ಚಿತ್ರದುರ್ಗ: ಒಂದೂವರೆ ಲಕ್ಷ ರೂ.ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶ: ಸ್ಥಳಕ್ಕೆಡಿಸಿ ಭೇಟಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್​ ಬಳಕೆಯನ್ನು ನಿಷೇಧಿಸಲಾಗಿದೆ. ಈ ನಿಯಮದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಚಿತ್ರದುರ್ಗ ನಗರಸಭೆ ಸಿಬ್ಬಂದಿ ಮುಂದಾಗಿದ್ದಾರೆ.

ಇದರ ಭಾಗವಾಗಿ ಮಂಗಳವಾರ ಬೆಳಗ್ಗೆ ನಗರದ ಮೆದೇಹಳ್ಳಿ ರಸ್ತೆ, 2ನೇ ಕ್ರಾಸ್​ನ (ಕನ್ಯಕಾ ರೋಡ್​) ಖಾಸಗಿ ಮಳಿಗೆಯೊಂದರ ಮೇಲೆ ದಾಳಿ ನಡೆಸಿದರು. ಅಂದಾಜು ಒಂದೂವರೆ ಲಕ್ಷ ರೂ.ಗೂ ಹೆಚ್ಚು ಮೊತ್ತದ 1,225 ಕೆಜಿ ನಿಷೇಧಿತ ಪ್ಲಾಸ್ಟಿಕ್​ ದಾಸ್ತಾನನ್ನು ವಶಪಡಿಸಿಕೊಂಡರು.

ಈ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ನಗರಸಭೆ ಆಯುಕ್ತ ಚಂದ್ರಪ್ಪ, ಅಧಿಕಾರಿ ವಾಸಿಂ ಜಾಫರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *