ಖಾನಾಪುರ: ವಿದ್ಯಾರ್ಥಿ ಜೀವನ ಒಂದು ತಪಸ್ಸು. ಆಸಕ್ತಿ. ಶ್ರದ್ಧೆ ಹಾಗೂ ಗುರುಭಕ್ತಿ ಅವಶ್ಯವಾಗಿ ಬೇಕು. ಮನುಷ್ಯನಿಗೆ ಅಸಾಧ್ಯವಾದುದು ಯಾವುದೂ ಇಲ್ಲ, ಗುರಿ ಮುಟ್ಟುವ ಮನಸು ಬೇಕು ಎಂದು ಖಾನಾಪುರ ಪೊಲೀಸ್ ತರಬೇತಿ ಶಾಲೆಯ ಕಾನೂನು ಸಲಹೆಗಾರ ಎಸ್.ಬಿ.ಮದಿಹಳ್ಳಿ ಹೇಳಿದರು.
ಇಲ್ಲಿನ ಸ್ಥಳಿಯ ಕೆಎಲ್ಇ ಸಂಸ್ಥೆಯ ಎಂ.ಎಸ್.ಹೊಸಮನಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗುರಿ ಸಾಧಿಸಲು ಉತ್ತಮ ಆರೋಗ್ಯವೂ ಬೇಕು, ಆರೋಗ್ಯಯುತ ನಾಡು ಕಟ್ಟುವ ಕೆಲಸ ಯುವಕರು ಮಾಡಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಸವರಾಜ ಹೊಂಡದಕಟ್ಟಿ ಮಾತನಾಡಿ, ಸ್ಪರ್ಧೆ ಪ್ರತಿ ೇತ್ರದಲ್ಲೂ ಇದೆ. ಅದನ್ನು ಪ್ರಾಮಾಣಿಕವಾಗಿ ಎದುರಿಸಿ ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳಬೇಕು ಎಂದರು. ಮಹಾವಿದ್ಯಾಲಯದ ಪ್ರಾಚಾರ್ಯ ವಿಜಯ ಕಲ್ಮಠ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯ ಆರ್.ಡಿ.ಹಂಜಿ ಮಾತನಾಡಿದರು. ಕಳೆದ ಶೈಣಿಕ ವರ್ಷದಲ್ಲಿ ವಾರ್ಷಿಕ ಪರೀೆಯಲ್ಲಿ ಮಹಾವಿದ್ಯಾಲಯಕ್ಕೆ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ಎಸ್.ಕೊಡೋಳ್ಳಿ, ಜಯಶ್ರೀ ಹೊಸಮನಿ, ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಆನಂದ ತಾವಂಶಿ ಇತರರು ಇದ್ದರು.
ಗುರಿ ಮುಟ್ಟಲು ಆಸಕ್ತಿ, ಶ್ರದ್ಧೆ ಅಗತ್ಯ
ಪೋಷಕರೇ ಹುಷಾರ್! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ
ಬೆಂಗಳೂರು: ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
30 ದಿನಗಳಲ್ಲೇ ಸ್ಲಿಮ್ ಆ್ಯಂಡ್ ಫಿಟ್ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ
ಬೆಂಗಳೂರು: ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…