More

  ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ

  ಸಕಲೇಶಪುರ : ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

  ಸೊಮವಾರ ಪಟ್ಟಣದಲ್ಲಿ ರೋಡ್ ಶೋ ಮೂಲಕ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.

  ಬೇಕಾಬಿಟ್ಟಿ ಗ್ಯಾರಂಟಿ ಘೋಷಿಸಿರುವ ರಾಜ್ಯ ಸರ್ಕಾರ 11 ತಿಂಗಳಿನಿಂದ ಈ ಯೋಜನೆಗಳಿಗೆ ಹಣ ಹೊಂದಿಸಲು ಎಲ್ಲ ವಸ್ತುಗಳ ಬೆಲೆಯನ್ನು ನಾಲ್ಕು ಪಟ್ಟು ಹೆಚ್ಚಳ ಮಾಡಿದೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ 15 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಅನ್ಯಾಯವೆಸಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಅಸಾಧ್ಯ ಎಂಬ ವರದಿಯನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ನೀಡಿರುವುದರಿಂದ ಲೋಕಸಭಾ ಚುನಾವಣೆಯ ನಂತರ ಎಲ್ಲ ಗ್ಯಾರಂಟಿಗಳು ಸ್ಥಗಿತಗೊಳ್ಳುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಭೀಕರ ಬರಗಾಲಕ್ಕೆ 840 ರೈತರು ಮೃತಪಟ್ಟಿದ್ದಾರೆ. ಇವರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲದಾಗಿದೆ ಎಂದರು.

  ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ
  ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಮಾಜ ಸೇವಕ ಬನ್ನಹಳ್ಳಿ ಪುನೀತ್ ನಾಲ್ಕನೂರು ಕೆಜಿ ಸೇಬಿನ ಹಾರ ಹಾಕಿದರು.

  ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳ ಮಾರಣಹೋಮಕ್ಕೆ ಕಾರಣವಾಗಿದ್ದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾಗಿದೆ. ದೇಶದ 80 ಕೋಟಿ ಬಡವರಿಗೆ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುವ ಮೂಲಕ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ದೇವೆಗೌಡರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಒಂದು ರಜೆಯನ್ನು ತೆಗೆದುಕೊಳ್ಳದೆ ಕೆಲಸ ಮಾಡುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

  ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಕೇಂದ್ರ ಸರ್ಕಾರ ಕಳೆದ 5 ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಐದು ಜನರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಸರ್ಕಾರ ಅವರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಮಲೆನಾಡಿನ ಮೇಲೆ ತಾತ್ಸಾರ ಮನೋಭಾವ ಹೊಂದಿದೆ ಎಂದರು.

  ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮಾತನಾಡಿದರು. ಮಾಜಿ ಶಾಸಕ ಗುರುದೇವ್, ಎಚ್.ಎಂ ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಅಶ್ವಥ್, ಕೆ.ಎಲ್ ಸೋಮಶೇಖರ್ ಇತರರು ಇದ್ದರು.

  ರೋಡ್ ಶೋ…
  ಸಕಲೇಶಪುಟ ಪಟ್ಟಣಕ್ಕೆ ಆಗಮಿಸಿದ ವಿಜಯೇಂದ್ರ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹಳೆಯ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸಿದರು. ಸಾಮಾಜಿಕ ಕಾರ್ಯಕರ್ತ ಬನ್ನಹಳ್ಳಿ ಪುನೀತ್ 400 ಕೆಜಿ ತೂಕದ ಸೇಬಿನ ಹಾರವನ್ನು ಸಮರ್ಪಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts