23.2 C
Bangalore
Saturday, December 14, 2019

ಗ್ರಾಮೀಣ ಮಕ್ಕಳಿಂದ ಯಕ್ಷ ಸಂಭ್ರಮ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಹಳಿಯಾಳ: ಸಾಂಸ್ಕೃತಿಕ ಪರಂಪರೆಯುಳ್ಳ ಐತಿಹಾಸಿಕ ಯಕ್ಷಗಾನ ಕಲೆಯಿಂದ ದೂರವಿದ್ದ ಹಳಿಯಾಳ ತಾಲೂಕಿನಲ್ಲಿಯೂ ಇನ್ನು ಯಕ್ಷಗಾನದ ಕ್ರೇಜ್ ವ್ಯಾಪಿಸುವ ಲಕ್ಷಣಗಳು ಕಂಡು ಬರಲಾರಂಭಿಸಿವೆ.

ಗ್ರಾಮೀಣ ಭಾಗ ಚಿಬ್ಬಲಗೇರಿ ಪ್ರೌಢಶಾಲೆಯ ಮಕ್ಕಳು ಈ ಭಾಗದಲ್ಲಿ ಯಕ್ಷಗಾನ ಕಲೆಯ ಹುಚ್ಚು ಹಚ್ಚಿದ್ದು, ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಪಾಲಕರ ಜೊತೆಯಲ್ಲಿ ಸಾರ್ವಜನಿಕರು ಫಿದಾ ಆಗುತ್ತಿದ್ದಾರೆ.

ಯಕ್ಷಗಾನದ ಪಾಠ: ಗೊಂಬೆಯಾಟದ ಮೂಲಕ ವಿಜ್ಞಾನ ಗಣಿತ, ಸಮಾಜಶಾಸ್ತ್ರ, ಕನ್ನಡ, ಹಿಂದಿ, ಇಂಗ್ಲಿಷ್ ಇತ್ಯಾಧಿ ವಿಷಯಗಳನ್ನು ಮಕ್ಕಳು ಸುಲಭವಾಗಿ ಅರಿಯುವಂತೆ ಕಲಿಸುವ ವಿಶಿಷ್ಟ ಭೋಧನಾ ಶೈಲಿಯನ್ನು ಆರಂಭಿಸಿದ್ದ ಸಿದ್ದಪ್ಪ ಬಿರಾದಾರ ಈಗ ಯಕ್ಷಗಾನ ಕಲೆಯನ್ನು ಹಳಿಯಾಳ ತಾಲೂಕಿನಲ್ಲಿ ಪರಿಚಯಿಸಲು ಹೆಜ್ಜೆಯಿಟ್ಟಿದ್ದಾರೆ. ಅದರ ಮೊದಲ ಹಂತವಾಗಿ ಅವರು ತಮ್ಮ ಚಿಬ್ಬಲಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಹುಟ್ಟಿಸಿದ್ದಾರೆ. ಶಿರಸಿಯ ನಿರ್ಮಲಾ ಹೆಗಡೆಯವರ ಮೂಲಕ ಶಾಲಾ ಮಕ್ಕಳಿಗೆ ಯಕ್ಷಗಾನ ಸಂಭಾಷಣೆ, ನೃತ್ಯದ ಶೈಲಿಯನ್ನು ಕಲಿಸಿದ್ದಾರೆ. ಮಕ್ಕಳು ಕಲಿಯಲು ಬಯಸಿದ ಯಕ್ಷಗಾನಕ್ಕೆ ಪಾಲಕರೂ ಪ್ರೋತ್ಸಾಹಿಸಿದರು.

ಲವಕುಶ ಪ್ರದರ್ಶನ: ಶಾಲಾ ಮಕ್ಕಳು ಕಲಿತ ಯಕ್ಷಗಾನ ಪ್ರದರ್ಶನಕ್ಕೆ ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಾನುಭೂತಿ ಸಭಾಂಗಣದಲ್ಲಿ ಯಕ್ಷ ಸಂಭ್ರಮಾರಣೆಗೆ ವೇದಿಕೆ ಕಲ್ಪಿಸಲಾಯಿತು. ಸಿದ್ದಪ್ಪ ಬಿರಾದಾರ ನೇತೃತ್ವದ ಹೊಂಗಿರಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಚಿಬ್ಬಲಗೇರಿ ಪ್ರೌಢಶಾಲಾ ಮಕ್ಕಳಿಂದ ಚೊಚ್ಚಲ ಆಟ ಲವಕುಶ ಪ್ರಸಂಗದ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶಿರಸಿಯ ಗಜಾನನ ಭಟ್, ಚಂಡೆಯಲ್ಲಿ ಶ್ರೀಪಾದ ಭಟ್, ಮೃದಂಗದಲ್ಲಿ ಉಮೇಶ ಹೆಗಡೆ ಸಹಕರಿಸಿದರು.

ಬಾಲ ಕಲಾವಿದರು: ಲವಕುಶ ಪ್ರದರ್ಶನದಲ್ಲಿ ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಪಾಲ್ಗೊಂಡರು. ರಾಘವೇಂದ್ರ ಘಾಡಿ (ವಟು), ಶ್ರೀನಾಥ ಬುವಾಜಿ (ದೂತ), ದರ್ಶನ ಧಾರವಾಡಕರ ( ಚಂದ್ರಕೇತು), ಸಾಯಿರಾಮ ಕಶೀಲಕರ (ವಟು), ದೇಮಾಣಿ ಹುಂದಳೇಕರ (ಸೀತೆ). ನೀರಜ ಖಾಮಡೊಳ್ಳಕರ (ವಾಲ್ಮೀಕಿ), ಅಂಜಲಿ ಶಿಂಧೆ (ಲವ), ವರ್ಷಾ ಧಾರವಾಡಕರ (ಶತ್ರುಘ್ನ), ದಿವ್ಯಾ ಶಿಂಧೆ (ರಾಮ), ಜ್ಯೋತಿ ಸಾಳಗಾಂವಕರ (ಬಾಲಗೋಪಾಳ), ಕಾದಂಬಿನಿ ಮಿರಾಶಿ (ಕುಶ), ಸುವರ್ಣಾ ಯಳಗುಕರ(ಬಾಲಗೋಪಾಳ) ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಗಮನ ಸೆಳೆದರು.

ಅಕ್ಷರಾಭ್ಯಾಸದ ಜೊತೆಯಲ್ಲಿ ಬೊಂಬೆಯಾಟ ಹಾಗೂ ಯಕ್ಞಗಾನದ ಮೂಲಕ ಮಕ್ಕಳಲ್ಲಿ ಶಿಕ್ಷಣ ಕಲೆಯ ಅಭಿರುಚಿಯನ್ನು ಹುಟ್ಟಿಸುವ ವಿಶಿಷ್ಟ ಭೋದನಾ ಶೈಲಿ ತಾಲೂಕಿನಲ್ಲಿ ಆರಂಭಗೊಂಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಹೆಜ್ಜೆಯಾಗಿದೆ.
-ಸಮೀರ ಮುಲ್ಲಾ (ಕ್ಷೇತ್ರ ಶಿಕ್ಷಣಾಧಿಕಾರಿ)

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...