ಮಡಿಕೇರಿ:
ರಾಜ್ಯ ಸರ್ಕಾದ ಮಹತ್ವಾಕಾಂಕ್ಷಿ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಕೊಡಗಿನಲ್ಲೂ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ತಿಂಗಳ 6ರಿಂದಲೇ ಸಾರ್ವಜನಿಕರಿಗೆ ಲಭ್ಯವಾಗಬೇಕಿದ್ದ ಈ ಯೋಜನೆಯ ಅನುಷ್ಠಾನ ಕೆಲವೊಂದು ಕಾರಣಗಳಿಂದ ಮುಂದಕ್ಕೆ ಹೋಗಿದ್ದರೂ ಜನವರಿಯಲ್ಲೇ ಚಾಲನೆ ಕೊಡಲು ಯೋಜಿಸಲಾಗಿದೆ. ಅಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗುವ ಮರಣ ತಪ್ಪಿಸಲು ಈ ಯೋಜನೆ ಹೆಚ್ಚು ಪರಿಣಾಮಕಾರಿ ಆಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಚುನಾವಣೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಗಳ ‘ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ‘ಮಾತು ಉಳಿಸಿಕೊಂಡಿದ್ದೇವೆ’ ಎಂದು ಸಾಬೀತು ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಆರೋಗ್ಯ ಕಾಳಜಿ ಉದ್ದೇಶದಿಂದ ‘ಗೃಹ ಆರೋಗ್ಯ’ ಯೋಜನೆಯನ್ನು ರೂಪಿಸಿ ಜಾರಿಗೆ ತಂದಿದೆ. ಕಳೆದ ವರ್ಷದ ಅ.24ರಂದು ಕೋಲಾರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಯೋಜನೆಗೆ ಪ್ರಾರಂಭಿಕವಾಗಿ ಚಾಲನೆ ನೀಡಿದರು. ಅಲ್ಲಿ ಸಿಕ್ಕಿದ ಯಶಸ್ಸಿನಿಂದ ಈ ಯೋಜನೆಯನ್ನು ಸರ್ಕಾರ ಈಗ ರಾಜ್ಯಾದ್ಯಂತ ಅನುಷ್ಠಾನಕ್ಕೆ ತರುತ್ತಿದೆ.
ಭಾರತದಲ್ಲಿ ಒಟ್ಟಾರೆ ಮರಣಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದ ಶೇ.61.8 ಮರಣಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟಲು ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.
ಜ.6ಕ್ಕೆ ಕೊಡಗು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಬರಲಿದೆ ಎಂದು ಪ್ರಕಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಸಿದ್ಧತೆ ಸಂಬAಧ ಚುರುಕಿನ ಚಟುವಟಿಕೆಗಳು ನಡೆದಿದ್ದವು. ಯೋಜನೆ ಜಾರಿ ಸಂಬAಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯೊಂದು ಕೂಡ ನಡೆದಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಸ್ವಲ್ಪ ಮುಂದಕ್ಕೆ ಹೋಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
‘ಗೃಹ ಆರೋಗ್ಯ’ ಯೋಜನೆಯ ಅನುಷ್ಠಾನ ದಿನಾಂಕ ಮುಂದೂಡಿದ್ದರೂ ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ತಿಂಗಳ ಒಳಗಡೆಯೇ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಹಾಗಾಗಿ ಈ ಯೋಜನೆ ಜಾರಿ ಸಂಬAಧದ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರ ಕಚೇರಿಯಿಂದ ಸೂಚನೆ ಬರುತ್ತಿದ್ದಂತೆಯೇ ಜಿಲ್ಲೆಯಲ್ಲೂ ಮಹತ್ವದ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಬರಲಿದೆ.
