ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಖಾತೆ ತೆರೆಯಲಿ

ಚಿಕ್ಕಬಳ್ಳಾಪುರ: ಬಿಜೆಪಿ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ಸೂಕ್ತ ಸ್ಥಾನಮಾನ ನೀಡುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಒಂದು ನಿದರ್ಶನ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶೋಭಾ ಸುರೇಂದ್ರನ್ ತಿಳಿಸಿದರು.

ನಗರದ ನ್ಯೂ ಹೊರೈಜಾನ್ ಆಂಗ್ಲ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದಾರೆ. ಹೀಗೆ ಪಕ್ಷಕ್ಕಾಗಿ ದುಡಿದ ಅನೇಕರು ಇಂದು ಉತ್ತಮ ಸ್ಥಾನದಲ್ಲಿದ್ದಾರೆ. ಇದನ್ನರಿತು ಕಾರ್ಯಕರ್ತರು ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿದೆ. ಆದರೆ, ಇಲ್ಲಿ ಬಿಜೆಪಿಯಿಂದ ಯಾರೂ ಶಾಸಕರಾಗಿ ಆಯ್ಕೆಯಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ಖಾತೆ ತೆರೆಯಬೇಕು ಎಂದರು.

ದೇಶದಲ್ಲಿ 11.86 ಕೋಟಿ ಸದಸ್ಯರನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದು, ಜಿಲ್ಲೆಯಲ್ಲಿ ಕಳೆದ ವರ್ಷ 1.32 ಲಕ್ಷ ಸದಸ್ಯತ್ವ ಮಾಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಾ ಜಿ.ವಿ.ಮಂಜುನಾಥ್ ತಿಳಿಸಿದರು.

ಬಿಜೆಪಿ ಉಪಾಧ್ಯಕ್ಷ ರಾಮಲಿಂಗಪ್ಪ, ಚಿಕ್ಕಬಳ್ಳಾಪುರ ಉಸ್ತುವಾರಿ ಸಚ್ಚಿದಾನಂದಮೂರ್ತಿ, ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ, ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ, ಗೋಪಿನಾಥ್, ಅರುಣ್ ಬಾಬು, ಮುರಳೀಧರ್ ಇತರರಿದ್ದರು.

 

 

Leave a Reply

Your email address will not be published. Required fields are marked *