ಗಾಂಧಿ, ಶಾಸ್ತ್ರಿ ಭಾರತದ ಅದಮ್ಯ ಚೇತನಗಳು

 

ವಿಜಯವಾಣಿ ಸುದ್ದಿಜಾಲ ಯಾದಗಿರಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಈ ರಾಷ್ಟ್ರದ ಅದಮ್ಯ ಚೇತನಗಳಿದ್ದಂತೆ. ಅವರ ಬದುಕೇ ನಮಗೆ ಮಾರ್ಗದಶರ್ಿಯಾಗಿದೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ಹೇಳಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಯೋಗದಡಿ ಮಂಗಳವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತ್ಯುತ್ಸವ ಉದ್ಘಾಟಿಸಿದ ಅವರು, ಅಹಿಂಸೆ ಮೂಲಕ ಗಾಂಧೀಜಿ ದೇಶಕ್ಕೆ ಸ್ವಾತಂತ್ರೃ ತಂದುಕೊಟ್ಟರೆ, ಲಾಲ್ ಬಹದ್ದೂರ್ ಶಾಸ್ತ್ರಿ ಜೈ ಜವಾನ್, ಜೈ ಕಿಸಾನ್ ಎಂಬ ಐತಿಹಾಸಿಕ ಉದ್ಘೋಷವನ್ನು ಈ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ, ಬೇಟಿ ಬಚಾವೊ ಬೇಟಿ ಪಢಾವೊ, ವೈಯಕ್ತಿಕ ಶೌಚಗೃಹ ನಿರ್ಮಾಣ ಮೊದಲಾದ ಯೋಜನೆಗಳ ಮೂಲಕ ಗಾಂಧೀಜಿ ತತ್ವಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಮಹಾತ್ಮ ಗಾಂಧೀಜಿ ಯಾವುದೇ ಕಾರ್ಯ ಇದ್ದರೂ ಅವುಗಳ ಅನುಷ್ಠಾನಕ್ಕೆ ಒತ್ತು ನೀಡುತ್ತಿದ್ದರು. ಬದಲಾವಣೆ ನನ್ನಿಂದಲೇ ಆರಂಭವಾಗಲಿ ಎಂಬ ಮನೋಭಾವ ಎಲ್ಲರಲ್ಲಿ ಬೆಳೆಯಬೇಕು. ಸ್ವಚ್ಛತಾ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಡುತ್ತಿಲ್ಲ ಎನ್ನುವ ಬದಲು, ನಮ್ಮಿಂದ ಏನು ಸಾಧ್ಯ ಎಂಬುದನ್ನು ಯೋಚಿಸಬೇಕು ಎಂದರು.

ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಳ್ಳಲು ಜಿಲ್ಲೆಯ ಪ್ರತಿಯೊಂದು ಕುಟುಂಬ ಮುಂದಾಗಬೇಕು. ಈ ಮೂಲಕ ಬಯಲು ಶೌಚಮುಕ್ತ ಜಿಲ್ಲೆಗೆ ಸಹಕರಿಸಬೇಕು. ಶೌಚಗೃಹ ನಿಮರ್ಿಸಿಕೊಳ್ಳಲು ಜಾಗವಿಲ್ಲ, ಹಣ ಇಲ್ಲ ಎಂಬ ನೆಪ ಹೇಳಬಾರದು. ಸಮಸ್ಯೆ ಇದ್ದಲ್ಲಿ ಪರಿಹಾರವೂ ಇರುತ್ತದೆ. ಕಡಿಮೆ ಜಾಗ ಇದ್ದಲ್ಲಿ ಆಧುನಿಕ ಶೌಚಗೃಹಗಳನ್ನು ನಿರ್ಮಿಸಿಕೊಳ್ಳಬಹುದಾಗಿದೆ. ಅಲ್ಲದೆ ವೈಯಕ್ತಿಕ ಶೌಚಗೃಹಕ್ಕೆ ಸರ್ಕಾರದ ಸಹಾಯಧನವೂ ಸಿಗಲಿದೆ ಎಂದು ತಿಳಿಸಿದರು.
ದಾಸಬಾಳ ಮಠದ ಶ್ರೀ ವೀರೇಶ್ವರ ಸ್ವಾಮೀಜಿ, ಜಾಮೀಯಾ ಮಸೀದಿ ಮೌಲ್ವಿ ಶೇಖ್ ಬುರಾನುದ್ದೀನ್, ಾದರ್ಜೀ, ಜೈನ ಧರ್ಮದ ಬಾಬು ದೋಖಾ, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪಿ.ವೇಣುಗೋಪಾಲ ಸರ್ವಧರ್ಮ ಸಂದೇಶ ನೀಡಿದರು.

ಯಾದಗಿರಿ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಚಾಲನೆ ನೀಡಿದರು.

