ಗ್ರಾಪಂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

blank

ಶಿಕಾರಿಪುರ: ಕಾರ್ಯಕರ್ತರ ಸಂಘಟಿತ ಪ್ರಯತ್ನದ ಫಲವಾಗಿ ಇಂದು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆಯೂ ಕಾರ್ಯಕರ್ತರ ಮೇಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಮಾಳೇರಕೇರಿಯ ಪಕ್ಷದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಪಕ್ಷದ ಉಸಿರು ಮತ್ತು ಗ್ರಾಪಂಗಳೇ ಪಕ್ಷದ ಅಡಿಪಾಯ. ಪ್ರತಿ ಗ್ರಾಪಂನಲ್ಲೂ ಪಕ್ಷ ಸಂಘಟನೆ ಬಲಗೊಳಿಸಬೇಕು. ರಾಜ್ಯ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸುವ ಕೆಲಸವಾಗಬೇಕು. 44 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸುವಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನರೇಂದ್ರ ಮೋದಿ ಅವರ ಸಮರ್ಥ ಆಡಳಿತದಿಂದ ಜಾಗತಿಕ ಮಟ್ಟದಲ್ಲಿ ಭಾರತ ಗಮನ ಸೆಳೆಯುತ್ತಿದೆ. ಪಕ್ಷ ಕಟ್ಟಿದ ಸಂಸ್ಥಾಪಕರ ಆಶಯದಂತೆ ಪಕ್ಷ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ರಾಜ್ಯ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ ಎಂದರು.

ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಕೊಳಗಿ ರೇವಣಪ್ಪ, ಮೆಸ್ಕಾಂ ನಿರ್ದೇಶಕ ರಾಮಾನಾಯ್ಕ, ಅಗಡಿ ಅಶೋಕ್, ಉಡುಗಣಿ ಪ್ರಕಾಶ್, ಅಂಬಾರಗೊಪ್ಪ ಶೇಖರಪ್ಪ, ಸವಿತಾ ಶಿವಕುಮಾರ, ಸಣ್ಣಹನುಮಂತಪ್ಪ, ಮಿಲಿಟರಿ ಬಸವರಾಜ್, ಕವಲಿ ಸುಬ್ರಹ್ಮಣ್ಯ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…