More

  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

  ಹಾಸನ: ಯಾವುದೇ ಬೇಧ ಭಾವವಿಲ್ಲದೆ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಂಡ ಏಕೈಕ ಮಹಿಳಾ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಹೇಳಿದರು.
  ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ವತಿಯಿಂದ ಮಂಗಳವಾರ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಆಚರಿಸಿ ಮಾತನಾಡಿದ ಅವರು, ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರು. ದೇಶದ ಭದ್ರತೆ, ಆರ್ಥಿಕತೆ, ಪ್ರಜಾಪ್ರಭುತ್ವ ಮತ್ತು ವಿದೇಶಾಂಗ ನೀತಿಗೆ ಅಪಾರ ಕೊಡುಗೆಗಳನ್ನು ನೀಡಿದವರು. ಸರ್ವ ಧರ್ಮ ಸಮಬಾಳು ಎಂದು ಎಲ್ಲ ಧರ್ಮವನ್ನು ಸಮನಾಗಿ ಕಾಣಬೇಕೆಂಬ ಪ್ರತಿಪಾದನೆ ಮಾಡಿದವರು. ಅವರ ಆದರ್ಶಗಳನ್ನು ಪಾಲಿಸುತ್ತ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಲು ಮುಂದಾಗೋಣ ಎಂದು ಕರೆ ನೀಡಿದರು.
  ಮಹಿಳಾ ಪ್ರಧಾನಿಯಾಗಿ ಈ ದೇಶವನ್ನು ಅತ್ಯುನ್ನತವಾಗಿ ಮುನ್ನಡೆಸಿಕೊಂಡು ಬಂದು ಇಡೀ ವಿಶ್ವಕ್ಕೆ ಮಾದರಿ ಆಗಿರುವ ಇಂದಿರಾ ಗಾಂಧಿ ಅವರ ಆಡಳಿತ ಇಡೀ ವಿಶ್ವಕ್ಕೆ ಮಾದರಿ. ಅವರ ಹೆಸರನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವ ಕೆಲಸವನ್ನು ಮಾಡುವುದಾಗಿ ಹೇಳಿದರು.
  ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಆರೀಫ್ ಸೇರಿದಂತೆ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts