ಚಿತ್ರದುರ್ಗ: ವಾರ್ತಾ ಇಲಾಖೆ ಜಿಪಂ ಆವರಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಸಿರು ನಿಶಾನೆ ತೋರಿಸಿದರು.
ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಕುರಿತು ವಾಹನ ಜಿಲ್ಲಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ.
ಈ ವೇಳೆ ಮಾತನಾಡಿದ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಆರ್. ಶಿವಣ್ಣ, ಜನರ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರನ್ನು ತಲುಪುತ್ತಿವೆ ಎಂದರು.
ಈ ವಾಹನ ಜಿಲ್ಲೆಯಲ್ಲಿ 5 ದಿನಗಳ ಕಾಲ ಆಯ್ದ 20ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲಿದೆ. ವಾಹನದೊಂದಿಗೆ ಜಾನಪದ ಸಂಗೀತ ಕಲಾವಿದರೂ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ತಾಲೂಕು ಅಧ್ಯಕ್ಷ ಪ್ರಕಾಶ್, ಸದಸ್ಯರಾದ ಅಬ್ದುಲ್ಲ, ಮುದಸಿರ್, ಜೆ.ಎಂ. ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ, ಡಿಎಚ್‌ಒ ಡಾ.ಜಿ.ಪಿ. ರೇಣುಪ್ರ ಸಾದ್, ಶಿಕ್ಷಣ ಇಲಾಖೆ ಡಿವೈಪಿಸಿ ವೆಂಕಟೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್,ಮಂಜುನಾಥ್ ಮತ್ತಿತರರು ಇದ್ದರು.
ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…