ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿ

ಸೊರಬ: ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇರುವಾಗ ರೈತರ ಸಂಕಷ್ಟಗಳಿಗೆ ರಾಜ್ಯ ಸರ್ಕಾರ ಉತ್ತಮ ರೀತಿಯಿಂದ ಸ್ಪಂದಿಸಬೇಕು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಒತ್ತಾಯಿಸಿದರು.

ನೆರೆ ಪೀಡಿತ ಪ್ರದೇಶಗಳಾದ ಗೋಂದಿ, ಅಗಸನಹಳ್ಳಿ, ನೆಲ್ಲಿಕೊಪ್ಪ, ಬಂಕಸಾಣ, ಜಡೆ, ಅಂದವಳ್ಳಿ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ಕೇವಲ ಅಧಿಕಾರಕ್ಕಾಗಿ ರಾಜಕಾರಣಿಗಳು ರೈತರ ಹೆಸರನ್ನು ಬಳಕೆ ಮಾಡುವುದಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿಯ ಜತೆಗೆ ರೈತರ ಹಿತ ಕಾಯಬೇಕು ಎಂದರು.

ಮಳೆಯಿಂದ ಭೀಕರ ಪ್ರವಾಹಕ್ಕೆ ನದಿ ಪಾತ್ರದ ಗ್ರಾಮಗಳು ಹಾಗೂ ಸಾವಿರಾರು ಹೆಕ್ಟೇರ್ ಜಮೀನು ಮುಳಗಡೆಯಾಗಿ ಬೆಳೆಗಳು ಹಾಳಾಗಿವೆ. ಮನೆಗಳು, ಶಾಲಾ ಕಟ್ಟಡ, ಸೇತುವೆಗಳಿಗೆ ಹಾನಿಯಾಗಿದೆ. ಕೂಡಲೆ ಸರ್ಕಾರ ಪರಿಹಾರಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶುಂಠಿಗೂ ಪರಿಹಾರ ಘೊಷಿಸಬೇಕು. ನೆರೆ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ ಹಾಗೂ ಅವುಗಲ ಆರೋಗ್ಯ ಹದಗೆಡುತ್ತಿದೆ. ಈ ಬಗ್ಗೆ ತಕ್ಷಣ ಗಮನಹರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯರಾದ ವೀರೇಶ್ ಕೊಟಗಿ, ಶಿವಲಿಂಗೇಗೌಡ, ತಾರಾ ಶಿವಾನಂದಪ್ಪ, ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಎಚ್.ಗಣಪತಿ, ಕೆ.ಪಿ.ರುದ್ರಗೌಡ, ಪಕ್ಷದ ವಕ್ತಾರ ಎಂ.ಡಿ.ಶೇಖರ್, ಸದಾನಂದ ಗೌಡ, ಕೋಟೆ ಬಸವಂತಪ್ಪ, ಸಂಜೀವ ಇದ್ದರು.

Leave a Reply

Your email address will not be published. Required fields are marked *