ಜಾಲತಾಣಗಳು ಸದುದ್ದೇಶಕ್ಕೆ ಬಳಕೆಯಾಗಲಿ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ರಾಮನಗರ: ವಾಟ್ಸ್​ಆಪ್, ಫೇಸ್​ಬುಕ್​ನಲ್ಲಿ ಕಾಲಕರಣ ಮಾಡುವ ಬದಲು ಜ್ಞಾನಾರ್ಜನೆಗೆ ಮತ್ತು ನಿರ್ದಿಷ್ಟ ಗುರಿ ಸಾಧನೆಗೆ ಪೂರಕವಾಗುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಲೇಖಕ ಮತ್ತು ಅಂಕಣಕಾರ ಟಿ.ಜಿ. ಶ್ರೀನಿಧಿ ಕರೆ ನೀಡಿದರು.

ತಾಲೂಕಿನ ಲಕ್ಷ್ಮೀಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ‘ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಕಂಪ್ಯೂಟರ್ ಮತ್ತು ಮೊಬೈಲ್​ಗೆ ಹೋಲಿಸಿದರೆ ಕಾರ್ಯಚಟುವಟಿಕೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಂತ್ರಜ್ಞಾನ ಹುಟ್ಟಿರುವುದು ಇಂಗ್ಲಿಷ್ ಭಾಷೆ ಹೊಂದಿರುವ ದೇಶಗಳಲ್ಲಿ. ಹಾಗಾಗಿ ಕಂಪ್ಯೂಟರ್​ನ ಸಂವಹನ ಮಾಧ್ಯಮ ಇಂಗ್ಲಿಷ್ ಆಗಿತ್ತು. ಆದರೆ ಕಾಲ ಬದಲಾಗಿದೆ. ತಂತ್ರಜ್ಞಾನಗಳ ಸೌಲಭ್ಯ ಹಳ್ಳಿಗಳಿಗೂ ವ್ಯಾಪಿಸುತ್ತಿರುವುದರಿಂದ ಸ್ಥಳೀಯ ಭಾಷೆಗಳಿಗೂ ಮಹತ್ವ ಪಡೆಯುವಂತಾಗಿದೆ. ಕನ್ನಡದಲ್ಲೂ ಸಾಕಷ್ಟು ಸಾಫ್ಟ್​ವೇರ್​ಗಳು, ಅಪ್ಲಿಕೇಷನ್​ಗಳು ಬಂದಿವೆ. ಕನ್ನಡದ ಮೂಲಕ ಇನ್ನು ಪರಿಣಾಮಕಾರಿಯಾಗಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಕಾರ್ಯವಾಗುತ್ತಿದೆ. ಹಾಗಾಗಿ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದಬೇಕು. ಗುರಿಯ ಸಾಧನೆಗೆ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳುವ ಕಾರ್ಯವಾಗಬೇಕೆಂದು ತಿಳಿಸಿದರು.

ಕಂಪ್ಯೂಟರ್​ನ ಹುಟ್ಟಿನಿಂದ ಹಿಡಿದು ಇಂದಿನ ತಂತ್ರಜ್ಞಾನ ಬೆಳವಣಿಗೆ, ಆವಿಷ್ಕಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಶ್ರೀನಿಧಿ ವಿವರಿಸಿದರು.

ಕಾಲೇಜು ಪ್ರಾಂಶುಪಾಲ ಜಿ. ದಯಾನಂದ ಮಾತನಾಡಿ, ಪಠ್ಯದ ಜತೆಗೆ ಸಾಮಾನ್ಯಜ್ಞಾನ ಮತ್ತು ತಂತ್ರಜ್ಞಾನಗಳ ಬಗ್ಗೆಯೂ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಕೊಡಿಸುವ ಕಾರ್ಯವಾಗಬೇಕೆಂಬ ಉದ್ದೇಶದಿಂದ ತಿಂಗಳಿಗೊಂದು ಕಾರ್ಯಕ್ರಮ ರೂಪಿಸುವ ನಿರ್ಧಾರ ಮಾಡಲಾಗಿದೆ. ಮೊದಲ ಕಾರ್ಯಕ್ರಮವನ್ನು ಮಾಹಿತಿ ತಂತ್ರಜ್ಞಾನದ ಬಗ್ಗೆ ಟಿ.ಜಿ. ಶ್ರೀನಿಧಿ ಅವರು ಅತ್ಯುತ್ತಮವಾಗಿ ನಡೆಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಕೂಡ ತಾಳ್ಮೆಯಿಂದ ಎಲ್ಲ ವಿಷಯವನ್ನು ಕೇಳಿ, ಅರ್ಥೈಸಿಕೊಳ್ಳಬೇಕು ಎಂದರು.

ಇ-ಜ್ಞಾನ ಟ್ರಸ್ಟ್ ಮೂಲಕ ಟಿ.ಜಿ.ಶ್ರೀನಿಧಿ ಅವರು ಕಾಲೇಜು ಗ್ರಂಥಾಲಯಕ್ಕೆ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿ ಕೆಲ ಅಮೂಲ್ಯ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಉಪನ್ಯಾಸಕ ನವೀನ್ ಹಳೇಮನೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...