16 C
Bangalore
Saturday, December 7, 2019

ಚರಂಡಿ ಪಾಲಾಗುತ್ತಿದೆ ನೀರು!

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಗದಗ:ಗದಗ-ಬೆಟಗೇರಿ ಅವಳಿನಗರದಲ್ಲಿ ನಾಲ್ಕಾರು ದಿನಗಳಿಗೊಮ್ಮೆ ತುಂಗಭದ್ರಾ ನದಿಯಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದು ಖುಷಿಯ ಸಂಗತಿ. ಆದರೆ, ಪೈಪ್​ಗಳು ಒಡೆದು ಅಪಾರ ಪ್ರಮಾಣದ ನೀರು ಸೋರಿಕೆಯಾಗಿ ಚರಂಡಿ ಪಾಲಾಗುತ್ತಿದೆ.

ಕರ್ನಾಟಕ ನಗರ ಮೂಲಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ನಿಗಮ ಅವಳಿನಗರದ ನೀರು ಪೂರೈಕೆ ಉಸ್ತುವಾರಿ ನೋಡಿಕೊಳ್ಳುತ್ತಿದೆ. ನಿರಂತರ ನೀರು ಪೂರೈಕೆ ಯೋಜನೆಯಡಿ 130 ಕೋಟಿ ರೂ. ಖರ್ಚು ಮಾಡಿ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್​ನಿಂದ 65 ಕಿಮೀ ಅಂತರದ ಅವಳಿನಗರಕ್ಕೆ ನೀರು ತರಲಾಗುತ್ತಿದೆ. ಅಷ್ಟು ದೂರದಿಂದ ತಂದಿರುವಂತಹ ನೀರಿನಲ್ಲಿ ಶೇ.30 ರಷ್ಟು ನೀರು ಪೈಪ್ ಒಡೆದು ಸೋರಿಕೆಯಾಗಿ ಚರಂಡಿ ಸೇರುತ್ತದೆ. ಇಲ್ಲವೇ ರಸ್ತೆ ಮೇಲೆ ಹರಿದು ಸಂಚಾರಕ್ಕೆ ತೊಂದರೆಯನ್ನುಂಟು ಮಾಡುತ್ತಿದೆ. ಇಷ್ಟಾದರೂ ನಿಗಮದ ಅಧಿಕಾರಿಗಳು ಸೋರಿಕೆ ತಡೆಯಲು ಮುಂದಾಗುತ್ತಿಲ್ಲ.

ಬೆಟಗೇರಿ 5ನೇ ವಾರ್ಡ್ ಶಿವಾಜಿನಗರ, ಪಂಚಲಕ್ಷ್ಮಿ ಬಡಾವಣೆ, ಹೊಸ ತರಕಾರಿ ಮಾರುಕಟ್ಟೆ ಎದುರು, 7ನೇ ವಾರ್ಡ್​ನ ಪೆಂಡಾರಗಲ್ಲಿ, ಗಾರ್ಗಿಪೇಟೆ, ಕನ್ಯಾಳ ಅಗಸಿ, ಶರಣಬಸವೇಶ್ವರ ನಗರ, ಮುಳಗುಂದ ನಾಕಾ ಬಳಿ ಹುಡ್ಕೋ, ಎಸ್.ಎಂ. ಕೃಷ್ಣನಗರ ಸೇರಿ ಅವಳಿನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರು ಚರಂಡಿ ಸೇರುತ್ತಿದೆ. ಇದನ್ನು ತಡೆಯಬೇಕು ಎಂದು ಸಾರ್ವಜನಿಕರು ನಗರಸಭೆ ದೂರು ನೀಡಿದರೆ 24*7 ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಿದ ಕರ್ನಾಟಕ ನಗರ ಮೂಲಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ನಿಗಮಕ್ಕೆ ದೂರು ಕೊಡಿ ಎಂದು ಕೈತೊಳೆದುಕೊಳ್ಳುತ್ತಾರೆ.

