ಮಕ್ಕಳ ಪ್ರತಿಭೆ ಗುರುತಿಸುವುದು ಪಾಲಕರು, ಶಿಕ್ಷಕರ ಜವಾಬ್ದಾರಿ

ಹಾಸನ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವರಲಕ್ಷ್ಮೀ ಹೇಳಿದರು.

ಚೆನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬ ಶಿಕ್ಷಕ ಹಾಗೂ ಪಾಲಕರ ಜವಾಬ್ದಾರಿಯಾಗಿದೆ ಎಂದರು.

ತಾಲೂಕು ಪಂಚಾಯಿತಿ ಸದಸ್ಯೆ ಪ್ರಮಿಳಾ ಪ್ರಕಾಶ್, ಶ್ರವಣಬೆಳಗೊಳ ಹೋಬಳಿ ಶಿಕ್ಷಣ ಸಂಯೋಜಕ ರುದ್ರೇಶ್, ದಿಡಗ ಕ್ಲಸ್ಟರ್ ಸಿಆರ್​​ಪಿ ರಾಮೇಗೌಡ, ಕಬ್ಬಳಿ ಕ್ಲಸ್ಟರ್ ಸಿ.ಆರ್.ಪಿ ಮಧು, ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *