಿ ತಿಂಗಳು ಗ್ರಾಪಂ ಸಭೆ ನಡೆಸುವುದು, ಸ್ಥಾಯಿ ಸಮಿತಿ ಸಭೆ, ಸಕಾಲ ಸೇವೆ, ಆರ್‌ಟಿಐನಡಿ ಗ್ರಾಪಂ ಸೇವೆ, ಗ್ರಾಪಂ ವ್ಯಾಪ್ತಿಯ ಆಸ್ತಿ ನಿರ್ವಹಣೆ, ಗ್ರಾಪಂ ಸಿಬ್ಬಂದಿ ವಿಷಯ ನಿರ್ವಹಣೆ, ಗ್ರಾಪಂಗಳಲ್ಲಿ ಜಾರಿಗೊಳಿಸಿರುವ ನಗರದುರಹಿತ ಹಣಕಾಸು ವ್ಯವಹಾರ, ಆನ್‌ಲೈನ್ ಸೇವೆ, ಮನೆಮನೆಗೆ ನಲ್ಲಿ ನೀರು ವ್ಯವಸ್ಥೆ, ಸಾಕ್ಷರತೆ, ಪ್ಲಾಸ್ಟಿಕ್ ನಿಷೇಧ ಹಾಗೂ ಜೀವನ ಮಟ್ಟ ವಿಭಾಗದ ಸಾಧನೆಯನ್ನು ಆಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
26 ಗ್ರಾಪಂಗಳ ಪೈಪೋಟಿ: ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯ 156 ಗ್ರಾಪಂಗಳಲ್ಲಿ ಬಂಗಾರಪೇಟೆಯ 6 ಗ್ರಾಪಂಗಳು ಹಾಗೂ ಕೋಲಾರ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲಿನ ತಲಾ 5 ಗ್ರಾಪಂಗಳು ಅತಿ ಹೆಚ್ಚು ಅಂಕ ಗಳಿಸಿ ಪ್ರಶಸ್ತಿಗೆ ಪೈಪೋಟಿಯಲ್ಲಿದೆ.

ತಾಲೂಕು ವಾರು ವಿವರ: ಬಂಗಾರಪೇಟೆ: ಕಾರಹಳ್ಳಿ, ಪಾರಾಂಡಹಳ್ಳಿ, ಘಟ್ಟಕಾಮದೇನಹಳ್ಳಿ, ವೆಂಗಸಂದ್ರ,ಚಿಕ್ಕಅಂಕಂಡಹಳ್ಳಿ ಹಾಗೂ ಸೂಲಿಕುಂಟೆ ಗ್ರಾಪಂ,ಕೋಲಾರ ತಾಲೂಕಿನ ಬೆಗ್ಲಿಹೊಸಹಳ್ಳಿ, ವೇಮಗಲ್, ನರಸಾಪುರ, ಬೆಳಮಾರನಹಳ್ಳಿ, ದೊಡ್ಡಹಸಾಳ, ಮಾಲೂರು ತಾಲೂಕಿನ ಶಿವಾರಪಟ್ಟಣ, ಕುಡಿಯನೂರು, ಚಿಕ್ಕತಿರುಪತಿ, ಮಾಸ್ತಿ, ಬಾಳಿಗಾನಹಳ್ಳಿ, ಮುಳಬಾಗಿಲು ತಾಲೂಕಿನ ಮುದಿಗೆರೆ ಅಂಗೊಂಡಹಳ್ಳಿ, ಹನುಮನಹಳ್ಳಿ, ಅಗರ,ತಾಯಲೂರು ಹಾಗೂ ಶ್ರೀನಿವಾಸಪುರ ತಾಲೂಕಿನ ಮಾಸ್ತೇನಹಳ್ಳಿ, ರೋಣೂರು, ಹೊದಲಿ, ಕೂರಿಗೆಪಲ್ಲಿ ಮತ್ತು ಗೌನಪಲ್ಲಿ ಗ್ರಾಪಂಗಳು ಅರ್ಹತೆ ಪಡೆದಿವೆ.

ಸೆ. 21ರೊಳಗೆ ವರದಿ: ಪ್ರಶಸ್ತಿಗೆ ಅರ್ಹತೆ ಪಡೆದಿರುವ ಗ್ರಾಪಂಗಳ ಪೈಕಿ ತಾಲೂಕಿಗೆ ಒಂದು ಗ್ರಾಪಂಗಳನ್ನು ಜಿಪಂ ಸಿಇಒಗಳು ಆಯ್ಕೆ ಮಾಡಿ ಸೆ.21ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಆಯ್ಕೆಯಾದ ಗ್ರಾಪಂಗಳಿಗೆ ಅ. 2ರ ಗಾಂಧಿ ಜಯಂತಿಯಂದು ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬೆಗ್ಲಿಹೊಸಹಳ್ಳಿ ಗ್ರಾಪಂ 150 ಅಂಕ ಪಡೆದು ಪ್ರಶಸ್ತಿಗೆ ಅರ್ಹತೆ ಪಡೆದಿದೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ಅರ್ಹತೆ ಪಡೆಯುತ್ತಿದ್ದರೂ ಅಲ್ಪದರಲ್ಲೇ ಪ್ರಶಸ್ತಿ ಕೈತಪ್ಪಿ ಹೋಗುತ್ತಿತ್ತು. ಪ್ರಶಸ್ತಿಗೆ ನಿಗದಿಪಡಿಸಿರುವ ನಾಲ್ಕು ವಿಭಾಗಗಳಲ್ಲೂ ಗ್ರಾಪಂ ಉತ್ತಮ ಸಾಧನೆ ತೋರಿರುವುದರಿಂದ ಈ ಬಾರಿ ಪ್ರಶಸ್ತಿ ಸಿಗುವ ವಿಶ್ವಾಸ ಇದೆ.
ಸಿ.ಆರ್. ಮಾಲಾ ಬಾಲಗೋವಿಂದ, ಅಧ್ಯಕ್ಷೆ, ಬೆಗ್ಲಿಹೊಸಹಳ್ಳಿ ಗ್ರಾಪಂ, ಕೋಲಾರ

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...