26.8 C
Bangalore
Friday, December 13, 2019

ಚಟುವಟಿಕೆ ಇಲ್ಲದ ರಂಗಮಂದಿರ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಶಿಗ್ಗಾಂವಿ: ಸಮರ್ಪಕ ನಿರ್ವಹಣೆ ಮತ್ತು ವ್ಯವಸ್ಥೆಗಳಿಲ್ಲದ ಕಾರಣ ಪಟ್ಟಣದಲ್ಲಿನ ರಂಗಮಂದಿರ ಇದ್ದೂ ಇಲ್ಲದಂತಾಗಿದ್ದು, ಕಲಾ ಪ್ರದರ್ಶನಕ್ಕೆ ಕಲಾವಿದರು ಪರದಾಡುವಂತಾಗಿದೆ.

ಪಟ್ಟಣದ ಸವಣೂರ ವೃತ್ತದ ಸಂತೆ ಮೈದಾನದಲ್ಲಿ 2005-06ರಲ್ಲಿ ಶರೀಫ ಶಿವಯೋಗಿಗಳ ಕಲಾ ಭವನ ಮತ್ತು ಬಯಲು ರಂಗ ಮಂದಿರಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅವುಗಳ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯ ಆಗರವಾಗಿವೆ.

ರಂಗ ಮಂದಿರದಲ್ಲಿ ಪ್ರತಿವಾರ ನಡೆಯುವ ಸಂತೆಯ ದಿನದಂದು ತರಕಾರಿ ಹರಾಜು, ಚಹಾ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಉಳಿದ ದಿನಗಳಲ್ಲಿ ಬಿಡಾಡಿ ದನಗಳ, ಹಂದಿಗಳ, ಕುಡುಕರ ತಾಣವಾಗಿರುತ್ತದೆ. ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಕಸದ ರಾಶಿ, ಮದ್ಯದ ಪಾಕೀಟ್​ಗಳಿಂದ ದುರ್ನಾತ ಬೀರುತ್ತಿದೆ. ಕಟ್ಟಡಕ್ಕೆ ವಿದ್ಯುತ್ ಸಂಪರ್ಕವಿಲ್ಲ. ಪುರಸಭೆ ಸಿಬ್ಬಂದಿಯೂ ಭವನದಲ್ಲಿಯೇ ನಿರುಪಯುಕ್ತ ವಸ್ತುಗಳನ್ನು ಹಾಕಿರುವುದರಿಂದ ರಂಗಮಂದಿರದ ಸ್ಥಿತಿ ಯಾರಿಗೂ ಬೇಡ ಎಂಬಂತಾಗಿದೆ.

ರಂಗ ಮಂದಿರದ ಅವ್ಯವಸ್ಥೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಗಮನಹರಿಸಿಲ್ಲ ಎಂದು ಕಲಾವಿದರು ಆಪಾದಿಸುತ್ತಾರೆ. ಬಯಲು ರಂಗ ಮಂದಿರಕ್ಕೆ ವಿದ್ಯುತ್ ವ್ಯವಸ್ಥೆ, ಕಟ್ಟಡ ದುರಸ್ತಿ, ಸ್ವಚ್ಛತೆಗೆ ಗಮನ ಹರಿಸಿ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂದು ನೇಪಥ್ಯ ಕಲಾವಿದರ ಸಂಘ, ಗಾನಯೋಗಿ ಪುಟ್ಟರಾಜ ಕವಿ ಗವಾಯಿಗಳವರ ಕಲಾ ಸಂಘಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈಗಾಗಲೇ ಹಲವು ಬಾರಿ ರಂಗ ಮಂದಿರ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛತೆಗೆ ಜನರ ಸಹಕಾರವೂ ಅಗತ್ಯ. ಆದರೆ, ಸಾರ್ವಜನಿಕರು ಸಹಕರಿಸುತ್ತಿಲ್ಲ. ಮತ್ತೆ ಮತ್ತೆ ಗಲೀಜು ಮಾಡುತ್ತಿದ್ದಾರೆ. ಎರಡು ಭವನಗಳನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

| ಪಿ.ಕೆ. ಗುಡದಾರಿ, ಪುರಸಭೆ ಮುಖ್ಯಾಧಿಕಾರಿ

ಅನೈತಿಕ ಚಟುವಟಿಕೆಗಳ ತಾಣದಂತಾಗಿರುವ ಶರೀಫ ಭವನ ಮತ್ತು ಬಯಲು ಕಲಾ ಮಂದಿರಗಳಲ್ಲಿ ಸುಸಜ್ಜಿತವಾಗಿ ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿಯಾದರೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವಂತಾಗಬೇಕು. ಈ ಎರಡು ಭವನಗಳಲ್ಲಿ ಮನರಂಜನೆ, ಸಾಮಾಜಿಕ, ಪ್ರಗತಿಪರ ಚಟುವಟಿಕೆಗಳು ನಡೆಸಲು ಅನುಕೂಲವಾಗುವಂತ ಮೂಲಸೌಕರ್ಯ ಒದಗಿಸಬೇಕು.

| ಕೊಟ್ರೇಶ ಮಾಸ್ತರ ಬೆಳಗಲಿ, ಗೌರವ ಅಧ್ಯಕ್ಷರು, ಪುಟ್ಟರಾಜ ಗವಾಯಿ ಕಲಾ ಸಂಘ

ಬಯಲು ಕಲಾ ಮಂದಿರದ ಆವರಣದ ಸುತ್ತಲೂ ಗೋಡೆ ನಿರ್ಮಾಣ ಮಾಡಿ ರಂಗಮಂದಿರಕ್ಕೆ ಬಾಗಿಲು (ಶಟರ್ಸ್) ನಿರ್ವಿುಸಬೇಕು. ನೀರಿನ ವ್ಯವಸ್ಥೆ, ಶೌಚಗೃಹ ಸೇರಿ ಮೂಲಸೌಕರ್ಯ ಒದಗಿಸಬೇಕು. ಭವನದ ಸುತ್ತಲೂ ಶುಚಿತ್ವ ಕಾಪಾಡಲು ಅಧಿಕಾರಿಗಳು ಮುಂದಾಗಬೇಕು.

| ಶಂಕರ ಅರ್ಕಾಚಾರಿ, ನೇಪಥ್ಯ ಕಲಾವಿದ

 

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....