‘ಗೃಹ ಆರೋಗ್ಯ’ ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ. ಮಧುಮೇಹ, ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮತ್ತು ಔಷದಿ üವಿತರಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಈ ಯೋಜನೆ ಮೂಲಕ ಹೊಂದಲಾಗಿದೆ. ಮಾನಸಿಕ ಆರೋಗ್ಯ ಸಮಸ್ಯೆ, ಸ್ಲೀಪ್ ಅಪ್ನೀಯಾ, ಬಿಎಂಐ, ವೇಸ್ಟ್ ಆ್ಯಂಡ್ ಹಿಪ್ ಸರ್‌ಕಾನ್ಫರೆನ್ಸ್ಗಳ ಸಮಗ್ರ ತಪಾಸಣೆ, ಆಪ್ತ ಸಮಾಲೋಚನೆ ಮೂಲಕ ಸಲಹೆಗಳನ್ನು ನೀಡಲು ಕೂಡ ಯೋಜನೆಯ ಚೌಕಟ್ಟು ರೂಪಿಸಲಾಗಿದೆ.
ಪ್ರಮುಖವಾಗಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಲಾಗಿದೆ. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರನ್ನು ಒಳಗೊಂಡ 150 ತಂಡಗಳು ವಾರದಲ್ಲಿ 4 ದಿನ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಪ್ರತಿ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಉಚಿತ ಔಷಧಿ ತಲುಪಿಸಲಿದ್ದಾರೆ.
ಯೋಜನೆ ಅನುಷ್ಠಾನ ಸಂಬAಧ ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭ ಕೊರಳಿನ ಕ್ಯಾನ್ಸರ್, ಹೃದಯ ಸಂಬAಧಿ ಕಾಯಿಲೆಗಳು, ನಿದ್ರಾಹೀನತೆ ಈ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಾಗುವುದು. ಕ್ಯಾನ್ಸರ್ ಚಿಹ್ನೆ, ಲಕ್ಷಣಗಳು ಕಂಡುಬAದಲ್ಲಿ ತಜ್ಞ ವೈದ್ಯರ ಮೂಲಕ ರೋಗ ನಿರ್ಣಯ ಖಾತ್ರಿಪಡಿಸಿ ಮುಂದಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಂಕಿತ ಪ್ರಕರಣಗಳನ್ನು ದೃಢಪಡಿಸಿ ಮುಂದಿನ ಚಿಕಿತ್ಸೆಗೆ ಶಿಫಾರಸ್ಸು ಮಾಡುತ್ತಾರೆ.
ಯೋಜನೆ ಸಮರ್ಪಕವಾಗಿ ಜಾರಿಯಾಗುವ ಮೂಲಕ ಸರ್ಕಾರದ ಆಶಯಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುವುದನ್ನು ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಹಲವು ಹಂತಗಳ ನಿಗಾ ವ್ಯವಸ್ಥೆಯನ್ನೂ ಸರ್ಕಾರರ ರೂಪಿಸಿದೆ. ಆಯಾಯ ತಾಲೂಕಿನ ತಾಲೂಕು ಆರೋಗ್ಯಾಧಿಕಾರಿ ಸಂಪೂರ್ಣ ಕಾರ್ಯಕ್ರಮದ ಮೇಲ್ವಿಚಾರಕ ಆಗಿರುತ್ತಾರೆ. ಪ್ರತಿ ದಿನವೂ ಜಿಲ್ಲಾ ಮಟ್ಟದಲ್ಲಿ ವರದಿ ಕ್ರೋಢೀಕರಿಸಬೇಕಾಗುತ್ತದೆ. ಹೀಗೆ ಕ್ರೋಢೀಕರಿಸಿದ ವರದಿಗಳನ್ನು ಆಯಾಯ ದಿನವೇ ರಾಜ್ಯ ಮಟ್ಟಕ್ಕೆ ಕಳುಹಿಸಬೇಕಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಈ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕಾಗುತ್ತದೆ.
‘ಗೃಹ ಆರೋಗ್ಯ’ ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ. ಈ ಯೋಜನೆ ಜಾರಿ ಸಂಬAಧ ಜಿಲ್ಲೆಯಲ್ಲೂ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರ ಕಚೇರಿಯಿಂದ ಸೂಚನೆ ಬರುತ್ತಿದ್ದಂತೆಯೇ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಡಾ. ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಕೊಡಗು