ಜನಸಾಮಾನ್ಯರಿಗಾಗಿ ಆಯುಷ್ಮಾನ್ ಭಾರತ

ಗದಗ: ಉಳ್ಳವರು ವಿಶೇಷ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಾರೆ. ಅದರಂತೆ ಜನಸಾಮಾನ್ಯರಿಗೂ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಪಡೆಯಬೇಕು ಎಂಬ ಕಾರಣದಿಂದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ ಯೋಜನೆ ಜಾರಿ ಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಜನಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ಮಾನ್ ಭಾರತ ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಪ್ರಾಯೋಜಿತ ಆರೋಗ್ಯ ಯೋಜನೆ ಎಂಬ ಕೀರ್ತಿಗೆ ಪಾತ್ರವಾಗಿದೆ. ದೇಶದ 10 ಕೋಟಿ ಕುಟುಂಬಗಳಿಗೆ ಯೋಜನೆ ಸೌಲಭ್ಯ ದೊರೆಯುತ್ತಿದೆ. ಬಡಜನರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಸಾಧ್ಯವಾಗಿದೆ. ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಲು ಆರೋಗ್ಯ ಇಲಾಖೆಯ ಸರ್ಕಾರಿ ಆಸ್ಪತ್ರೆಗಳು, ವೈದ್ಯರು, ಹಾಗೂ ಆಶಾ ಕಾರ್ಯಕರ್ತೆಯರು ಕಾಳಜಿ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಡಿಎಚ್​ಒ ಡಾ.ವಿರೂಪಾಕ್ಷರಡ್ಡಿ ಮಾದಿನೂರ ಮಾತನಾಡಿದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ವೈ.ಕೆ. ಭಜಂತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಡಾ. ಅರುಂಧತಿ ಕುಲಕರ್ಣಿ, ಡಾ. ಬಿ.ಎಂ. ಗೊಜನೂರು ಇದ್ದರು. ಮಂಜರಿ ಹೊಂಬಳಿ ನಿರೂಪಿಸಿದರು. ಬಸವರಾಜ ಲಾಳಗಟ್ಟಿ ವಂದಿಸಿದರು.

Leave a Reply

Your email address will not be published. Required fields are marked *