ಗೃಹಲಕ್ಷ್ಮೀ ಸಮಪರ್ಕವಾಗಿ ಅನುಷ್ಠಾನಕ್ಕೆ ತನ್ನಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಸೂಚನೆ

ಮೈಸೂರು: ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಸಮಪರ್ಕವಾಗಿ ಅನುಷ್ಠಾನಕ್ಕೆ ತರಲು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಅವರು ಮಾತನಾಡಿದರು. 256 ಬಾಪೂಜಿ ಸೇವಾ ಕೇಂದ್ರಗಳು, 222 ಗ್ರಾಮ ಓನ್ ಕೇಂದ್ರಗಳು ಹಾಗೂ 30 ಕರ್ನಾಟಕ ಒನ್ ಕೇಂದ್ರಗಳು ಹಾಗೂ ನಗರ ಪಾಲಿಕೆ ವ್ಯಾಪ್ತಿಯ 9 ವಲಯ ಕಚೇರಿಗಳು ಸೇರಿದಂತೆ ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಕೆಲಸ ಆಗಬೇಕು. ಇದನ್ನು ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರು ಗಮನಿಸಬೇಕು ಎಂದು ನಿರ್ದೇಶನ ನೀಡಿದರು.
ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿಲ್ಲ. ಮಹಿಳೆಯರು ನಿರಾತಂಕವಾಗಿ ಅವರ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಂದಾಗ ನಿಗದಿಪಡಿಸಿದ ದಿನಾಂಕದಂದು ಹತ್ತಿರದ ಕೇಂದ್ರಗಳಿಗೆ ಆಧಾರ್ ಕಾರ್ಡ್, ಗಂಡನ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮುಖಪುಟದ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಹೋಗಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಒಂದು ವೇಳೆ ಆ ಸಮಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ಮುಂದಿನ ದಿನದ ಸಂಜೆ 5 ರಿಂದ 7 ಗಂಟೆಯವರೆಗೆ ಅಥವಾ ಮರು ದಿನ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಶುಲ್ಕವಿರುವುದಿಲ್ಲ. ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರಜಾಪ್ರತಿನಿಧಿಗಳ ಆಯ್ಕೆ ಪೂರ್ಣಗೊಳಿಸಬೇಕಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಜನಪ್ರತಿನಿಧಿಗಳು ದುಡ್ಡು ತೆಗೆದುಕೊಳ್ಳುವಂತಿಲ್ಲ. ಆ ರೀತಿ ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್, ನಗರ ಪಾಲಿಕೆ ಹೆಚ್ಚುವರಿ ಆಯುಕ್ತೆ ರೂಪಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಿ.ಬಸವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ. ಹರೀಶ್ ಇದ್ದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…