ಜಿಂಕೆ ಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ

ಮುಂಡಗೋಡ: ಜಿಂಕೆ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕಾತೂರ ವಲಯ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಗುರುವಾರ ರಾತ್ರಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ತಾಲೂಕಿನ ಚಿಗಳ್ಳಿ ಗ್ರಾಮದ ಮಂಜುನಾಥ ನಾಳೆಕರ, ಶಿಂಗನಳ್ಳಿಯ ಬರ್ಮಗೌಡ ಪಾಟೀಲ ಬಂಧಿತ ಆರೋಪಿಗಳು. ಕಾತೂರನಿಂದ ಜಿಂಕೆ ಮಾಂಸ ಸಾಗಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಕಾತೂರ ವಲಯ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದರು. ಆರೋಪಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್.ಜಿ. ಭಟ್ಟ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ ಜಿ.ಆರ್. ನಿರ್ದೇಶನದಲ್ಲಿ ಕಾತೂರ ವಲಯ ಅರಣ್ಯಾಧಿಕಾರಿ ಅಜಯ ನಾಯ್ಕ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದರು.

Leave a Reply

Your email address will not be published. Required fields are marked *