ಶುಭಂ ಪದವಿ ಕಾಲೇಜು ಉಪನ್ಯಾಸಕ ಗುರುಪ್ರಸಾದ ವೈದ್ಯ ಉಪನ್ಯಾಸ ನೀಡಿದರು. ಗಾಂಧಿ ಜಯಂತಿ ನಿಮಿತ್ತ ವಿಶೇಷವಾಗಿ ಪ್ರಕಟಿಸಲಾಗಿದೆ ವಾತರ್ಾ ಇಲಾಖೆಯ ಜನಪದ, ಮಾಚರ್್ ಆ್ ಕನರ್ಾಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರತಂದಿರುವ ಪಾಪು ಗಾಂಧಿ, ಗಾಂಧಿ ಬಾಪು ಆದ ಕಥೆ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾಡಳಿತದ ಎಡವಟ್ಟಿಗೆ ಶಾಸಕ ಗರಂ: ಜಿಲ್ಲಾಡಳಿತದಿಂದ ಯಾದಗಿರಿ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಫೋಟೊ ಇಡುವುದನ್ನು ಮರೆತಿದ್ದರು. ಇದನ್ನು ಗಮನಿಸಿದ ಶಾಸಕ ವೆಂಕಟರಡ್ಡಿ ಮುದ್ನಾಳ್, ಶಾಸ್ತ್ರೀಜಿ ಫೋಟೊ ಏಕೆ ಇಟ್ಟಿಲ್ಲ ಎಂದು ಪ್ರಶ್ನಿಸಿದರು. ಇದರಿಂದ ಗಲಿಬಿಲಿಗೊಂಡ ಅಧಿಕಾರಿಗಳಿಗೆ ಏನು ಹೇಳಬೇಕು ಎಂಬುದು ತಿಳಿಯಲಿಲ್ಲ. ಅಧಿಕಾರಿಗಳ ಈ ಬೇಜಾಬ್ದಾರಿ ವರ್ತನೆ ಶಾಸಕರನ್ನು ಮತ್ತಷ್ಟು ಕೆರಳುವಂತೆ ಮಾಡಿತು. ಯಾವುದೇ ಸಾಧಕರ ಕಾರ್ಯಕ್ರಮವನ್ನು ಹೃದಯಾಂತರದಿಂದ ಮಾಡಬೇಕೇ ಹೊರತು, ಕಾಟಾಚಾರಕ್ಕಲ್ಲ ಎಂದು ಗರಂ ಆದರು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ತಕ್ಷಣವೇ ಲಾಲ್ ಬಹದ್ದೂರ್ ಶಾಸ್ತ್ರಿ ಫೋಟೊ ತಂದಿರಿಸಿ ಪುಷ್ಟನಮನ ಸಲ್ಲಿಸಿ ಗೌರವಿಸಿತು.

ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಳ್ಳಿ: ಸಾರ್ವಜನಿಕರು ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಸಲಹೆ ನೀಡಿದರು. ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಗರಸಭೆಯಿಂದ ಮಂಗಳವಾರ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನಮ್ಮ ಸುತ್ತಲಿನ ಪರಿಸರ ಚೆನ್ನಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರ ಶುಚಿಯಾಗಿರುವಂತೆ ನೋಡಿಕೊಳ್ಳಬೇಕು. ಇದರಿಂದ ಯಾವುದೇ ತೆರನಾದ ಸಾಂಕ್ರಾಮಿಕ ರೋಗ ಹರಡುವುದಿಲ್ಲ ಎಂದರು. ಸಾರ್ವಜನಿಕರು ಸ್ಥಳೀಯ ಸಮಸ್ಯೆಗಳ ಕುರಿತು ಡಿಸಿ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಸಮಸ್ಯೆಗಳನ್ನು ಪರಿಹರಿಸುವಂತೆ ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆಗೆ ಸೂಚಿಸಿದರು. ನಗರಸಭೆ ಕಚೇರಿ ವ್ಯವಸ್ಥಾಪಕ ಮಲ್ಲಿಕಾಜರ್ುನ, ಗ್ರಂಥಾಲಯ ಸಹಾಯಕ ಬಸನಗೌಡ ಪಾಟೀಲ್, ನಿಂಗಮ್ಮ, ಪ್ರಥಮ ದಜರ್ೆ ಸಹಾಯಕ ಗೌತಮ್ ಇದ್ದರು.

ಇತ್ತೀಚೆಗೆ ಇಡೀ ದೇಶದಲ್ಲಿ ಜಾತಿ ಜಾತಿ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿದೆ. ನಾವೆಲ್ಲರೂ ಒಂದಾಗಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸಿ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿಮರ್ಾಣವಾಗಲು ಕಾರಣೀಭೂತರಾಗಬೇಕು.
| ವೆಂಕಟರಡ್ಡಿ ಮುದ್ನಾಳ್ ಶಾಸಕ ಯಾದಗಿರಿ

Leave a Reply

Your email address will not be published. Required fields are marked *