17.8 C
Bengaluru
Wednesday, January 22, 2020

ಗುಂಡಿ ಮುಚ್ಚಿ ಪ್ರಾಣ ಉಳಿಸಿ

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಧಾರವಾಡ: ಸಪ್ತಾಪುರದಲ್ಲಿ ಕಾಂಕ್ರೀಟ್ ರಸ್ತೆ ಬದಿ ಗುಂಡಿ ತೋಡಿ ಮುಚ್ಚದೇ ಬಿಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ತಕ್ಷಣ ಮುಚ್ಚಬೇಕೆಂದು ಆಗ್ರಹಿಸಿದ್ದಾರೆ. ಶಾರದಾ ಕಾಂಪ್ಲೆಕ್ಸ್ ಪಕ್ಕದಿಂದ ನಾಡಗೀರ ಕಾಂಪೌಂಡ್​ಗೆ ಹೋಗುವ ದಾರಿಯ ಪಕ್ಕದಲ್ಲಿಯೇ ದೊಡ್ಡ ಗುಂಡಿ (ಕುಣಿ) ತೋಡಲಾಗಿದೆ. ಎಷ್ಟೋ ದಿನಗಳಾದರೂ ಗುಂಡಿಯನ್ನು ಮುಚ್ಚದೇ ಬಿಟ್ಟಿದ್ದಾರೆ. ರಾತ್ರಿ ಹೊತ್ತು ಈ ಗುಂಡಿ ಕಾಣುವುದೇ ಇಲ್ಲ. ಚಿಕ್ಕ ಮಕ್ಕಳು, ಹಿರಿಯ ನಾಗರಿಕರು ಎಚ್ಚರಿಕೆಯಿಂದ ತಿರುಗಾಡಬೇಕಾಗಿದೆ. ಯಾರಾದರೂ ಗಮನಿಸದೇ ಕಾಲಿಟ್ಟಲ್ಲಿ ಅಪಾಯ ತಪ್ಪಿದ್ದಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

|ರಸ್ತೆಯಲ್ಲಿ ಗುಂಡಿ ತೆಗೆದವರು ತಕ್ಷಣ ಗಮನ ಹರಿಸಿ. ಗುಂಡಿಯನ್ನು ಮುಚ್ಚಿ ಇಲ್ಲಿಯ ನಿವಾಸಿಗಳನ್ನು ಅಪಾಯದಿಂದ ಪಾರು ಮಾಡಿ.

-ಪಂಪಾಪತಿ ಹಿರೇಮಠ, ಸಪ್ತಾಪುರ ಧಾರವಾಡ

ದುರಸ್ತಿ ಕೆಲಸ ಪುನಾರಂಭಿಸಿ

ಹುಬ್ಬಳ್ಳಿ: ವಿವೇಕಾನಂದನಗರದಲ್ಲಿ ವರ್ಷದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಕೆಲ ದಿನಗಳಲ್ಲಿಯೇ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದ್ದು, ತಕ್ಷಣ ಕಾಮಗಾರಿ ಪುನಾರಂಭಿಸಬೇಕೆಂದು ಬೆನಕ ವಿದ್ಯಾಮಂದಿರ ಆಗ್ರಹಿಸಿದೆ.

ವಿದ್ಯಾಮಂದಿರದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಪಘಾತಗಳು ಸಂಭವಿಸಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ರಸ್ತೆಗಳು ಉಬ್ಬು ತಗ್ಗುಗಳಿಂದ ಕೂಡಿದೆ. ವಿದ್ಯಾರ್ಥಿಗಳಿಗೆ ಓಡಾಡಲು ತೊಂದರೆಯಾಗಿದೆ. ಅಂದಿನ ಪೌರಾಡಳಿತ ಸಚಿವರಾಗಿದ್ದ ದಿ. ಸಿ.ಎಸ್. ಶಿವಳ್ಳಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಬಳಿಕ ದುರಸ್ತಿ ಕೆಲಸ ಆರಂಭಿಸಿದ್ದರು. ದುರದೃಷ್ಟವಶಾತ್ ಅವರ ನಿಧನದ ಬಳಿಕ ರಸ್ತೆ ದುರಸ್ತಿ ಕೆಲಸ ನಿಂತು ಹೋಗಿದೆ ಎಂದು ದೂರಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ದುರಸ್ತಿ ಕಾಮಗಾರಿ ಪುನಾರಂಭಿಸಬೇಕೆಂದು ಒತ್ತಾಯಿಸಿದ್ದಾರೆ.

