ಜಯಂತಿ ಅರ್ಥಪೂರ್ಣ ಆಚರಣೆ ನಿರ್ಧಾರ

blank

ಬಾಗಲಕೋಟೆ: ಜಿಲ್ಲೆಯಲ್ಲಿ ಏ.೪ ರಂದು ಆಚರಿಸಲ್ಪಡುವ ಡಾ.ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಹಾಗೂ ಏ.೧೪ ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರವರ ೧೩೪ನೇ ಜಯಂತಿ ಜಿಲ್ಲಾಡಳಿತದಿಂದ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರವರ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏ. ೪ ರಂದು ಬೆಳಗ್ಗೆ ೯ ಗಂಟೆಗೆ ಸೆಕ್ಟರ ನಂ.೧೨ರಲ್ಲಿರುವ ದುರ್ಗಾದೇವಿ ದೇವಸ್ಥಾನದಿಂದ ಜಗಜೀವನರಾಂ ಭವನದ ವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಜಗಜೀವರಾಂ ಭವನದಲ್ಲಿ ಉಪನ್ಯಾಸ ಒಳಗೊಂಡ0ತೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಗಜೀವನರಾಂ ಅವರ ಕುರಿತು ಮಾತನಾಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರವರ ಜಯಂತಿ ಏ.೧೪ ರಂದು ಬೆಳಗ್ಗೆ ೧೦ ಗಂಟೆಗೆ ಸೆಕ್ಟರ ನಂ.೪೫ರಲ್ಲಿರುವ ಶ್ರೀಮಾತೆ ರಮಾಬಾಯಿ ಅಂಬೇಡ್ಕರ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಿವಿಧ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ನಂತರ ಅಂಬೇಡ್ಕರ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ. ಅಂಬೇಡ್ಕರವರ ಜೀವನ ಚರಿತ್ರೆಯ ಕುರಿತು ಮಾತನಾಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸುವಂತೆ ಅಽಕಾರಿಗಳಿಗೆ ಸೂಚನೆ ನೀಡಿದರು.

ಡಾ.ಜಗಜೀವನರಾಂ ಹಾಗೂ ಡಾ.ಅಂಬೇಡ್ಕರವರ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಽಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಅಲ್ಲದೇ ಸಮುದಾಯದ ವಿವಿಧ ಸಂಘಟನೆಯ ಮುಖಂಡರು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಽಕಾರಿ ಜಾನಕಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಸಮುದಾಯದ ಮುಖಂಡರಾದ ಮಹಾದೇವ ಹಾದಿಮನಿ, ಚಂದ್ರಶೇಖರ ಚಲವಾದಿ, ಯಲ್ಲಪ್ಪ ಸಂಖ್ಯಾನವರ, ವಿವೇಕಾನಂದ ಗರಸಂಗಿ, ಹನಮಪ್ಪ ಚಲವಾದಿ, ಮನೋಹರ ಕದಂ, ಸಂಜೀವ ಐಹೊಳ್ಳಿ, ಶ್ರೀಧರ ಚಿಕ್ಕಲಕಿ, ಜಯವಂತ ಗುದಿಗೆನ್ನವರ, ರಾಜು ಮನ್ನಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…