ಸತತ ಬರಗಾಲದಿಂದ ಜಿಲ್ಲೆಯ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಆದರೆ, ಅವಳಿನಗರಕ್ಕೆ 24*7 ಯೋಜನೆ ಜಾರಿಗೊಂಡ ನಂತರ ಕುಡಿಯುವ ನೀರಿನ ಸಮಸ್ಯೆ ಕೊಂಚ ಸುಧಾರಿಸಿದರೂ ಪೈಪ್​ಗಳು ಒಡೆದು ನೀರು ಪೂರೈಕೆ ವ್ಯವಸ್ಥೆ ಅಧ್ವಾನವಾಗಿದೆ. ಕಳೆದೊಂದು ತಿಂಗಳಿಂದ ವಿನಾಕಾರಣ ಅಪಾರ ಪ್ರಮಾಣದ ನೀರು ಚರಂಡಿ ಪಾಲಾಗುತ್ತಿದ್ದರೂ ಸೋರಿಕೆ ಗುರುತಿಸಿ ದುರಸ್ತಿ ಮಾಡುತ್ತಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ.

ನಿಗಮ ಮತ್ತು ನಗರಸಭೆ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದ ಅಪಾರ ಪ್ರಮಾಣದಲ್ಲಿ ಕುಡಿಯುವ ನೀರು ಚರಂಡಿ ಸೇರತೊಡಗಿದೆ. ನಿಗಮಕ್ಕೆ ದೂರು ಸಲ್ಲಿಸಿದರೆ ಅವಳಿನಗರದ ಕೆಲ ಭಾಗಗಳಲ್ಲಿ ಇನ್ನು ನಿರಂತರ ನೀರು ಯೋಜನೆ ಅನುಷ್ಠಾನಗೊಳಿಸಿಲ್ಲ. ಬೆಟಗೇರಿಯ ಕೆಲ ಭಾಗದಲ್ಲಿ ಹಳೆಯ ಪೈಪ್ ಲೈನ್​ಗಳು ಇದ್ದು, ರಸ್ತೆ ಕಾಮಗಾರಿ ಸೇರಿ ವಿವಿಧ ಕಾಮಗಾರಿಗಳಿಗೆ ರಸ್ತೆ ಅಗೆಯುವುದರಿಂದ ಪೈಪ್​ಗಳು ಒಡೆದುಹೋಗಿವೆ. ಪೈಪ್ ಒಡೆದಿರುವ ಬಹುತೇಕ ಪ್ರದೇಶಗಳಲ್ಲಿ ನಿರಂತರ ನೀರು ಯೋಜನೆಯಡಿ ಪೈಪ್ ಅಳವಡಿಸಿಲ್ಲ ಎಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ.

ಯೋಜನೆ ಅನುಷ್ಠಾನಗೊಳಿಸಿದ ಗುತ್ತಿಗೆದಾರರು ಐದು ವರ್ಷಗಳ ಕಾಲ ಅದರ ನಿರ್ವಹಣೆ ಮಾಡಬೇಕೆಂದು ಸರ್ಕಾರ ಗುತ್ತಿಗೆ ನೀಡುವಾಗಲೇ ಷರತ್ತು ವಿಧಿಸಿದೆ. ಆದರೆ, ದುರಸ್ತಿ ಮಾಡಲು ಕಾರ್ವಿುಕರು ಇಲ್ಲ, ತಾಂತ್ರಿಕ ಸಿಬ್ಬಂದಿ ಕೆಲಸ ಬಿಟ್ಟಿದ್ದಾರೆ, ಪೈಪ್​ಗಳ ದುರಸ್ತಿಗೆ ಅಗತ್ಯ ಸಾಮಗ್ರಿಗಳ ಕೊರತೆ ಇದೆ ಎಂದು ಅಧಿಕಾರಿಗಳು ಹೇಳುತ್ತಾರೆಂದು ಜನರು ಆರೋಪಿಸುತ್ತಿದ್ದಾರೆ.

