ಚಿತ್ರದುರ್ಗ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಪಂ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ
ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಡಿಸಿ ಆರ್.ವಿನೋತ್ ಪ್ರಿಯಾ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ,ಜಿಲ್ಲೆಯಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಜಿಲ್ಲಾದ್ಯಂತ ಶೇ. ೧೦೦ ಪ್ರಮಾಣದಲ್ಲಿ ಮತದಾರ ನೋಂದಣಿ ಆಗ ಬೇಕೆಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ , ಜಿಪಂ ಸಿಇಒ ಸಿ.ಸತ್ಯಭಾಮಾ ಮಾತನಾಡಿ ಸುಭದ್ರ ಪ್ರಜಾಪ್ರಭುತ್ವ ಕ್ಕೆಕಡ್ಡಾಯ ಮತದಾನಕ್ಕೆ ಸಲಹೆ ನೀಡಿದರು.
ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಮೊದಲಾದ ಅಧಿಕಾರಿಗಳಿದ್ದರು.
ಪ್ರೌಢಶಾಲೆ, ಪಿಯು ಹಾಗೂ ಪದವಿಯ ನೂರೈವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು.