ಚನ್ನಬಸವ ಸ್ವಾಮೀಜಿ ಆಶೀರ್ವಾದ ಪಡೆದ ಬೋಸ್

blank

  • ನಂಜನಗೂಡು : ಹಿಂದುತ್ವ ಹಾಗೂ ಕೋಮುದ್ವೇಷ ಬಿತ್ತಿ ಜನರನ್ನು ದಾರಿ ತಪ್ಪಿಸುತ್ತಿರುವ ಬಿಜೆಪಿ ಕಳೆದ 10 ವರ್ಷಗಳಲ್ಲಿ ಬಡವರ ಪರವಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಆರೋಪಿಸಿದರು.
    ನಗರದ ಹೊರವಲಯದಲ್ಲಿರುವ ಮಲ್ಲನಮೂಲೆ ಶ್ರೀಗುರುಕಂಬಳೀಶ್ವರ ಮಠಕ್ಕೆ ಭಾನುವಾರ ಭೇಟಿ ನೀಡಿ ಶ್ರೀ ಚನ್ನಬಸವ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

  • ಕಳೆದ ಹತ್ತು ವರ್ಷದಲ್ಲಿ ಬೆಲೆ ಏರಿಕೆ, ನಿರುದ್ಯೋಗದಿಂದ ಜನರು ತತ್ತರಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಬಳಿ ಹಿಂದುತ್ವ ಬಿಟ್ಟರೆ ಬೇರೆ ಏನು ಅಸ್ತ್ರಗಳಿಲ್ಲ. ಆದ್ದರಿಂದ ಅವರು ಅಭಿವೃದ್ದಿಯ ಬಗ್ಗೆ ಮಾತನಾಡುವುದಿಲ್ಲ ಬದಲಾಗಿ ಕೋಮುದ್ವೇಷ ಬಿತ್ತಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ಞಾವಂತ ಮತದಾರರು ಈ ಬಾರಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

  • ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಕೀರ್ತಿಗೆ ಭಾಜನವಾಗಿದೆ. ಜತೆಗೆ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಹಂಬಲದೊಂದಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಶೇ.95 ರಷ್ಟು ಮಹಿಳೆಯರು ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಇದರಿಂದ ಮಹಿಳೆಯರು ಮತ್ತು ಯುವಕರು, ಎಲ್ಲ ವರ್ಗದ ಮತದಾರರು ಕೂಡ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಉತ್ಸುಕರಾಗಿದ್ದಾರೆ ಎಂದರು.
  • ಬಳಿಕ ದೇವನೂರು ಗುರುಮಲ್ಲೇಶ್ವರ ಮಠಕ್ಕೆ ಭೇಟಿ ನೀಡಿದ ಅವರು ಮಹಾಂತ ಸ್ವಾಮೀಜಿ ಆಶೀರ್ವಾದ ಪಡೆದರು.
    ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಹದೇವಪ್ಪ, ಮುಖಂಡರಾದ ಇಂದನ್‌ಬಾಬು, ಎನ್.ಟಿ.ಗಿರೀಶ್, ಜಿ.ಪಂ. ಮಾಜಿ ಸದಸ್ಯರಾದ ಕೆ.ಬಿ.ಸ್ವಾಮಿ, ಚೋಳರಾಜು, ತಾಪಂ ಮಾಜಿ ಅಧ್ಯಕ್ಷ ತಮ್ಮಣ್ಣೇಗೌಡ, ಕುರುಬರ ಸಂಘದ ತಾಲೂಕು ಅಧ್ಯಕ್ಷ ಕೆಂಪಣ್ಣ, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿಂ, ಮಡಿವಾಳ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನಕುಮಾರ್ ಸೇರಿದಂತೆ ಇತರರಿದ್ದರು.

ಚಿತ್ರ:31ಎನ್‌ಜಿಡಿ1
ನಂಜನಗೂಡಿನ ಮಲ್ಲನಮೂಲೆ ಮಠಕ್ಕೆ ಭೇಟಿ ನೀಡಿದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಚನ್ನಬಸವಸ್ವಾಮೀಜಿ ಆಶೀರ್ವಾದ ಪಡೆದರು.

blank

Details

Share This Article
blank

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

ಮಳೆಗಾಲದಲ್ಲಿ ಕಲುಷಿತ ಆಹಾರ, ನೀರಿನ ಮೂಲಕ ವೈರಸ್! ಎಚ್ಚರ ತಪ್ಪಿದರೆ ಅನಾರೋಗ್ಯ…monsoon

monsoon : ಮಳೆಗಾಲ  ಹವಾಮಾನದಲ್ಲಿನ ಬದಲಾವಣೆಗಳು  ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಸೇವಿಸುವ ಆಹಾರ ಮತ್ತು…

blank