ಗದಗ-ಬೆಟಗೇರಿ ಅವಳಿನಗರಕ್ಕೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತಿದ್ದು, ಕೆಲ ಕಡೆಗಳಲ್ಲಿ ನೀರು ಸೋರಿಕೆ ಕುರಿತು ಮಾಹಿತಿ ಲಭ್ಯವಾಗಿದೆ. ಅವುಗಳ ದುರಸ್ತಿಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದ್ದು, ಇದಕ್ಕಾಗಿ ತಲಾ ನಾಲ್ಕೈದು ಜನರ ಎರಡು ತಂಡಗಳನ್ನು ರಚಿಸಿ ಸೋರಿಕೆ ತಡೆಗಟ್ಟಲಾಗುವುದು. ಒಂದೆರಡು ದಿನಗಳಲ್ಲಿ ಎಲ್ಲ ಲೀಕೇಜ್​ಗಳನ್ನು ಸರಿಪಡಿಸಲಾಗುವುದು.

|ಬಸವರಾಜ ಬಿದರಕಟ್ಟಿ, ಕಾರ್ಯಪಾಲಕ ಇಂಜಿನಿಯರ್, ಕರ್ನಾಟಕ ನಗರ ಮೂಲಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ನಿಗಮ

ಅವಳಿನಗರ ನೀರು ಪೂರೈಕೆಯ ಸಂಪೂರ್ಣ ಜವಾಬ್ದಾರಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ನಿಗಮಕ್ಕೆ ವಹಿಸಲಾಗಿದೆ. ನಗರದ ಅನೇಕ ಕಡೆಗಳಲ್ಲಿ ನೀರು ಸೋರಿಕೆ ದೂರುಗಳು ಬಂದಿದ್ದು, ಇದನ್ನು ಸರಿಪಡಿಸಬೇಕೆಂದು ನಿಗಮದ ಗಮನಕ್ಕೆ ತರಲಾಗಿದೆ. ನಾಳೆ ಬೆಳಗ್ಗೆ ದುರಸ್ತಿ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳುತ್ತಾರಾದರೂ ದುರಸ್ತಿ ಮಾಡುತ್ತಿಲ್ಲ. ನಗರಸಭೆ ವೃತ್ತದ ಬಳಿಯಲ್ಲಿ ನೀರು ಪೋಲಾಗುತ್ತಿದೆ ಎಂದು ನಾನೇ ಸ್ವತಃ ನಾನೇ ಹೇಳಿ 20 ದಿನಗಳಾದರೂ ದುರಸ್ತಿ ಮಾಡಿಲ್ಲ. ಮತ್ತೊಮ್ಮೆ ನಿಗಮದ ಕಾರ್ಯಪಾಲಕ ಇಂಜಿನಿಯರ್ ಅವರ ಗಮನಕ್ಕೆ ತರಲಾಗುವುದು.

ದೀಪಕ ಹರದಿ, ಪೌರಾಯುಕ್ತ, ಗದಗ-ಬೆಟಗೇರಿ ನಗರಸಭೆ

ಬೆಟಗೇರಿಯ ಹಲವಾರು ಕಡೆಗಳಲ್ಲಿ ಕುಡಿಯುವ ನೀರು ಹರಿದು ಚರಂಡಿ ಸೇರಿದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬರಗಾಲದಿಂದ ಕುಡಿಯುವ ನೀರಿಗಾಗಿ ಜನರು ತೀವ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ವಿನಾಕಾರಣ ಕುಡಿಯುವ ನೀರು ಚರಂಡಿ ಹರಿದು ಹೋಗುವುದನ್ನು ನೋಡಿದರೆ ಸಂಕಟವಾಗುತ್ತದೆ.

|ರಾಘವೇಂದ್ರ ಯಳವತ್ತಿ, ಗದಗ-ಬೆಟಗೇರಿ ನಗರಸಭೆ ಮಾಜಿ ಸದಸ್ಯ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...