ಜನಪರ ಆಡಳಿತಕ್ಕೆ ಬೆಂಬಲ

Latest News

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಪೊಲೀಸ್ ಠಾಣೆಗಳಲ್ಲಿ ದಲಿತರ ದಿನ ಆಚರಣೆ ಕಡ್ಡಾಯ: ಪ್ರತಿ ತಿಂಗಳ 2ನೇ ಭಾನುವಾರ ಕಡ್ಡಾಯ, ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಇಲಾಖೆ ಗರಂ

| ಕೀರ್ತಿನಾರಾಯಣ ಸಿ. ಬೆಂಗಳೂರು ದಲಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ‘ದಲಿತರ...

ಮುಳಬಾಗಿಲು: ಕೆ.ಎಚ್.ಮುನಿಯಪ್ಪ 28 ವರ್ಷಗಳಿಂದ ವಾಮಮಾರ್ಗದ ಮೂಲಕ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಪ್ರಧಾನಿ ನರೇಂದ್ರಮೋದಿ ಅವರ ಜನಪರ ಆಡಳಿತಕ್ಕೆ ಮತದಾರರು ಬೆಂಬಲಿಸಿ ಕ್ಷೇತ್ರದಲ್ಲಿ ಕಮಲ ಅರಳಿಸಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ನಗರದ ಶ್ರೀನಿವಾಸ ಕಲ್ಯಾಣಮಂಟಪದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮುನಿಯಪ್ಪ ಸಂಸದರಾಗಿ, ಸಚಿವರಾದರೂ ಕ್ಷೇತ್ರಾಭಿವೃದ್ಧಿ ಮಾಡದೆ ಸ್ವತಃ ಆರ್ಥಿಕಾಭಿವೃದ್ಧಿ ಮಾಡಿಕೊಂಡಿದ್ದರು. ಹಾಗಾಗಿ ಈ ಬಾರಿ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ 7 ಸಾವಿರ ಮತಗಳು ಬಿಜೆಪಿಗೆ ಬರುವ ಮೂಲಕ ಲೋಕಸಭಾ ಕ್ಷೇತ್ರದಲ್ಲೇ ಅತಿ ಹೆಚ್ಚು ಲೀಡ್ ನೀಡಿದ್ದಾರೆ ಎಂದರು.

ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ಚುನಾವಣೆಯಲ್ಲಿ ಒಂದು ಗುಂಪನ್ನು ಚದುರಿಸುವುದು ಸುಲಭ. ಆದರೆ ಒಂದು ಗುಂಪನ್ನು ಕಟ್ಟುವುದು ಕಷ್ಟ. ಮುಳಬಾಗಿಲು ಕ್ಷೇತ್ರದ ಮತದಾರರು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಬಿಜೆಪಿಗೆ ಮತಹಾಕದವರಿಗೂ ತಾರತಮ್ಯ ಮಾಡದೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಹಿರಿಯ ಮುಖಂಡ ಆಲಂಗೂರು ವೈ.ಸುರೇಂದ್ರಗೌಡ, ಜಿಲ್ಲಾ ಉಸ್ತುವಾರಿ ಕಾಂತರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಕೆ.ವಾಸುದೇವ್, ನಗರ ಘಟಕದ ಅಧ್ಯಕ್ಷ ಟಿ.ಎಂ.ಶ್ರೀನಿವಾಸ್, ತಾಲೂಕು ಅಧ್ಯಕ್ಷ ಕೆ.ವಿ.ನಾಗಾರ್ಜುನ, ಮಾಜಿ ಅಧ್ಯಕ್ಷರಾದ ಸಿ.ಕೆ.ರಾಧವಲ್ಲಭ, ಎಂ.ವೆಂಕಟೇಶ್, ವೆಂಕಟರಮಣ, ಕೋಚಿಮುಲ್ ಮಾಜಿ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ತಾಪಂ ಮಾಜಿ ಅಧ್ಯಕ್ಷ ಸಿ.ವಿ.ಗೋಪಾಲ್, ಹಿರಿಯ ಕಾಂಗ್ರೆಸ್ ಮುಖಂಡ ಪದಕಾಷ್ಠಿ ವಿ.ವೆಂಕಟಮುನಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಂ.ಕೃಷ್ಣಮೂರ್ತಿ, ಮುನಿರಾಜು, ವಿ.ಟಿ.ಶಂಕರ ಮತ್ತಿತರರು ಇದ್ದರು.

ಪಕ್ಷಕ್ಕೆ ಬರುವವರಿಗೆ ಮುಕ್ತ ಆಹ್ವಾನ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅನ್ಯ ಪಕ್ಷಗಳ ಮುಖಂಡರು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಬೆಂಬಲಿಸಿದ್ದಾರೆ. ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಸೇರಿ ವಿವಿಧ ಪಕ್ಷಗಳಲ್ಲಿರುವ ಬಿಜೆಪಿ ಪರ ಒಲವುಳ್ಳ ಎಲ್ಲ ಮುಖಂಡರಿಗೆ ಪಕ್ಷಕ್ಕೆ ಬರಲು ಮುಕ್ತ ಆಹ್ವಾನ ನೀಡಲಾಗುತ್ತಿದೆ. ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಸ್ವಾಗತಿಸಬೇಕೆಂದು ಸಂಸದ ಮುನಿಸ್ವಾಮಿ ಹೇಳಿದರು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...