25.5 C
Bangalore
Monday, December 16, 2019

ಚೇತನ ಕಾಲೇಜ್​ ಶೇ. 80.32

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

- Advertisement -

ಹುಬ್ಬಳ್ಳಿ:ಅಕ್ಷಯ ಕಾಲನಿಯಲ್ಲಿನ ಚೇತನ ಪಿಯು ವಿಜ್ಞಾನ ಕಾಲೇಜ್ ರಾಜ್ಯಮಟ್ಟದಲ್ಲಿ ಮತ್ತೆ ಹೆಸರು ಮಾಡಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ರಾಜ್ಯಕ್ಕೆ 4ನೇ ಹಾಗೂ 9ನೇ ರ್ಯಾಂಕ್ ಪಡೆದಿದ್ದಾರೆ.

ಹುಬ್ಬಳ್ಳಿಯ ಅಪರ್ಣಾ ಮುಳಗುಂದ (591) ರಾಜ್ಯಕ್ಕೆ ನಾಲ್ಕನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ. ಕುಷ್ಟಗಿ ತಾಲೂಕು ಚಿಕ್ಕನಂದಿಹಾಳದ ಶಿಲ್ಪಾ ದೇವರಮನಿ (586) ರಾಜ್ಯಕ್ಕೆ 9ನೇ ರ್ಯಾಂಕ್ ಹಾಗೂ ಕಾಲೇಜ್​ಗೆ ಎರಡನೇ ಸ್ಥಾನ ಪಡೆದಿದ್ದಾರೆ. ಭೌತಶಾಸ್ತ್ರ 98, ರಸಾಯನಶಾಸ್ತ್ರ 99, ಗಣಿತ 99, ಜೀವಶಾಸ್ತ್ರದಲ್ಲಿ 99 ಅಂಕ ಗಳಿಸಿದ್ದಾರೆ. ಭಾಗ್ಯಶ್ರೀ ಶೇಟ್ 566 ಅಂಕ ಗಳಿಸಿ ಕಾಲೇಜ್​ಗೆ ಮೂರನೇ ಸ್ಥಾನ ಪಡೆದಿದ್ದಾರೆ.

ಕಾಲೇಜ್​ನ 183 ವಿದ್ಯಾರ್ಥಿಗಳಲ್ಲಿ 147 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 80.32ರಷ್ಟು ಫಲಿತಾಂಶ ದಾಖಲಾಗಿದೆ. ಸಚೇತನಾ ಪಿಯು ವಿಜ್ಞಾನ ಕಾಲೇಜ್​ನ 90 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಪ್ರಾಚಾರ್ಯು ಸುಜಾತಾ ದಢೂತಿ ತಿಳಿಸಿದರು.

‘ಜೈ ಜವಾನ್ ಜೈ ಕಿಸಾನ್’ ಅಡಿ ರೈತ ಹಾಗೂ ಸೈನಿಕರ ಸುಮಾರು 10ರಿಂದ 12 ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಪ್ರತಿಭಾ ಪರೀಕ್ಷೆ ಮೂಲಕ ಪ್ರಥಮ ಪಿಯುಸಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಅರ್ಹ ಬಡ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಿದೆ. ಪ್ರತಿ ವರ್ಷ ಕಾಲೇಜ್ ರ್ಯಾಂಕ್ ಪಡೆಯಲು ನುರಿತ ವಿಷಯ ತಜ್ಞರು, ಸಂಪನ್ಮೂಲ ವ್ಯಕ್ತಿಗಳು, ತೆರೆದ ಗ್ರಂಥಾಲಯವೇ ಕಾರಣ ಎನ್ನುತ್ತಾರೆ ದ್ಯಾವಪ್ಪನವರ ವಳಸಂಗ ಎಜುಕೇಶನ್ ಆಂಡ್ ಅಕಾಡೆಮಿಕ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಪ್ರೊ. ಮಹೇಶ ದ್ಯಾವಪ್ಪನವರ. ಸಂಪನ್ಮೂಲ ವ್ಯಕ್ತಿಗಳಾದ ಡಿ.ವೈ. ಮಾಯಣ್ಣವರ, ವೈ.ವಿ. ಪಾಟೀಲ, ಸುನೀಲ್ ಇತರರು ಇದ್ದರು.

ಭಾವುಕರಾದ ಶಿಲ್ಪಾ ದೇವರಮನಿ

ತಂದೆ ಶಿಕ್ಷಕ. ಈ ಕಾಲೇಜ್​ನಲ್ಲಿ ಚೆನ್ನಾಗಿ ಕಲಿಸುತ್ತಾರೆ ಎಂದು ಗೆಳತಿಯರು ಸೇರಿ ಇಲ್ಲಿಗೆ ಬಂದೆವು. ನಾನು ಯಾವುದೇ ಟ್ಯೂಷನ್​ಗೆ ಹೋಗಲಿಲ್ಲ. ಅಂದಿನ ಅಭ್ಯಾಸವನ್ನು ಅಂದೇ ಪೂರ್ಣಗೊಳಿಸುತ್ತಿದ್ದೆ. ಪ್ರಾಧ್ಯಾಪಕರು, ಪ್ರಾಚಾರ್ಯರ ಸಲಹೆ, ಸಹಕಾರದಿಂದ ಈ ಯಶಸ್ಸು ಸಾಧ್ಯವಾಯಿತು. ಮುಂದೆ ಎಂಬಿಬಿಎಸ್ ಓದುವ ಆಸೆ ಇದೆ. ಆದರೆ, ಅಪ್ಪ-ಅಮ್ಮ ಈ ಸಂತಸ ಹಂಚಿಕೊಳ್ಳುವ ವೇಳೆ ಆಗಮಿಸಲಿಲ್ಲ ಎಂದು 9ನೇ ರ್ಯಾಂಕ್ ಪಡೆದಿರುವ ಶಿಲ್ಪಾ ದೇವರಮನಿ ಭಾವುಕಾರದರು.

ಅಪ್ಪ-ಅಮ್ಮ ಬಹಳಷ್ಟು ಸಹಕಾರ ನೀಡಿದರು. ಪ್ರಾಧ್ಯಾಪಕರು ಹೇಳಿಕೊಡುತ್ತಿದ್ದ ಪಾಠ ಅಚ್ಚುಕಟ್ಟಾಗಿತ್ತು. ಸತತ ಅಧ್ಯಯನ ಮಾಡಿದ್ದರ ಫಲ ಇವತ್ತು ಕಂಡಿದೆ. ಇಷ್ಟು ಅಂಕ ಬರುತ್ತವೆ ಎಂದು ನಿರೀಕ್ಷಿಸಿರಲಿಲ್ಲ. ಬಹಳ ಖುಷಿಯಾಗಿದೆ.

| ಅಪರ್ಣಾ ಮುಳಗುಂದ

4ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ

ಎಲ್ಲ ವಿಷಯಗಳನ್ನು ಸಂತಸದಿಂದಲೇ ಅಧ್ಯಯನ ಮಾಡುತ್ತಿದ್ದಳು. ಬೇಜಾರು ಮಾಡಿಕೊಳ್ಳುತ್ತಿರಲಿಲ್ಲ. ಅವಳಿಗೆ ಎಂಬಿಬಿಎಸ್ ಓದಿಸಬೇಕೆಂಬ ಆಸೆ ನಮಗೂ ಇದೆ. ಓದುವ ಆಸೆ ಆಕೆಗೂ ಇದೆ.

| ಅಚ್ಯುತ ಮುಳಗುಂದ ಅಪರ್ಣಾ ತಂದೆ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...