20.8 C
Bangalore
Sunday, December 8, 2019

ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಹಾವೇರಿ: ಸುಗಮ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೈ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 21ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮನೆಮನೆ ಪ್ರಚಾರಕ್ಕೆ ತೊಂದರೆಯಿಲ್ಲ. ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದವರು ಏ. 22ರಿಂದ ಕ್ಷೇತ್ರದಲ್ಲಿರಕೂಡದು ಎಂದರು.

1,972 ಮತಗಟ್ಟೆ, 7,888 ಸಿಬ್ಬಂದಿ…
ಹಾವೇರಿ ಲೋಕಸಭೆ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, 1,972 ಮತಗಟ್ಟೆ ಸ್ಥಾಪಿಸಲಾಗಿದೆ. ಏ. 23ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಬೆಳಗ್ಗೆ 6ರಿಂದ 7ರವರೆಗೆ ಪ್ರತಿ ಮತಗಟ್ಟೆಯಲ್ಲಿ ಅಣುಕು ಮತದಾನ ನಡೆಯಲಿದೆ. ಸುಗಮ ಮತದಾನ ಪ್ರಕ್ರಿಯೆಗೆ 7,888 ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 19 ಸಖಿ, 8 ಮಾದರಿ, 3 ಅಂಗವಿಕಲರ ಮತಗಟ್ಟೆ ಸ್ಥಾಪಿಸಲಾಗಿದೆ. ಅಂಗವಿಕಲರಿಗೆ ಬ್ರೈಲ್​ಲಿಪಿ, ಗಾಲಿ ಕುರ್ಚಿ, ಭೂತಗನ್ನಡಿ ವ್ಯವಸ್ಥೆ, ಸಖಿ ಮತಗಟ್ಟೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜಿಸಲಾಗಿದೆ. ಮೇಲುಸ್ತುವಾರಿ ಅಧಿಕಾರಿ, ನೋಡಲ್ ಅಧಿಕಾರಿ, ಆರೋಗ್ಯ ತಪಾಸಣೆ, ಸೆಲ್ಪಿ ಪಾಯಿಂಟ್, ಮಕ್ಕಳಿಗೆ ಆಟದ ಸಾಮಗ್ರಿ, ಸ್ವಯಂ ಸೇವಕರ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಶೌಚಗೃಹ, ರ್ಯಾಂಪ್, ಕುಡಿಯುವ ನೀರು, ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ನೇರವಾಗಿ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಕ್ರಿಟಿಕಲ್ ಮತಗಟ್ಟೆ…
1,972 ಮತಗಟ್ಟೆಗಳಲ್ಲಿ 387 ಕ್ರಿಟಿಕಲ್ ಮತಗಟ್ಟೆಗಳಿಗೆ ಸೂಕ್ಷ್ಮ ವೀಕ್ಷಕರ ನೇಮಿಸಲಾಗಿದೆ. 95 ದುರ್ಬಲ ಮತದಾರರಿರುವ ಮತಗಟ್ಟೆ ಗುರುತಿಸಲಾಗಿದೆ. 104 ಮತಗಟ್ಟೆಗಳಲ್ಲಿ ವೆಬ್​ಕಾಸ್ಟಿಂಗ್, 60 ಮತಗಟ್ಟೆ ಚಟುವಟಿಕೆಗಳಲ್ಲಿ ವಿಡಿಯೋ ಚಿತ್ರೀಕರಣ ವ್ಯವಸ್ಥೆ, 330 ಮತಗಟ್ಟೆಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ 187 ಸೆಕ್ಟರ್ ಅಧಿಕಾರಿಗಳ ತಂಡ, 46 ಫ್ಲೈಯಿಂಗ್ ಸ್ಕಾ್ವಡ್, 81 ಸ್ಥಿರ ಕಣ್ಗಾವಲು ತಂಡ, 24 ವಿಡಿಯೋ ಸರ್ವಲೆನ್ಸ್ ತಂಡ, 29 ವಿಡಿಯೋ ವೀವಿಂಗ್ ತಂಡ ಹಾಗೂ ಪೊಲೀಸ್ ಪಡೆಗಳು ಚುನಾವಣಾ ಚಟುವಟಿಕೆಗಳ ಮೇಲೆ ನಿಗಾವಹಿಸಲಿವೆ ಎಂದರು.

ಮತಗಟ್ಟೆಗಳಿಗೆ ಮತದಾನ ಪರಿಕರ, ಸಿಬ್ಬಂದಿ ತೆರಳಲು 381 ಮಾರ್ಗ ರಚಿಸಲಾಗಿದೆ. ಜಿಲ್ಲೆಯಲ್ಲಿ 286 ಮಾರ್ಗ ರಚಿಸಿ 224 ಸಾರಿಗೆ ಬಸ್, ಏಳು ಮಿನಿ ಬಸ್, 33 ಮ್ಯಾಕ್ಸಿಕ್ಯಾಬ್, 29 ಕ್ರೂಜರ್ ಒಳಗೊಂಡಂತೆ 293 ವಾಹನ ಸೇವೆ ಬಳಸಿಕೊಳ್ಳಲಾಗುವುದು ಎಂದರು.

ಕರ್ತವ್ಯನಿರತ ಸಿಬ್ಬಂದಿಗೆ ಅಂಚೆ ಮತಪತ್ರ, ಇಡಿಸಿ ವ್ಯವಸ್ಥೆ ಮಾಡಲಾಗಿದೆ. 3,890 ಅಂಚೆ ಮತಪತ್ರ, 6,708 ಇಡಿಸಿ ವಿತರಿಸಲಾಗಿದೆ. ಪ್ರತಿ 2 ಗಂಟೆಗೊಮ್ಮೆ ವೆಬ್​ಸೈಟ್​ಗೆ ಮತದಾನ ವಿವರ ಅಪ್​ಲೋಡ್ ಮಾಡಲಾಗುವುದು. ಇದಕ್ಕಾಗಿ ವಿಧಾನಸಭಾವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ಜಿ.ಪಂ. ಸಿಇಒ ಕೆ. ಲೀಲಾವತಿ ಸ್ವೀಪ್ ಚಟುವಟಿಕೆಗಳ ಕುರಿತು, ಎಸ್​ಪಿ ಕೆ. ಪರಶುರಾಮ ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಇದ್ದರು.

17,06,909 ಮತದಾರರು
ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 21,584 ಅಂಗವಿಕಲ ಮತದಾರರು ಸೇರಿ 17,06,909 ಮತದಾರರಿದ್ದಾರೆ. ಇದರಲ್ಲಿ 8,71,256 ಪುರುಷರು, 8,35,693 ಮಹಿಳೆಯರು ಹಾಗೂ 80 ಇತರ ಮತದಾರರಿದ್ದಾರೆ. ಈಗಾಗಲೇ ಶೇ. 99ರಷ್ಟು ಎಪಿಕ್ ಕಾರ್ಡ್ ವಿತರಣೆಯಾಗಿದೆ. ಶೇ. 82ರಷ್ಟು ವೋಟರ್ ಸ್ಲಿಪ್ ವಿತರಣೆಯಾಗಿದೆ ಎಂದು ಕೃಷ್ಣ ಬಾಜಪೈ ತಿಳಿಸಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...