17.8 C
Bengaluru
Wednesday, January 22, 2020

ಜಾತ್ರೆಯ ಯಶಸ್ಸಿಗೆ ಸಹಕರಿಸಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಮುಂಡರಗಿ: ಮನುಷ್ಯನು ಬದುಕಿನಲ್ಲಿ ಸೇವಾ ಮನೋಭಾವ ಹೊಂದಿ ಉತ್ತಮ ವಿಚಾರ ಚಿಂತನೆಗಳ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ಜಗದ್ಗುರು ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಗುರುವಾರ ರಾತ್ರಿ ಜರುಗಿದ ಶ್ರೀಮಠದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ ಹಾಗೂ ಶಿವಾನುಭವದ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು. ಶ್ರೀಮಠದ ಜಾತ್ರಾ ಮಹೋತ್ಸವವನ್ನು ಎಲ್ಲರೂ ಒಗ್ಗೂಡಿ ಆಚರಿಸಬೇಕು. ಜಾತ್ರೆಯ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಬೇಕು. ನಾವೆಲ್ಲ ಒಂದೇ ಎನ್ನುವ ಭಾವದಲ್ಲಿ ಜಾತ್ರೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಶ್ರೀ ಕೇದರನಾಥಸ್ವಾಮಿ ಶಂಭುಲಿಂಗಯ್ಯ ಮಾತನಾಡಿ, 12ನೇ ಶತಮಾನದ ಶರಣ ಪರಂಪರೆಯ ತತ್ತ್ವಾದರ್ಶಗಳು ಪ್ರತಿಯೊಬ್ಬರ ಬದುಕಿಗೆ ಮಾರ್ಗದರ್ಶನ ನೀಡುತ್ತವೆ. ಶರಣರು ಹಾಕಿಕೊಟ್ಟಿರುವ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. ಶ್ರೀ ಚನ್ನಬಸವ ದೇವರು ಮಾತನಾಡಿದರು. ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಪ್ಪ ಕೊರಡಕೇರಿ ಸ್ಮರಣಾರ್ಥ ಶಿವಾನುಭವದ ಭಕ್ತಿಸೇವೆ ವಹಿಸಿಕೊಂಡಿದ್ದ ಅವರ ಕುಟುಂಬದವರನ್ನು ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು. ಈ ವೇಳೆ ನೂತನವಾಗಿ ಜಿಲ್ಲಾ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾದ ಶರಣಪ್ಪ ಕುಬಸದ ಅವರಿಗೆ ಅನ್ನದಾನೀಶ್ವರ ಶ್ರೀಗಳು ಸನ್ಮಾನಿಸಿದರು.

ಡಾ.ಬಿ.ಜಿ. ಜವಳಿ, ರಾಮಸ್ವಾಮಿ ಹೆಗ್ಗಡಾಳ, ಎಚ್. ವಿರೂಪಾಕ್ಷಗೌಡ್ರ, ಅಂದಪ್ಪ ಗೋಡಿ, ಶಂಕ್ರಪ್ಪ ಬಾರಿಕಾಯಿ, ಕಾಂತರಾಜ ಹಿರೇಮಠ, ಡಿ.ಸಿ. ಮಠದ, ಎಸ್.ಬಿ. ಹಿರೇಮಠ, ಡಾ.ಪಿ.ಬಿ. ಹಿರೇಗೌಡ್ರ, ಮಂಜುನಾಥ ಇಟಗಿ, ಟಿ.ಬಿ. ದಂಡಿನ, ಸಂತೋಷ ಹಿರೇಮನಿ, ವಿ.ಎಸ್. ಗಟ್ಟಿ, ಶಿವಯೋಗಿ ಕೊಪ್ಪಳ, ಮಹಾಂತೇಶ ಕೊರಡಕೇರಿ, ಎ.ವಿ. ಹಳ್ಳಿಕೇರಿ, ಪವನ ಚೋಪ್ರಾ, ಮಂಜುನಾಥ ಮುಧೋಳ, ವೀರೇಶ ಸಜ್ಜನರ, ಇತರರು ಉಪಸ್ಥಿತರಿದ್ದರು.

ಚನ್ನವೀರಯ್ಯ ಹಿರೇಮಠ ಹಾಗೂ ಜಗದ್ಗುರು ಅನ್ನದಾನೀಶ್ವರ ಅಕ್ಕನ ಬಳಗದವರು ಪ್ರಾರ್ಥಿಸಿದರು. ಶಿಕ್ಷಕ ಎಸ್.ಎಸ್. ಇನಾಮತಿ ಕಾರ್ಯಕ್ರಮ ನಿರ್ವಹಿಸಿದರು.

ಪದಾಧಿಕಾರಿಗಳ ಆಯ್ಕೆ

ಪೂಜ್ಯರ ಹಾಗೂ ಶ್ರೀಮಠದ ಭಕ್ತರ ಸಮ್ಮುಖದಲ್ಲಿ 2020 ಫೆ. 7, 8 ಮತ್ತು 9 ರಂದು ನಡೆಯುವ ಜಗದ್ಗುರು ಅನ್ನದಾನೀಶ್ವರ ಮಠದ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ಪುರಸಭೆ ಸದಸ್ಯ ಪವನ ಮೇಟಿ, ಕಾರ್ಯದರ್ಶಿಯಾಗಿ ಪುರಸಭೆ ಸದಸ್ಯ ರಾಜಾಬಕ್ಷೀ ಬೆಟಗೇರಿ ಅವರನ್ನು ಆಯ್ಕೆ ಮಾಡಲಾಯಿತು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...