ಚಿತ್ರದುರ್ಗ: ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಶನಿವಾರ ಹಠಾತ್ ಭೇಟಿ ನೀಡಿ ಪರಿಶೀಲಿಸಿದರು. ಗ್ರಂಥಾಲಯದ ವಾಚನಾಲಯ,ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದರು. ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜತೆಗೆ, ಉನ್ನತ ಹುದ್ದೆ ಅಲಂಕರಿಸುವಂತೆ ಸಲಹೆ ನೀಡಿದರು.
ಕೆಎಂಇಆರ್‌ಸಿ ಅಡಿ ಜಿಲ್ಲಾ ಮತ್ತು ನಗರ ಗ್ರಂಥಾಲಯಗಳಿಗೆ ಅನುದಾನ ಬಿಡುಗಡೆಯಾಗಿದ್ದು,ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾ ರಂಭವಾಗಲಿದೆ ಎಂದು ನಗರ ಕೇಂದ್ರ ಮುಖ್ಯಗ್ರಂಥಾಲಯಾಧಿಕಾರಿ ಬಸವರಾಜ್‌ಕೊಳ್ಳಿ ಮಾಹಿತಿ ನೀಡಿದರು. ಗ್ರಂಥಾಲಯದ ಅವರ ಣದೊಳಗೆ ಕಾಮಗಾರಿಗಳ ಸ್ಥಳ ಪರಿಶೀಲಿಸಿದ ಸಿಇಒ,ಕೆಎಂಇಆರ್‌ಸಿ ನಿಯಮಾನುಸಾರ ಅನುದಾನ ಖರ್ಚು ಮಾಡ ಬೇಕು.
ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡಬೇಕೆಂದು ಸೂಚಿಸಿದರು. ಬ್ರೈಲ್ ಪುಸ್ತಕಗಳು ಮತ್ತು ಉಪಕರಣಗಳಗಳ ಬಗ್ಗೆ ಮಾಹಿತಿ ಪಡೆದ ರು. ಶೌಚಗೃಹ ಪರಿಶೀಲಿಸಿ ಅಂಗವಿಕಲರಿಗೆ ಅನುಕೂಲ ಕಲ್ಪಿಸಬೇಕೆಂದರು.
ವಿದ್ಯಾರ್ಥಿ ನಿಲಯ ಪರಿಶೀಲನೆ
ನಗರದ ಮೇದೆಹಳ್ಳಿ,ತಮಟಕಲ್ಲು ರಸ್ತೆ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿ.ಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಿದರು. ಹಾಸ್ಟೆಲ್‌ಗೆ ಗ್ರಂಥಾಲಯ ಬೇಕೆಂದು ವಿದ್ಯಾರ್ಥಿಗ ಳು ಮನವಿ ಮಾಡಿದರು. ಅಲ್ಲೇ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಭೋಜನ ಸವಿದರು.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವ ಲೋಕಿಸಿ ಮಾಹಿತಿ ಪಡೆದರು. ವಾರ್ಡನ್ ಮತ್ತು ವಿದ್ಯಾರ್ಥಿನಿಯರೊಂದಿಗೆ ಕುಂದು-ಕೊರತೆಗಳ ಮಾಹಿತಿ ಪಡೆದರು. ಹಿಂದುಳಿದ ವ ರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯಕ್,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಇತರರು ಇದ್ದರು.
ಗ್ರಂಥಾಲಯ,ಹಾಸ್ಟೆಲ್‌ಗಳಿಗೆ ಸಿಇಒ ಹಠಾತ್ ಭೇಟಿ

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…
ವೇಜ್, ನಾನ್ವೆಜ್ ಖಾದ್ಯ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!
Tomato : ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು ಕರಿ, ಗ್ರೇವಿ, ಸೂಪ್…