ರಾತ್ರೋರಾತ್ರಿ ನಡು ರಸ್ತೆಯಲ್ಲಿ ಗುಂಡಿ

ಹುಬ್ಬಳ್ಳಿ: ಆದರ್ಶನಗರ ರೂಪಾ ಅಪಾರ್ಟ್​ವೆುಂಟ್ ಎದುರು ಶುಕ್ರವಾರ ಬೆಳಗ್ಗೆ ರಸ್ತೆ ಚೆನ್ನಾಗಿತ್ತು. ಆದರೆ, ಸಂಜೆ ವೇಳೆಗೆ ಚೆನ್ನಾಗಿದ್ದ ರಸ್ತೆಯನ್ನು ಅಗೆಯಲಾಗಿದೆ. ಪದೇ ಪದೆ ರಸ್ತೆ ಅಗೆಯುವುದು ಯಾಕೆ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ರಸ್ತೆಯನ್ನು ಅಡ್ಡವಾಗಿ ಅಗೆಯಲಾಗಿದೆ. ಯಾವ ಕಾರಣಕ್ಕೆ ರಸ್ತೆ ಅಗೆಯಲಾಗಿದೆ ಎಂಬುದು ತಿಳಿಯುತ್ತಿಲ್ಲ. ಅಗೆದ ಮಣ್ಣು ರಸ್ತೆ ತುಂಬಾ ಹರಡಿಕೊಂಡು ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಇಲ್ಲಿ ಒಮ್ಮೆ ರಸ್ತೆ ಅಗೆದರೆ ಮುಗಿದೇ ಹೋಯಿತು. ಅದು ಪುನಃ ಮೊದಲಿನ ಸ್ಥಿತಿಗೆ ಬರುವುದಿಲ್ಲ. ದುರಸ್ತಿಯೂ ಸಮರ್ಪಕವಾಗಿ ಮಾಡುವುದಿಲ್ಲ. ತೆರಿಗೆದಾರರ ಗೋಳು ತಪ್ಪಿದ್ದಲ್ಲ. ತಕ್ಷಣ ರಸ್ತೆ ದುರಸ್ತಿ ಮಾಡಬೇಕೆಂದು ಸ್ಥಳೀಯರಾದ ಶಶಾಂಕ ಆಗ್ರಹಿಸಿದ್ದಾರೆ.

ತೊಂದರೆ ನಿವಾರಿಸಿ

ಹುಬ್ಬಳ್ಳಿ: ಚಂದ್ರಗಿರಿ ಮತ್ತು ಸುವರ್ಣಗಿರಿ ಲೇಔಟ್ ನಿವಾಸಿಗಳಿಗೆ ಶಾಲೆ ಸೇರಿ ವಿವಿಧ ವಾಹನಗಳಿಂದ ಆಗುತ್ತಿರುವ ತೊಂದರೆ ನಿವಾರಿಸುವಂತೆ ಡಿ.ಸಿ.ಗೆ ದೂರು ನೀಡಲಾಗಿದೆ. ಒಳ ರಸ್ತೆಗಳಾಗಿರುವುದರಿಂದ ವಾಹನ ಸಾಂಧ್ರತೆಗೆ ಅನುಗುಣವಾಗಿ ರಸ್ತೆ ವಿನ್ಯಾಸ ಮಾಡಲಾಗಿರುತ್ತದೆ. ಆದರೆ, ವಾಹನ ದಟ್ಟಣೆ ಮಿತಿ ಮೀರಿದೆ. ಇದರಿಂದ ಜನರು ಓಡಾಡದಂತಾಗಿದೆ. ಇತ್ತೀಚೆಗೆ ರಸ್ತೆ ಅಪಘಾತದಿಂದ ನಿವಾಸಿಗಳಾದ ಹರ್ಷಿತಾ ಹಿರೇಮಠ, ಅಭಿಷೇಕ ಮಹಾಂತಿನಮಠ, ಈರಣ್ಣ ಕೊಪ್ಪದ ಗಾಯಗೊಂಡಿದ್ದಾರೆ. ಕೂಡಲೆ ಸಮಸ್ಯೆ ನಿವಾರಿಸಬೇಕು ಎಂದು ನಿವಾಸಿಗಳು ದೂರಿನಲ್ಲಿ ಆಗ್ರಹಿಸಿದ್ದಾರೆ.

ಅರಳಿಕಟ್ಟಿ ಗ್ರಾಮಸ್ಥರಿಂದ ಪ್ರತಿಭಟನೆ ನಾಳೆ

ಹುಬ್ಬಳ್ಳಿ: ತಾಲೂಕಿನ ಬು. ಅರಳಿಕಟ್ಟಿಯಿಂದ ಛಬ್ಬಿ ಕ್ರಾಸ್​ವರೆಗಿನ ರಸ್ತೆ ತೀವ್ರ ಹದಗೆಟ್ಟಿದ್ದು, ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಿ. 9ರಂದು ಬೆಳಗ್ಗೆ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

15 ವರ್ಷಗಳಿಂದ ಈ ರಸ್ತೆ ದುರಸ್ತಿಯಾಗಿಲ್ಲ. ಪರಿಣಾಮ ತೆಗ್ಗು ಗುಂಡಿಗಳು ಬಿದ್ದು ಸಂಚಾರ ಸಂಕಟಮಯವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಅರಳಿಕಟ್ಟಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲು ತೀರ್ವನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...