ಚನ್ನರಾಯಪಟ್ಟಣ : ವಾಹನ ಸವಾರರು ರಸ್ತೆ ಸುರಕ್ಷತಾ ಕ್ರಮ ಅನುಸರಿಸುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಸಿ.ವಿ.ರವಿ ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಸನ ವಿಭಾಗದ ಚನ್ನರಾಯಪಟ್ಟಣ ಘಟಕದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮತ್ತು ಇಂಧನ ಉಳಿತಾಯ ಮಾಸಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮ ಪಾಲಿಸಿದರೆ ಅರ್ಧದಷ್ಟು ಅಪಘಾತಗಳನ್ನು ತಡೆಗಟ್ಟಬಹುದು. ಅತಿ ವೇಗದ ಜತೆಗೆ ಅಜಾಗರೂಕ ಚಾಲನೆಯೂ ಸಾವು ನೋವಿಗೆ ಕಾರಣವಾಗುತ್ತಿದೆ. ಆದಷ್ಟು ರಕ್ಷಣಾತ್ಮಕವಾಗಿ ವಾಹನ ಚಾಲನೆ ಮಾಡಿದರೆ ಅಪಘಾತಗಳಿಂದ ದೂರ ಉಳಿಯಬಹುದು ಎಂದರು.
ಒಂದು ವರ್ಷದಲ್ಲಿ ಕನಿಷ್ಠ 1.75 ಲಕ್ಷ ಜನ ಅಪಘಾತಗಳಿಂದ ಸಾಯುತ್ತಿದ್ದಾರೆ. 5 ಲಕ್ಷ ಜನ ಗಾಯಗೊಳ್ಳುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವುದು, ವಿಮೆ, ಪರವಾನಗಿ, ವಾಹನಗಳ ಎಫ್‌ಸಿ ಸೇರಿದಂತೆ ನಿಯಮಾನುಸಾರ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಅನುಸರಿಸಬೇಕು. ವಾಹನ ಚಾಲಕರ ನಿರ್ಲಕ್ಷ್ಯವೇ ಅಪಘಾತಗಳಿಗೆ ಕಾರಣ. ರಸ್ತೆ ಬದಿ ಸೂಚನಾ ಫಲಕಗಳನ್ನು ಗಮನಿಸಿದರೆ ಅಪಘಾತ ತಡೆಗಟ್ಟಬಹುದು ಎಂದರು.
ವಿಭಾಗೀಯ ಸಂಚಲನಾಧಿಕಾರಿ ವಿ.ಸತೀಶ್ ಮಾತನಾಡಿ, ರಸ್ತೆ ಅಪಘಾತಗಳನ್ನು ತಪ್ಪಿಸಲು ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಚಾಲಕರಲ್ಲಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸರು ಜಾರಿಗೆ ತಂದಿರುವ ನಿಯಮಗಳನ್ನು ಚಾಲಕರು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿ ವರ್ಷ ಜನವರಿ 15ರಿಂದ ಫೆಬ್ರವರಿ 15 ವರೆಗೆ ಇಂಧನ ಉಳಿತಾಯ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಇಂಧನ ಉಳಿಸಿ ದೇಶದ ಅಭಿವೃದ್ಧಿಗೆ ಕಾಣಿಕೆ ನೀಡಬೇಕಾಗಿದೆ. ಚಾಲಕರು ಇಂಧನ ಉಳಿಸಲು ಒತ್ತು ನೀಡಿದಾಗ ಸಂಸ್ಥೆ ಅಭಿವೃದ್ಧಿಗೆ ನೆರವಾಗಬಹುದು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿ.ಮಹೇಶ್ ಮಾತನಾಡಿ, ಮಾನವನ ತಪ್ಪುಗಳಿಂದಲೇ ಅನೇಕ ಅಪಘಾತಗಳು ನಡೆಯುತ್ತಿವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು.ಸ್ವಲ್ಪ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.
ಚಾಲಕರು ಪ್ರತಿನಿತ್ಯ ವಾಹನ ಚಾಲನೆ ತೊಡಗಿರುತ್ತಾರೆ. ಬಿಡುವು ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಇಸಿಜಿ, ರಕ್ತಪರೀಕ್ಷೆ, ಆರೋಗ್ಯ ತಪಾಸಣೆ ಲಭ್ಯವಿದ್ದು ಸಾರಿಗೆ ಇಲಾಖೆ ಸಿಬ್ಬಂದಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.
ನಿವೃತ್ತಿ ಹೊಂದಿದ ಸಂಚಾರ ನಿಯಂತ್ರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಕೆ.ಎನ್.ಹರೀಶ್, ಘಟಕದ ಪ್ರಭಾರ ವ್ಯವಸ್ಥಾಪಕ ಎ.ಎ.ಬಸವರಾಜು, ನಾಗರಾಜು, ಸಹಾಯಕ ಕಾರ್ಯ ಅಧೀಕ್ಷಕ ನೂತನ್, ಸಂಚಾರ ನಿರೀಕ್ಷಕರಾದ ಎಚ್.ಎಚ್.ಮಲ್ಲೇಶ್, ಕೆ.ಎಲ್.ಕೃಪಾಕರ್, ಲಕ್ಷ್ಮೀಗೌಡ ಸೇರಿದಂತೆ ಚಾಲಕರು ಹಾಗೂ ನಿರ್ವಾಹಕರು ಭಾಗವಹಿಸಿದ್ದರು.
ಚಾಲಕರು ರಸ್ತೆ ಸುರಕ್ಷತಾ ಕ್ರಮ ಅನುಸರಿಸಲಿ

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…