ಸಿಂಧನೂರು: ಏಡ್ಸ್ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕೆಂದು ಅಪರ ಸಿವಿಲ್ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ ಹೇಳಿದರು.
ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ಇತರರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಏಡ್ಸ್ ಬಗ್ಗೆ ಜನರು ಜಾಗೃತರಾಗುತ್ತಿದ್ದಾರೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ವಕೀಲರ ಸಂಘದ ಅಧ್ಯಕ್ಷ ರಾಮನಗೌಡ, ಖಜಾಂಚಿ ಶರಣಬಸವ ಉಮಲೂಟಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಐಸಿಟಿಸಿ ಆಪ್ತ ಸಮಾಲೋಚಕ ಅಂಬರೀಶ್, ಪ್ರಾಚಾರ್ಯೆ ಲಾಜರ್ ಸಿರಿಲ್, ಇರ್ಫಾನ್ ಕೆ.ಅತ್ತಾರ್ ಇದ್ದರು.