ಚಿತ್ರದುರ್ಗದಲ್ಲಿ ಎಸ್‌ಬಿಐ ಪ್ರಾದೇಶಿಕ ಕಚೇರಿಗೆ ಸಂಸದರ ಒತ್ತಾಯ

blank

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿ ಪ್ರಾರಂಭಿಸುವಂತೆ ಸಂಸದ ಗೋವಿಂದ ಎಂ. ಕಾರಜೋಳ ಅವರು, ಬೆಂಗಳೂರು ಎಸ್‌ಬಿಐ ಜನರಲ್ ಮ್ಯಾನೇಜರ್ ಅವರನ್ನು ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿ ಬ್ಯಾಂಕಿನ ಪ್ರಾದೇಶಿಕ ಕಚೇರಿ ಪ್ರಾರಂಭಿಸಬೇಕೆಂಬುದು ಬಹಳ ದಿನಗಳ ಬೇಡಿಕೆಯಾಗಿದೆ. ಈ ಕುರಿತು ಈ ಹಿಂದಿನ ಸಂಸದರು ಹಾಗೂ ಕೇಂದ್ರ ಸಚಿವರಾಗಿದ್ದ ಎ. ನಾರಾಯಣಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಬೆಂಗಳೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್, ನಾರಾಯಣಸ್ವಾಮಿ ಅವರಿಗೆ ಪತ್ರ ಬರೆದು ನಾಲ್ಕೈದು ತಿಂಗಳಲ್ಲಿ ಪ್ರಾದೇಶಿಕ ಕಚೇರಿ ಪ್ರಾರಂಭಿಸುವುದಾಗಿ 2021ರಲ್ಲಿ ತಿಳಿಸಿದ್ದರು.
ಆದರೆ, ನಾಲ್ಕು ವರ್ಷ ಕಳೆದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೂಡಲೇ ಈ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜನರಲ್ ಮ್ಯಾ ನೇಜರ್ ಅವರನ್ನು ಕಾರಜೋಳ ಒತ್ತಾಯಿಸಿದ್ದಾರೆ.
ಗಮನಾರ್ಹ ಜನಸಂಖ್ಯೆ ಹೊಂದಿರುವ ಚಿತ್ರದುರ್ಗ ಉತ್ತಮ ಆರ್ಥಿಕತೆ ಯೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಜನರ ಆರ್ಥಿಕ ಪ್ರಗತಿಗೆ ಇಲ್ಲಿ ಪ್ರಾದೇಶಿಕ ಕಚೇರಿ ಅಗತ್ಯವಾಗಿದೆ. ಜನರಿಗೆ ಬ್ಯಾಂಕಿಂಗ್ ಸೌಲಭ್ಯ ಹೆಚ್ಚಾಗಿ ಲಭ್ಯವಾಗುವುದರೊಂದಿಗೆ ದೇಶದ ಆರ್ಥಿಕ ಪ್ರಗತಿಗೂ ಸಹಕರಿಸದಂತಾಗುತ್ತದೆ ಎಂದು ಜನರಲ್ ಮ್ಯಾನೇಜರ್ ಅವರಿಗೆ ಬರೆದಿರುವ ಪತ್ರದಲ್ಲಿ ಸಂಸದರು ವಿವರಿಸಿದ್ದಾರೆ.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…