ಜನರ ಹೃದಯದಲ್ಲಿದ್ದಾರೆ ಶರೀಫರು

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಶಿಗ್ಗಾಂವಿ: ಒಳ್ಳೆಯ ವ್ಯಕ್ತಿಗೆ ಜಾತಿಯಿಲ್ಲ ಎಂಬುದನ್ನು ಶ್ರೇಷ್ಠ ದಾರ್ಶನಿಕ ಶರೀಫರು ಸಾಬೀತು ಮಾಡಿದ್ದಾರೆ. ಹೀಗಾಗಿ ಅವರು ಇಂದಿಗೂ ನಾಡಿನ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದರು.

ತಾಲೂಕಿನ ಶಿಶುನಾಳದ ಶರೀಫಗಿರಿಯ ಶರೀಫ ಶಿವಯೋಗೀಶ್ವರ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶರೀಫ ಶಿವಯೋಗಿಗಳ 200ನೇ ಜನ್ಮ ದಿನ, ಶರೀಫ ಶಿವಯೋಗಿ ಪ್ರೌಢಶಾಲೆ ಹಾಗೂ ಗುರುಗೋವಿಂದ ಶಿವಯೋಗಿಗಳ ಪ್ರಸಾದ ನಿಲಯದ ಬಂಗಾರದ ಹಬ್ಬ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶರೀಫಗಿರಿಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಅವಶ್ಯಕ ಎಲ್ಲ ಯೋಜನೆ ಪೂರ್ಣಗೊಳಿಸಲಾಗುವುದು. ವಸತಿ ನಿಲಯದ ಪ್ರಸ್ತಾವನೆ ಸರ್ಕಾರಕ್ಕೆ ಬಂದ ತಕ್ಷಣ ಕೂಡಲೇ ಅನುಮೋದನೆ ನೀಡಲಾಗುವುದು ಎಂದ ಸಚಿವರು, ಅಭಿವೃದ್ಧಿ ಕಾರ್ಯಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡುವುದಾಗಿ ಘೊಷಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಗುರುವಿನ ದೀಕ್ಷೆಯಿಂದ ಮಾತ್ರ ಸಂತರಾಗಲು ಸಾಧ್ಯ. ಅವರಿಂದ ಪಡೆದ ಸಂಸ್ಕಾರ, ವಿದ್ಯೆ ಮಾರ್ಗದರ್ಶನದಿಂದ ಸಮಾಜದಲ್ಲಿ ಪರಿವರ್ತನೆ ಮಾಡಬಹುದು ಎಂಬುದನ್ನು ಶರೀಫರ ಜೀವನ ಚರಿತ್ರೆಯಿಂದ ಅರಿಯಬಹುದು ಎಂದರು.

ಶರೀಫರ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಶರೀಫಗಿರಿಯ ನವೀಕೃತ ಕೆರೆಯ ಸುತ್ತ ಹೊರಾಂಗಣ ಮ್ಯೂಸಿಯಂ, ತತ್ತ್ವ ಪದಗಳನ್ನು ಗ್ರಾನೈಟ್ ಕೆತ್ತನೆಯ ಮೂಲಕ ಬಿತ್ತರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಒಂದು ವರ್ಷ ನಡೆಯುವ ಬಂಗಾರದ ಹಬ್ಬ ಹುಬ್ಬಳ್ಳಿ, ಮೈಸೂರು, ಬೆಂಗಳೂರು, ಸೇರಿ ದೆಹಲಿಯಲ್ಲಿ ಸಾಹಿತ್ಯದ ವಿಮರ್ಶೆ ಮತ್ತು ಚರ್ಚಾಕೂಟದ ಮೂಲಕ ಕೊನೆಗೊಳ್ಳಲಿದ್ದು, ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿಶುವಿನಹಾಳಕ್ಕೆ ಆಹ್ವಾನಿಸಲಾಗುವುದು ಎಂದರು.

ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಶಿಕ್ಷಣ ವ್ಯವಸ್ಥೆ ಇಲ್ಲದ ಕಾಲದಲ್ಲಿ ಶರೀಫರು ನೀಡಿದ ಅದ್ಭುತ ದೇಶೀ ಸಾಹಿತ್ಯ ಜಗತ್ತಿನಲ್ಲೇ ಶ್ರೇಷ್ಠವಾದುದು. ಅವರ ಆದರ್ಶ ಮೈಗೂಡಿಸಿಕೊಂಡಲ್ಲಿ ಜೀವನದೊಳಗೆ ಬದಲಾವಣೆ ಕಾಣಲು ಸಾಧ್ಯ ಎಂದರು.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಧರ್ಮದರ್ಶಿ ಬಿ.ಡಿ. ಹಿರೇಗೌಡರ ಮಾತನಾಡಿದರು.

