25.7 C
Bangalore
Monday, December 16, 2019

ಚಿನ್ನದ ಹುಡುಗ ಸಿದ್ದು ಚಿಂದಿ

Latest News

ಜಾಮಿಯಾ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಇಂಡಿಯಾ ಗೇಟ್​ನಲ್ಲಿ ಪ್ರಿಯಾಂಕಾ ಗಾಂಧಿ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್​ ವಿರೋಧಿಸಿ ಕಾಂಗ್ರೆಸ್ ಪಕ್ಷದ ಜನರಲ್ ಸೆಕ್ರಟರಿ...

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಧಾರವಾಡ: ಸರ್ಕಾರಿ ಶಾಲೆಗಳ ಹೆಸರು ಹೇಳಿದರೆ ಸಾಕು, ಮೂಗು ಮುರಿಯುವವರೇ ಹೆಚ್ಚು. ಆದರೆ ಸರ್ಕಾರಿ ಶಾಲೆಯಲ್ಲೇ ಕಲಿತ ರೈತನ ಮಗನೊಬ್ಬ ವಿಶ್ವ ವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾನೆ.

ಹಾವೇರಿ ಜಿಲ್ಲೆ ಹಿರೇಕೆರೂರಿನ ಸಿದ್ದು ಬಸವರಾಜ ಚಿಂದಿ ಈ ಸಾಧನೆ ಮಾಡಿದ ಯುವಕ. 1ರಿಂದ 10ನೇ ತರಗತಿವರೆಗೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಸಿದ್ದು, ಪಿಯುಸಿಯಲ್ಲಿ ಶೇ. 93ರಷ್ಟು ಅಂಕ ಪಡೆದಿದ್ದರು. ನಂತರ ಕೃಷಿ ಮಹಾವಿದ್ಯಾಲಯದಲ್ಲಿ ಬಿಎಸ್ಸಿ (ಕೃಷಿ) ಪದವಿಗೆ ಪ್ರವೇಶ ಪಡೆದು ಅತೀ ಹೆಚ್ಚು (9.17 ಸಿಜಿಪಿಎ) ಅಂಕ ಪಡೆದು 2 ಬಂಗಾರದ ಪದಕ ಪಡೆದಿದ್ದಾರೆ.

ತಂದೆ ಬಸವರಾಜ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡೇ ಜೀವನ ಸಾಗಿಸುತ್ತಿದ್ದಾರೆ. ಇದೀಗ ಸಿದ್ದುವಿನ ಸಾಧನೆ ಕುಟುಂಬ ಪಟ್ಟ ಕಷ್ಟಕ್ಕೆ ಸಿಕ್ಕ ಪ್ರತಿಫಲವಾಗಿದೆ. ಸಿದ್ದು ಸದ್ಯ ಬೆಂಗಳೂರಿನಲ್ಲಿ ಅನುವಂಶಿಕತೆ ಹಾಗೂ ಸಸ್ಯತಳಿ ಶಾಸ್ತ್ರದಲ್ಲಿ ಎಂಎಸ್ಸಿ ಕಲಿಯುತ್ತಿದ್ದಾರೆ.

ತಮ್ಮ ಮಗನ ಸಾಧನೆ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಚಿಂದಿ, ಪಿಯುಸಿ ನಂತರ ಇಂಜಿನಿಯರಿಂಗ್, ವೈದ್ಯಕೀಯ ಕ್ಷೇತ್ರಕ್ಕೆ ತೆರಳಲು ಅವಕಾಶವಿತ್ತು. ಆದರೆ, ಮಗ ಕೃಷಿ ಕ್ಷೇತ್ರ ಆಯ್ಕೆ ಮಾಡಿಕೊಂಡು ಅದರಲ್ಲಿ ಸಾಧನೆ ಮಾಡಿದ್ದು ಹೆಮ್ಮೆ ತಂದಿದೆ. ಆತ ಸ್ಕಾಲರ್​ಶಿಪ್ ಪಡೆದಿದ್ದರೂ, ಆತನ ಶಿಕ್ಷಣಕ್ಕೆ 1.75 ಲಕ್ಷ ರೂ. ಸಾಲ ಮಾಡಿದ್ದೆವು. ಆತ ಉತ್ತಮ ಸಾಧನೆ ಮಾಡುವ ಮೂಲಕ ಸಾಲ ಮಾಡಿ ಓದಿಸಿದ ನಮ್ಮ ಕಾಳಜಿಯನ್ನು ಸಾರ್ಥಕಗೊಳಿಸಿದ್ದಾನೆ ಎಂದು ಖುಷಿ ವ್ಯಕ್ತಪಡಿಸಿದರು.

ಸಣ್ಣ ವಯಸ್ಸಿನಿಂದಲೂ ಓದಿಗೆ ಹೆಚ್ಚು ಮಹತ್ವ ನೀಡುತ್ತಿದ್ದೆ. ಪದವಿಯಲ್ಲೂ ಸಹ ಚನ್ನಾಗಿ ಓದಿ ಉತ್ತಮ ಅಂಕ ಪಡೆಯುವ ಗುರಿ ಹೊಂದಿದ್ದೆ. ಚಿನ್ನದ ಪದಕ ನಿರೀಕ್ಷಿಸಿರಲಿಲ್ಲ. ಈ ಸಾಧನೆಗೆ ನಮ್ಮ ಕುಟುಂಬ ಹಾಗೂ ಕೃಷಿ ವಿವಿಯ ಪ್ರೋತ್ಸಾಹವೇ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ವಿಜ್ಞಾನಿಯಾಗಿ ಹೆಚ್ಚು ಇಳುವರಿ ನೀಡುವ ಹೊಸ ತಳಿ ಸಂಶೋಧಿಸುವ ಆಸೆ ಹೊಂದಿದ್ದೇನೆ. | ಸಿದ್ದು ಚಿಂದಿ, ಚಿನ್ನದ ಪದಕ ವಿಜೇತ

ಸರ್ಕಾರಿ ಶಾಲೆಯಲ್ಲಿ ಕಲಿತ ನಮ್ಮ ಮಗ ಚಿನ್ನದ ಪದಕ ಪಡೆದಿದ್ದು ಹೆಮ್ಮೆ ಮೂಡಿಸಿದೆ. ನಾವಂತೂ ಕಲಿಯಲಿಲ್ಲ. ಮಕ್ಕಳಾದರೂ ಕಲಿಯಲಿ ಎಂಬ ಆಸೆ ಇತ್ತು. ನಮ್ಮ ಆಸೆಯನ್ನು ಮಗ ಈಡೇರಿಸಿದ್ದಾನೆ. ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ಸಾಧನೆ ಮಾಡಲಿ ಎಂಬುದು ನಮ್ಮ ಹಾರೈಕೆ. | ರತ್ನಾ ಚಿಂದಿ, ಸಿದ್ದುವಿನ ತಾಯಿ

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...