18.1 C
Bangalore
Saturday, December 7, 2019

ಜನಜೀವನಕ್ಕೆ ಮಾರಕವಾಗುವ ಯೋಜನೆ ಬೇಡ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಹೊನ್ನಾವರ: ಜಿಲ್ಲೆಯ ನದಿಗಳ ರಕ್ಷಣೆ ನಮ್ಮ ಹೊಣೆ. ಜನಜೀವನಕ್ಕೆ ಮಾರಕವಾಗುವ ಯೋಜನೆಗಳನ್ನು ತಂದರೆ ಜಿಲ್ಲೆಯ ಹಿತದೃಷ್ಟಿಯಿಂದ ಜಾತಿ ಮತ ಭೇದ ಬಿಟ್ಟು ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಬಂಗಾರಮಕ್ಕಿಯ ಧರ್ಮಾಧಿಕಾರಿ ಶ್ರೀ ಮಾರುತಿ ಗುರೂಜಿ ಹೇಳಿದರು.

ತಾಲೂಕಿನ ಗೇರುಸೊಪ್ಪಾ ಶ್ರೀ ಕ್ಷೇತ್ರ ಬಂಗಾರಮಕ್ಕಿ ವೀರಾಂಜನೇಯ ಸಭಾಭವನದಲ್ಲಿ ಅಭಯಾರಣ್ಯ ಘೊಷಣೆ ವಿರೋಧಿ ಹಾಗೂ ಶರಾವತಿ ನದಿ ನೀರು ಸಂರಕ್ಷಣಾ ಸಮಿತಿ ವತಿಯಿಂದ ಜರುಗಿದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಯೋಜನೆಗಳು ಅಭಿವೃದ್ಧಿ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು. ಕಸ್ತೂರಿ ರಂಗನ್ ವರದಿ ಪ್ರಕಾರ ಜಿಲ್ಲೆಯ ಪರಿಸರಕ್ಕೆ ವಿರುದ್ಧವಾಗುವ ಯೋಜನೆ ತರುವಂತಿಲ್ಲ. ಆದರೆ, ಸರ್ಕಾರದ ವರದಿಗಳೇ ಇಂದು ಸರ್ಕಾರಕ್ಕೆ ತಿರುಗೇಟಾಗುವಂತಿದೆ. ಜಿಲ್ಲೆಯ ನೆಲ, ಜಲ, ಭಾಷೆ ಉಳಿಯಬೇಕು. ಶರಾವತಿ ಮಾತ್ರವಲ್ಲ ಅಘನಾಶಿನಿ, ಕಾಳಿ ನದಿಗಾಗಿಯೂ ಹೋರಾಟಕ್ಕೆ ಸಜ್ಜಾಗಿರಬೇಕು ಎಂದರು.

ಪರಿಸರ ತಜ್ಞ ಡಾ. ಸುಭಾಷ್ ಚಂದ್ರ ಮಾತನಾಡಿ, ಶರಾವತಿ ನದಿ ತಿರುವು ಯೋಜನೆ ಲಕ್ಷಾಂತರ ರೈತರ ಭೂಮಿಗೆ ಹಾನಿಯಾಗಲಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಪೂರೈಸುವ ಬದಲು, ಅಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸಿದರೆ ಅಲ್ಲಿನ ನೀರಿನ ಸಮಸ್ಯೆಗೆ ಪರಿಹಾರ ಕಂಡಕೊಳ್ಳಬಹುದು. ಜನರು ಮತ್ತು ಪ್ರಾಣಿಗಳು ಸೌಹಾರ್ದಯುತವಾಗಿ ಇರುವಂತಹ ಪ್ರದೇಶಗಳಲ್ಲಿ ಅಭಯಾರಣ್ಯದ ಅವಶ್ಯಕತೆಯಿಲ್ಲ ಎಂದರು.

ಅರಣ್ಯ ಅತಿಕ್ರಮಣದಾರರ ಹೋರಾಟಗಾರ ಸಮಿತಿ ಜಿಲ್ಲಾಧ್ಯಕ್ಷ ರವಿಂದ್ರ ನಾಯ್ಕ ಮಾತನಾಡಿ, ಜಿಲ್ಲೆಯ 85,577 ಕುಟುಂಬಗಳು ಅರಣ್ಯವನ್ನು ಅವಲಂಭಿಸಿ ವಾಸಿಸುತ್ತ ಸಾಗುವಳಿ ಮಾಡಿವೆ. 5 ಹೈಡ್ರೋ ಪೊ›ಜೆಕ್ಟ್ ಗಳಿಗೆ ನಮ್ಮ ಜಿಲ್ಲೆ ತ್ಯಾಗ ಮಾಡಿದೆ, ಆದರೂ ನಮ್ಮ ಜಿಲ್ಲೆಯ ಮೇಲೆ ಸರ್ಕಾರದ ದೌರ್ಜನ್ಯ ನಿಲ್ಲಲಿಲ್ಲ. ಈಗ ಅಭಯಾರಣ್ಯ ಮತ್ತು ಶರಾವತಿ ನದಿ ತಿರುವು ಯೋಜನೆ ಮೂಲಕ ಇಲ್ಲಿನ ಜನಜೀವನ ಅಸ್ತವ್ಯಸ್ತ ಮಾಡಲು ಮುಂದಾಗಿದ್ದಾರೆ. ಅಭಯಾರಣ್ಯ ಪ್ರದೇಶದಲ್ಲಿ ನಾವು ಬದುಕು ಕಟ್ಟಿ ಕೊಳ್ಳಲು ಸಾಧ್ಯವಿಲ್ಲ ಎಂದರು.

ನಗರಬಸ್ತಿಕೇರಿ ಗ್ರಾ.ಪಂ. ಅಧ್ಯಕ್ಷೆ ಅನ್ನಪೂರ್ಣಾ ಶಾಸ್ತ್ರಿ, ಸದಸ್ಯ ಮಂಜುನಾಥ ನಾಯ್ಕ, ಮಾಜಿ ತಾ.ಪಂ. ಸದಸ್ಯೆ ಜಯಂತಿ ನಾಯ್ಕ, ಗೇರುಸೊಪ್ಪ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಚಂದ್ರಶೇಖರ್ ಭಟ್ ಸೂರಾಲು, ಭಾರತೀಯ ಪ್ರಜಾ ಸೇನಾ ಅಧ್ಯಕ್ಷ ಮಂಜುನಾಥ, ಗಣಪತಿ ಹೆಗಡೆ ಇತರರು ಉಪಸ್ಥಿತರಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...