21.7 C
Bengaluru
Tuesday, January 21, 2020

ಚುನಾವಣೆಗೆ ಭತ್ತದ ಕೊಯ್ಲಿನ ಸವಾಲು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ವಿಜಯವಾಣಿ ವಿಶೇಷ ಕಾರವಾರ

ಚಳಿಯ ವಾತಾವರಣದಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ರಾಜಕೀಯ ಮುತ್ಸದ್ದಿಗಳ ವಾಗ್ಯುದ್ಧದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಆದರೆ, ಇನ್ನೊಂದೆಡೆ ಇದ್ಯಾವುದರ ಪರಿವೆಯೇ ಇಲ್ಲದೆ, ರೈತರು ಕೊಯ್ಲಿನಲ್ಲಿ ತೊಡಗಿರುವುದು ಪ್ರಚಾರದ ಮೇಲೆ ಪರಿಣಾಮ ಬೀರಿದೆ.

ಆಪರೇಷನ್ ಕಮಲದ ನಂತರ ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹೈಪ್ರೊಫೈಲ್ ಉಪ ಚುನಾವಣೆ ಇದಾಗಿದೆ. ಹಿಂದೆ ಕಾರವಾರ ಕ್ಷೇತ್ರದಲ್ಲಿ ಆನಂದ ಅಸ್ನೋಟಿಕರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದು ಮೀನುಗಾರಿಕೆ ಸಚಿವರಾದಾಗ ಉಪ ಚುನಾವಣೆ ನಡೆದಿತ್ತು. ಈಗ ಶಿವರಾಮ ಹೆಬ್ಬಾರ ಕೂಡ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು, ಸಚಿವರಾಗುವ ಕನಸು ಕಾಣುತ್ತಿದ್ದಾರೆ. 2008ರಲ್ಲಿ ನಡೆದ ಆನಂದ ಅಸ್ನೋಟಿಕರ್ ಅವರ ಉಪ ಚುನಾವಣೆಯಲ್ಲೂ ಇಡೀ ಕರ್ನಾಟಕ ರಾಜಕೀಯದ ಚಿತ್ತ ಜಿಲ್ಲೆಯತ್ತ ನೆಟ್ಟಿತ್ತು. ಈಗಲೂ ಅದೇ ರೀತಿಯ ಅಬ್ಬರ ಕಂಡುಬರುತ್ತಿದೆ. ರಾಜಕೀಯ ಪಕ್ಷಗಳಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ‘ಮಾಡು ಇಲ್ಲವೇ ಮಡಿ’ ಎಂಬ ಪರಿಸ್ಥಿತಿ ಇರುವುದರಿಂದ ಸಿಎಂ, ಮಾಜಿ ಸಿಎಂ ಎಲ್ಲರೂ ಸ್ವತಃ ಪ್ರಚಾರಕ್ಕಿಳಿದಿದ್ದಾರೆ. ಸಮಾವೇಶ, ಸಭೆ ನಡೆಸುತ್ತಿದ್ದಾರೆ. ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ.

ಆದರೆ, ಇದನ್ನೆಲ್ಲ ಕೇಳುತ್ತ ಕುಳಿತುಕೊಳ್ಳಲು ಈ ಭಾಗದ ರೈತರಿಗೆ ಪುರುಸೊತ್ತೇ ಇಲ್ಲ. ಕ್ಷೇತ್ರದ ಭಾಗಶಃ ಪ್ರದೇಶ ಭತ್ತದ ಬೆಳೆಗೆ ಪ್ರಸಿದ್ಧ. ಈಗ ಎಲ್ಲೆಡೆ ಭತ್ತದ ಕೊಯ್ಲು ನಡೆದಿದೆ. ನೆರೆಯಿಂದ ಹಾನಿಗೊಳಗಾಗಿ ಅಳಿದುಳಿದ ಭತ್ತದ ಪೈರನ್ನು ಕಟಾವು ಮಾಡಿ ಸಂಗ್ರಹಿಸುವ ಗಡಿಬಿಡಿಯಲ್ಲಿ ರೈತರಿದ್ದಾರೆ. ಹಾಗಾಗಿ ರಾಜಕೀಯ ಮುಖಂಡರಿಗೆ ತಮ್ಮ ಪ್ರಚಾರ ಸಭೆಗಳಿಗೆ, ಸಮಾವೇಶಗಳಿಗೆ ಜನರನ್ನು ಸೇರಿಸುವುದೇ ದೊಡ್ಡ ಸವಾಲಾಗಿದೆ. ಯಲ್ಲಾಪುರ ಕ್ಷೇತ್ರದ ಕರಡೊಳ್ಳಿ, ಇಂದೂರು, ಶಿಡ್ಲಗುಂಡಿ, ಬಾಚಣಕಿ ಡ್ಯಾಂನ ಅಚ್ಚುಕಟ್ಟು ಪ್ರದೇಶ ಹೀಗೆ ಎಲ್ಲೇ ಓಡಾಡಿದರೂ ಊರುಗಳಲ್ಲಿ ಜನ ಕಾಣುತ್ತಿಲ್ಲ. ಎಲ್ಲರೂ ಹೊಲದಲ್ಲಿದ್ದಾರೆ. ಇದರಿಂದ ಹಣ ಕೊಡುತ್ತೇನೆ ಎಂದರೂ ಸಮಾರಂಭಗಳಿಗೆ, ಮನೆ ಪ್ರಚಾರಕ್ಕೆ ಬರುವವರು ಸಿಗುತ್ತಿಲ್ಲ.

ವ್ಯಾಪ್ತಿ ದೊಡ್ಡದು
ಯಲ್ಲಾಪುರ ವಿಧಾನಸಭೆ ಕ್ಷೇತ್ರ ಎಲ್ಲ ಕ್ಷೇತ್ರಗಳಂತಿಲ್ಲ. ಮುಂಡಗೋಡ- ಯಲ್ಲಾಪುರ ತಾಲೂಕಿನ ಜತೆಗೆ ಬನವಾಸಿ ಹೋಬಳಿಯೂ ಸೇರಿದೆ. ಎರಡು ಪಟ್ಟಣಗಳು, 37 ಗ್ರಾಪಂಗಳ 260ಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿಯನ್ನು ಕ್ಷೇತ್ರ ಹೊಂದಿದೆ. ರಸ್ತೆಯಂಥ ಮೂಲ ಸೌಕರ್ಯವಿರದ ಗ್ರಾಮೀಣ ಭಾಗಗಳಿಗೂ ಅಭ್ಯರ್ಥಿ, ಇಲ್ಲವೆ ರಾಜಕೀಯ ಪಕ್ಷಗಳ ಮುಂಖಂಡರು ತಲುಪಬೇಕಿದೆ. ಬೆಳಗ್ಗೆ ಪ್ರಚಾರಕ್ಕೆ ಹೊರಡುವಾಗಲೆಲ್ಲ 11 ಗಂಟೆಯಾಗಿರುತ್ತದೆ. ಮಧ್ಯಾಹ್ನವಾಗುತ್ತಿದ್ದಂತೆ ಭಾರಿ ಸೆಕೆ ಕಾಣಿಸುತ್ತಿದೆ. ಸಂಜೆ 5ರ ನಂತರ ಚಳಿ ಪ್ರಾರಂಭವಾಗುತ್ತಿದೆ. ವಿಚಿತ್ರ ವಾತಾವರಣದಲ್ಲಿ ಕಾರ್ಯಕರ್ತರನ್ನು ಕರೆದೊಯ್ದು ಪ್ರಚಾರಕ್ಕಿಳಿಸುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...