More

    ಜನರ ಸಮಸ್ಯೆಗಳಿಗೆ ಸ್ಪಂದಿಸಿ

    ಗೋಕಾಕ, ಬೆಳಗಾವಿ: ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
    ನಗರದ ಶಾಸಕರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಜನರಹಿತಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದರು.

    ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳು ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜನರು ಬಿಡಾಡಿ ದನಗಳ ಬಗ್ಗೆ ಮತ್ತು ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ದೂರುಗಳನ್ನು ನೀಡುತ್ತಿದ್ದಾರೆ. ಹಾಗಾಗಿ, ನಗರಸಭೆ ಅಧಿಕಾರಿಗಳು ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಂಡು ಅವುಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು ಎಂದರು.
    ಸಭೆಯಲ್ಲಿ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಡಿವೈಎಸ್ಪಿ ಮನೋಜಕುಮಾರ ನಾಯಕ, ಸಿಪಿಐಗಳಾದ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೂಡ, ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತರ ಎಂ.ಎಚ್.ಗಜಾಕೋಶ, ಡಾ.ಮೋಹನ ಕಮತ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಇತರರಿದ್ದರು.

    ಗೋಕಾಕ ವರದಿ: ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
    ಶನಿವಾರ ನಗರದಲ್ಲಿ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ 54 ಲಕ್ಷ ರೂ.ಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಸೌಲಭ್ಯ ಕಲ್ಪಿಸುತ್ತಿದೆ. ಸುಸಜ್ಜಿತ ಪಶು ಆಸ್ಪತ್ರೆಗಳು ಸಂಚಾರಿ ಚಿಕಿತ್ಸಾ ಆಂಬುಲೆನ್ಸ್ಸ್‌ಗಳು ಕಾರ್ಯ ನಿರ್ವಹಿಸುತ್ತಿವೆ. ರೈತರು ಸದುಪಯೋಗ ಪಡೆದು ತಮ್ಮ ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಕರೆ ನೀಡಿದರು.

    ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಮೋಹನ ಕಮತ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಭೀಮಶಿ ಭರಮನ್ನವರ, ಡಾ.ಶಶಿಕಾಂತ ಕೌಜಲಗಿ ನಗರಸಭೆ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts