25.5 C
Bangalore
Monday, December 16, 2019

ಜಿಲ್ಲಾದ್ಯಂತ ಮಕರ ಸಂಕ್ರಾಂತಿ ಆಚರಣೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಹಾಸನ: ಸೂರ್ಯ ದೇವ ಪಥ ಬದಲಿಸಿ ಜನಜೀವನದ ರೀತಿ ನೀತಿಗಳನ್ನು ನಿರ್ದೇಶಿಸುವ ಮಕರ ಸಂಕ್ರಾಂತಿಯನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಎಳ್ಳು-ಬೆಲ್ಲ ಬೀರುವ ಮೂಲಕ ಸಡಗರಿಂದ ಆಚರಿಸಲಾಯಿತು.
ಮನೆಯಂಗಳದಲ್ಲಿ ರಂಗೋಲಿ, ಬಾಗಿಲಿಗೆ ತಳಿರು ತೋರಣ, ಹೊಸ ಉಡುಪು, ಎಲ್ಲರ ಕೈಯಲ್ಲೂ ಎಳ್ಳು ಬೆಲ್ಲ ಕಂಡವು. ಪರಸ್ಪರ ಭೇಟಿಯಾಗಿ ಎಳ್ಳು-ಬೆಲ್ಲ ವಿತರಣೆ ನಂತರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು. ಜೀವನದಲ್ಲಿ ಎದುರಾದ ಕಹಿ ಘಟನೆಗಳನ್ನು ಮರೆತು ಒಳಿತನ್ನು ಬಯಸೋಣ ಎಂಬ ಸಂದೇಶ ಸಾರುವ ಸಂಕ್ರಾಂತಿಯ ಸಂಭ್ರಮ ಜೋರಾಗಿತ್ತು.
ಅಲ್ಲಲ್ಲಿ ವಿಶೇಷ ಪೂಜೆ: ಮಕರ ಸಂಕ್ರಾಂತಿ ಪ್ರಯುಕ್ತ ನಗರದ ವಿವಿಧ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಗಣಪತಿ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ದೇವರ ದರ್ಶನ ಪಡೆದರು.
ಹಾಸನದ ಬಿಎಂ ರಸ್ತೆಯ ಉಡಸಲಮ್ಮ, ಮೈಲಾರಲಿಂಗೇಶ್ವರ, ರಿಂಗ್ ರಸ್ತೆಯಲ್ಲಿನ ಶ್ರೀ ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜರುಗಿದವು. ಸರದಿ ಸಾಲಿನಲ್ಲಿ ಬಂದು ಭಕ್ತರಿಗೆ ಎಳ್ಳು-ಬೆಲ್ಲ ವಿತರಿಸಲಾಯಿತು.
ಸುಗ್ಗಿಯ ಕಾಲದಲ್ಲಿ ಬರುವ ಸಂಕ್ರಾಂತಿ ಎಂದರೆ ರೈತರಿಗೆ ಎಲ್ಲಿಲ್ಲದ ಹರ್ಷ. ಫಸಲು ಉತ್ತಮವಾಗಿ ಬರಲಿ ಎಂದು ಭೂಮಿ ತಾಯಿಯಲ್ಲಿ ಕೋರಿದರು. ಅವರೇಕಾಯಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಇಟ್ಟು ವಿಶೇಷ ಪೂಜೆ ಮಾಡಿದರು.
ಆಲೂರು: ಸಂಕ್ರಾಂತಿ ಪ್ರಯುಕ್ತ ಕಡುಬು, ಚಿಲುಕವರೆಕಾಳು ಸಾಂಬಾರು ತಯಾರಿಕೆ ಸಂಭ್ರಮ ಸಡಗರದಿಂದಲೇ ನಡೆಯಿತು.
ಅಕ್ಕಿ ತೊಳೆದು ಹಿಟ್ಟು ಮಾಡಿ ಕಡುಬನ್ನು ತಯಾರಿಸಿ ಕುಟುಂಬದವರೆಲ್ಲ ಸ್ವೀಕರಿಸಿದರು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಎಳ್ಳುಬೆಲ್ಲ ಸಾರ್ವಜನಿಕರು ಹಂಚಿ ಪರಸ್ಪರ ಶುಭಾಶಯ ಕೋರಿದರು. ಕೆಲವೆಡೆ ಜಾನುವಾರುಗಳ ಮೈತೊಳೆದು ಮೈಮೇಲೆ ಅಕ್ಕಿ ಹಿಟ್ಟಿನ ಬಣ್ಣದ ಚಿತ್ತಾರ ಮೂಡಿಸಿ ಕೊಂಬುಗಳಿಗೆ ಬಣ್ಣ ಬಳಿದು ಸಿಂಗರಿಸಿ, ಕೃಷಿ ಚಟುವಟಿಕೆಗಳಿಗೆ ಉಪಯೋಗಿಸುವ ನೇಗಿಲು, ನೊಗ, ಕುಂಟೆ ಇತರ ಉಪಕರಣಗಳಿಗೆ ಪೂಜೆ ಸಲ್ಲಿಸಿದರು.
ಅರಕಲಗೂಡು: ತಾಲೂಕಿನಲ್ಲಿ ಹೊಸ ಸುಗ್ಗಿಯ ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ-ಸಂಭ್ರಮಗಳಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು. ಪಟ್ಟಣದ ಐತಿಹಾಸಿಕ ಲಕ್ಷ್ಮೀ ನರಸಿಂಹಸ್ವಾಮಿ, ಪುರಾಣ ಪ್ರಸಿದ್ಧ್ದ ಅಮೃತೇಶ್ವರ ಸ್ವಾಮಿ ದೇವಾಲಯಗಳಲ್ಲಿ ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮುಂತಾದ ಧಾರ್ಮಿಕ ಕೈಂಕರ್ಯಗಳನ್ನು ನಡೆಸಲಾಯಿತು. ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಜನರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಬದುಕಿನಲ್ಲಿ ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದರು. ಮಹಿಳೆಯರು ಮತ್ತು ಬಂಧುಗಳು ಪರಸ್ಪರ ಎಳ್ಳು, ಬೆಲ್ಲ ಬೀರುವ ಶುಭಾಶಯ ವಿನಿಮಯ ಮಾಡಿಕೊಂಡರು.

- Advertisement -

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...