25.5 C
Bangalore
Monday, December 16, 2019

ಗಾಳಿ, ಮಳೆಗೆ ಅಪಾರ ಹಾನಿ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಶಿರಸಿ: ಮಂಗಳವಾರ ಮಧ್ಯಾಹ್ನ ಸುರಿದ ಮಳೆ ಮತ್ತು ಭಾರಿ ಗಾಳಿಗೆ ನಗರದ ಜನತೆ ತತ್ತರಗೊಂಡಿದ್ದಾರೆ. ನಗರದ ಬಹುತೇಕ ಕಡೆಗಳಲ್ಲಿ ಹಾನಿ ಸಂಭವಿಸಿದೆ.

- Advertisement -

ಮತದಾನದ ಪ್ರಕ್ರಿಯೆಯಲ್ಲಿ ನಿರತರಾಗಿದ್ದ ತಾಲೂಕಿನ ಜನತೆಗೆ ಈ ಗಾಳಿ ಮಳೆ ಆಘಾತ ನೀಡಿದೆ. 2.30ರ ವೇಳೆ ಒಮ್ಮೆಲೇ ಅಬ್ಬರದ ಗಾಳಿ ಆರಂಭಗೊಂಡು ಜತೆಯಲ್ಲಿಯೇ ಮಳೆಯೂ ಸುರಿಯಲಾರಂಭಿಸಿತ್ತು.

ತಾಲೂಕಿನ ನಿಡಗೋಡ ಬಳಿಯ ಶಂಭುಲಿಂಗೇಶ್ವರ ದೇವಸ್ಥಾನದ ಮೇಲೆ ಬೃಹತ್ ಮರ ಮುರಿದು ಬಿದ್ದು, ದೇವಾಲಯದ ಕಟ್ಟಡಕ್ಕೆ ಹಾನಿ ಸಂಭವಿಸಿದೆ. ಪಕ್ಕದಲ್ಲಿಯೇ ಇದ್ದ ಎರಡು ಮನೆಗಳೂ ಈ ಘಟನೆಯಿಂದಾಗಿ ಜಖಂಗೊಂಡು ಒಟ್ಟು 4 ಲಕ್ಷ ರೂಪಾಯಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನಗರದ ಶ್ರದ್ಧಾನಂದ ಗಲ್ಲಿಯಲ್ಲಿ ಆನಂದ ಶಿರ್ಸಿಕರ್ ಅವರ ಮನೆಗೆ ಸಿಡಿಲು ಬಡಿದು ಗೋಡೆಯಲ್ಲಿ ಬಿರುಕು ಬಿಟ್ಟಿದೆ. ಈ ವೇಳೆ ಮೂವರು ಮನೆಯ ಒಳಗೆ ಇದ್ದು ಅದೃಷ್ಟವಶಾತ್ ಪಾರಾಗಿದ್ದಾರೆ. ಸಹ್ಯಾದ್ರಿ ಕಾಲನಿಯಲ್ಲಿ ಆನಂದ ಹುಬ್ಬಳ್ಳಿ ಅವರ ಮನೆ ಮೇಲೆ ತೆಂಗಿನ ಮರ ಮುರಿದುಬಿದ್ದು ಛಾವಣಿಗೆ ಹಾನಿಯಾಗಿದೆ. ಮಾರಿಕಾಂಬಾ ನಗರದಲ್ಲಿ ಮಾರಿಗುಡೆ ಶಾಲೆ ಸಮೀಪದ ನಾಸಿರ್ ಅಬ್ದುಲ್ ಸಾಬ್ ಅವರ ಮನೆಯ ಛಾವಣಿ ಗಾಳಿಗೆ ಹಾರಿಹೋಗಿದೆ. ಇಂದಿರಾನಗರದಲ್ಲಿ ಮನೋರಮಾ ಯಾಜಿ ಅವರ ಕಾಂಪೌಂಡ್ ಗೋಡೆಯಮೇಲೆ ತೆಂಗಿನಮರ ಮುರಿದು ಹಾನಿಯಾಗಿದ್ದರೆ, ಲಯನ್ಸ್ ನಗರದಲ್ಲಿ ತೆಂಗಿನ ಮರ ವಿದ್ಯುತ್ ತಂತಿಯ ಮೇಲೆ ಬಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು.

ನಗರದ ಬನವಾಸಿ ರಸ್ತೆಯಲ್ಲಿ ಬೃಹತ್ ಮರ ಮುರಿದು ಬಿದ್ದು ಕೆಲ ಕಾಲ ಸಂಚಾರ ವ್ಯತ್ಯಯಗೊಂಡಿತ್ತು. ಅಗಸೇಬಾಗಿಲಿನ ಮೀನು ಮಾರುಕಟ್ಟೆ ಬಳಿ ಮರ ರಸ್ತೆ ಮೇಲೆ ಬಿದ್ದು ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಹೊಸಪೇಟೆ ರಸ್ತೆಯ ಖಾಸಗಿ ಕಂಪನಿಯ ಗಾಜಿನ ಕಟೌಟ್ ಕುಸಿದು ಹಾನಿಯಾಗಿದೆ.

ಹೊನ್ನಾವರ ವರದಿ: ತಾಲೂಕಿನಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಕೆಲವೆಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಹೊನ್ನಾವರ ಪಟ್ಟಣ, ಹಳದೀಪುರ, ಅಗ್ರಹಾರ, ಚಂದಾವರ, ಹೊದ್ಕೆ, ಶಿರೂರು, ಕಡ್ಲೆ, ಒಂದೂರು, ಹೆಬ್ಬಾನಕೆರೆ, ಅರೆಅಂಗಡಿ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಿದೆ. ಮಂಕಿ, ಅನಂತವಾಡಿ, ಗೇರುಸೊಪ್ಪಾ, ಮೂಗ್ವಾ ಭಾಗಗಳಲ್ಲಿ ಅತ್ಯಲ್ಪ ಮಳೆಯಾಗಿದ್ದು, ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂತು. ಮಳೆ-ಗಾಳಿಗೆ ತಾಲೂಕಿನ ಹಳದೀಪುರದ ನರಸಿಂಹ ಪೈ ಅವರ ಮನೆಯ ಛಾವಣಿ ಹಂಚು ಮತ್ತಿತರ ಕಟ್ಟಿಗೆ ಸಾಮಗ್ರಿಗಳು ಹಾರಿಹೋಗಿದ್ದು, 5 ಸಾವಿರ ರೂ. ಹಾನಿ ಅಂದಾಜಿಸಲಾಗಿದೆ ಎಂದು ಕಂದಾಯ ಇಲಾಖೆಯ ಸಿಬ್ಬಂದಿ ಪಾಟೀಲ ತಿಳಿಸಿದ್ದಾರೆ.

ಆಕಸ್ಮಿಕ ಮಳೆಯಿಂದಾಗಿ ಕೆಲ ಭಾಗಗಳಲ್ಲಿ ಮನೆ ರಿಪೇರಿ ಕೈಗೊಂಡ ಜನರಿಗೆ ತೊಂದರೆ ಉಂಟಾಯಿತು. ಕೆಲ ಮತಗಟ್ಟೆಗಳಲ್ಲಿ ಟೇಬಲ್ ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿದ್ದವರಿಗೂ ಮಳೆ ಕಿರಿ-ಕಿರಿ ತಂದೊಡ್ಡಿತು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...