ಶಿರಹಟ್ಟಿಯ ಫಕ್ಕೀರೇಶ ಸಿದ್ಧರಾಮ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಅಧ್ಯಕ್ಷ ಎಸ್.ಕೆ. ಕರಿಯಣ್ಣವರ, ಮಾಜಿ ಸಂಸದ ಪೊ›.ಐ.ಜಿ. ಸನದಿ, ಟ್ರಸ್ಟ್ ಅಧ್ಯಕ್ಷ ಎಸ್.ಜಿ. ದೇಶಪಾಂಡೆ, ತಾ.ಪಂ. ಉಪಾಧ್ಯಕ್ಷೆ ಪದ್ಮಾವತಿ ಪಾಟೀಲ, ನಾಡೋಜ ಡಾ. ಮಹೇಶ ಜೋಶಿ, ಸರಿಗಮಪ ಕಲಾವಿದ ಹನುಮಂತ ಲಮಾಣಿ, ಎಪಿಎಂಸಿ ಅಧ್ಯಕ್ಷ ಪ್ರೇಮಾಪಾಟೀಲ, ಎಸ್.ಎಲ್. ಪಾಟೀಲ, ವಿ.ಎಂ. ಕಾಮರೆಡ್ಡಿ, ಮಹಾದೇವಪ್ಪ ರಟಗೇರಿ, ದೇವಣ್ಣ ಚಾಕಲಬ್ಬಿ, ಬಸನಗೌಡ್ರ ಮರಿಗೌಡ್ರ, ಶಿವಾನಂದ ಮ್ಯಾಗೇರಿ ಸೇರಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಿ.ಡಿ. ಗಜಾಕೋಶ, ಎಸ್.ಎಂ. ಬ್ಯಾತನಾಳ, ಎಂ.ಬಿ. ಹಿತ್ತಲಮನಿ ನಿರ್ವಹಿಸಿದರು.

ನಾವಿಬ್ಬರೂ ಅಣ್ಣ ತಮ್ಮಂದಿರು
ಅಧಿಕಾರ ಶಾಶ್ವತವಲ್ಲ, ಇವತ್ತು ನಾನು ಸರ್ಕಾರದಲ್ಲಿರಬಹುದು. ನಾಳೆ ನೀವು ಬರಬಹುದು. ಆದರೆ, ಅಭಿವೃದ್ಧಿ ಕಾರ್ಯಗಳು ನಿಲ್ಲಬಾರದು. ನಾವಿಬ್ಬರೂ ಬೇರೆ ಪಕ್ಷದಲ್ಲಿದ್ದರೂ ಅಣ್ಣ-ತಮ್ಮಂದಿರು ಎಂದು ಶಾಸಕ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ ಅಹ್ಮದ್ ಹೇಳಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಪುಷ್ಠಿ ನೀಡುವಂತಿತ್ತು.

ಹನುಮಂತ ಲಮಾಣಿಗೆ ಆರ್ಥಿಕ ನೆರವು
ಸವಣೂರು ತಾಲೂಕಿನ ಚಿಲ್ಲೂರು ಬಡ್ನಿಯ ಕಲಾವಿದ ಹನುಮಂತ ಲಮಾಣಿ ಕಷ್ಟದಲ್ಲಿದ್ದಾರೆ. ಬಡ ಕಲಾವಿದನಿಗೆ ಸಹಾಯ ಹಸ್ತ ನೀಡುವ ಪ್ರಸ್ತಾವನೆ ಮಾಡಿದ ಸಚಿವ ಜಮೀರ್ ಅಹ್ಮದ್ ಸ್ಥಳದಲ್ಲೇ 1 ಲಕ್ಷ ರೂ. ನೀಡಿ ದೇಶೀ ಕಲೆಯನ್ನು ಅದರಲ್ಲೂ ಶರೀಫರ ಸಾಹಿತ್ಯವನ್ನು ದೇಶಕ್ಕೆ ಪರಿಚಯಿಸು ಎಂದು ಹಾರೈಸಿದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...