More

  ಜನಾಂದೋಲನಕ್ಕೆ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘ ಬೆಂಬಲ

  ಮಡಿಕೇರಿ: ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಕೊಡಗು ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ಜ.೧೧ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ಜನಾಂದೋಲನಕ್ಕೆ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ನವೀದ್ ಖಾನ್ ತಿಳಿಸಿದ್ದಾರೆ.
  ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಗಳು ಅಸಂವಿಧಾನಿಕವಾಗಿದ್ದು, ದೇಶದ ಪೌರತ್ವವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡಲು ಪ್ರಯತ್ನಿಸಲಾಗುತ್ತಿದೆ. ದೇಶಾದ್ಯಂತ ಈ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿದೆ. ಪ್ರಜ್ಞಾವಂತರು ಜಾತಿ, ಮತ, ಬೇದವನ್ನು ಮರೆತು ಒಂದಾಗಿ ಹೋರಾಟ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಜ.೧೧ ರಂದು ಬೃಹತ್ ಜನಾಂದೋಲನ ನಡೆಯಲಿದ್ದು, ಸಂಘದ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಸುದ್ದಿಗೋಷ್ಠಿಯಲ್ಲಿ ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರಿಜ್ವಾನ್, ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್, ಪ್ರಮುಖರಾದ ರಜಾಕ್, ಮಾಣು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts